ಹತ್ತು ಸಾವಿರ ಶಿಕ್ಷಕರ ನೇಮಕಾತಿಗೆ ಸರಕಾರ ಚಿಂತನೆ: ಮಧು ಬಂಗಾರಪ್ಪ
x

ಹತ್ತು ಸಾವಿರ ಶಿಕ್ಷಕರ ನೇಮಕಾತಿಗೆ ಸರಕಾರ ಚಿಂತನೆ: ಮಧು ಬಂಗಾರಪ್ಪ

ಈ ವರ್ಷ 10 ಸಾವಿರ ಶಿಕ್ಷಕರ ಭರ್ತಿಗೆ ಸರಕಾರ ಚಿಂತನೆ ನಡೆಸುತ್ತಿರುವುದಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್ ಮಧು ಬಂಗಾರಪ್ಪ ತಿಳಿಸಿದ್ದಾರೆ.


Click the Play button to hear this message in audio format

ಕಲಬುರಗಿ: ಈ ವರ್ಷ 10 ಸಾವಿರ ಶಿಕ್ಷಕರ ಭರ್ತಿಗೆ ಸರಕಾರ ಚಿಂತನೆ ನಡೆಸುತ್ತಿರುವುದಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಕಲುಬುರಗಿಯ ಕೆ.ಕೆ.ಆರ್.ಟಿ.ಬಿ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ನಮ್ಮ ಸರ್ಕಾರ ಬಂದ ನಂತರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಚುರಕುಗೊಳಿಸಿ, 14 ಸಾವಿರ ಶಿಕ್ಷಕರ ನೇಮಕಾತಿಗೆ ಮಾಡಿಕೊಂಡಿದ್ದು, ಇದರಲ್ಲಿ 12ಸಾವಿರ ಜನರು ಈಗಾಗಲೇ ಶಾಲೆಗೆ ಹಾಜರಾಗಿದ್ದಾರೆ ಎಂದು ತಿಳಿಸಿದ್ದಾರೆ.

ಆಗಾಗ ಶಿಕ್ಷಕರ ನಿವೃತ್ತದ ಕಾರಣ ಶಿಕ್ಷಕರ ಕೊರತೆ ಹೆಚ್ಚಾಗಿದೆ. ಈ ವರ್ಷ ಇನ್ನು 10 ಸಾವಿರ ಶಿಕ್ಷಕರ ಭರ್ತಿಗೆ ಚಿಂತನೆ ನಡೆಸಲಾಗಿದೆ ಎಂದು ಸಚಿವರು ಹೇಳಿದರು.

ಇನ್ನು ಪ್ರಸಕ್ತ 2024-25 ನೇ ಸಾಲಿನ ಆಯವ್ಯಯದಲ್ಲಿ ರಾಜ್ಯದಾದ್ಯಂತ 500 ಕರ್ನಾಟಕ ಪಬ್ಲಿಕ್ ಘೋಷಿಸಿದ್ದು, ಇದರಲ್ಲಿ 137 ಶಾಲೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ಆರಂಭವಾಗಲಿದೆ. ಪ್ರಸ್ತುತ ರಾಜ್ಯದಲ್ಲಿ 297 ಕೆ.ಪಿ,ಎಸ್ ಶಾಲೆ ಇದ್ದು, ಇದರ ಜೊತೆಗೆ ಈ ವರ್ಷ 500 ಶಾಲೆ ಆರಂಭಿಸಲಾಗುವುದು ಎಂದರು.

ದ್ವಿಭಾಷಾ ಬೋಧನೆ, ವಿಷಯ ಶಿಕ್ಷಕರ ಜೊತೆಗೆ ದೈಹಿಕ, ಸಂಗೀತ ಶಿಕ್ಷಕರು, ಉತ್ತಮ ಮೂಲಸೌಕರ್ಯ, ಶಾಲಾ ಮೈದಾನ ಪರಿಕಲ್ಪನೆ ಒಳಗೊಂಡಿರುವ ಕೆ,ಪಿ.ಎಸ್ ಶಾಲೆಗೆ ಬೇಡಿಕೆ ಹೆಚ್ಚಿರುವ ಕಾರಣ ಮುಂದಿನ ಮೂರು ವರ್ಷದಲ್ಲಿ ಎರಡು ಗ್ರಾಮ ಪಂಚಾಯತ್‌ಗಳಿಗೆ ತಲಾ ಒಂದರಂತೆ 3000 ಕೆ.ಪಿ.ಎಸ್ ಶಾಲೆ ಆರಂಭಿಸಲು ನಿರ್ಧರಿಸಲಾಗಿದೆ ಎಂದರು.

Read More
Next Story