Government orders to allow final darshan at Rabindra Kalakshetra, conduct funeral with honors
x

ಸಾಹಿತಿ ಎಸ್‌.ಎಲ್‌. ಭೈರಪ್ಪ

ಎಸ್‌.ಎಲ್‌.ಭೈರಪ್ಪ ನಿಧನ: ನಾಳೆ ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ

ಮೈಸೂರಿನ ಕಲಾಮಂದಿರದಲ್ಲಿ ಶುಕ್ರವಾರ ಸಾರ್ವಜನಿಕರ ದರ್ಶನಕ್ಕಾಗಿ ವ್ಯವಸ್ಥೆ ಮಾಡಲಾಗುವುದು. ನಂತರ ಬ್ರಾಹ್ಮಣ ಸಂಪ್ರದಾಯದಂತೆ ಅಂತ್ಯ ಸಂಸ್ಕಾರ ನಡೆಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.


Click the Play button to hear this message in audio format

ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಗುರುವಾರ ಖ್ಯಾತ ಕಾದಂಬರಿಕಾರ ಎಸ್‌.ಎಲ್‌. ಭೈರಪ್ಪ ಅವರ ಪಾರ್ಥೀವ ಶರೀರದ ಅಂತಿಮ ದರ್ಶನ ವ್ಯವಸ್ಥೆ ಮಾಡಲಾಗಿದೆ. ಭೈರಪ್ಪ ಅವರ ಹಿರಿಯ ಪುತ್ರ ಲಂಡನ್‌ನಲ್ಲಿದ್ದು, ಗುರುವಾರ ಮಧ್ಯಾಹ್ನ ಬೆಂಗಳೂರಿಗೆ ಬರುವ ಸಾಧ್ಯತೆ ಇದೆ. ಮಧ್ಯಾಹ್ನ 2 ಗಂಟೆಯ ನಂತರ ಪಾರ್ಥೀವ ಶರೀರವನ್ನು ಮೈಸೂರಿಗೆ ಕೊಂಡೊಯ್ಯಲಾಗುವುದು.

ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಗುರುವಾರ ಬೆಳಿಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಇರಲಿದೆ. ಶುಕ್ರವಾರ ಮೈಸೂರಿನ ಕಲಾಮಂದಿರದಲ್ಲಿ ಸಾರ್ವಜನಿಕ ದರ್ಶನದ ಬಳಿಕ ಬ್ರಾಹ್ಮಣ ಸಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ. ಮೃತರಿಗೆ ಪತ್ನಿ ಸರಸ್ವತಿ ಹಾಗೂ ಇಬ್ಬರು ಪುತ್ರರು ‌ಇದ್ದಾರೆ.

ತಾವೇ ಹೂಳು ತೆಗೆಸಿದ್ದ ಕೆರೆಯಲ್ಲಿ ಅಸ್ಥಿ ವಿಸರ್ಜನೆ

ಎಸ್‌.ಎಲ್‌. ಭೈರಪ್ಪನವರು ಈ ಹಿಂದೆ ಹಾಸನದ ಚನ್ನರಾಯಪಟ್ಟಣದ ಸಂತೇಶಿವರದ ಕೆರೆಯಲ್ಲಿ ತಾವೇ ಹೂಳು ತೆಗೆಸಿದ್ದರು. ಇದೀಗ ಆ ಕೆರೆ ತುಂಬಿದ್ದು ಸುತ್ತಲಿನ ಗ್ರಾಮಗಳಲ್ಲಿ ಅಂತರ್ಜಲ ಹೆಚ್ಚಾಗುವಂತೆ ಮಾಡಿದೆ. ಬಹಳ ಮುತುವರ್ಜಿ ವಹಿಸಿ ಅಭಿವೃದ್ಧಿಪಡಿಸಿದ್ದ ಕೆರೆಗೆ ಅವರ ಚಿತಾಭಸ್ಮವನ್ನು ವಿಸರ್ಜಿಸಲು ಕುಟುಂಬದವರು ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಗಣ್ಯರ ಸಂತಾಪ

ಕನ್ನಡ ಸಾಹಿತ್ಯದ ಹಿರಿಯ ಕಾದಂಬರಿಕಾರ, ಲೇಖಕ ಎಸ್‌.ಎಲ್‌. ಭೈರಪ್ಪನವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ, ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ, ಸಂಸದ ಬಸವರಾಜ ಬೊಮ್ಮಾಯಿ, ರಾಜ್ಯಸಭಾ ಸದಸ್ಯೆ ಸುಧಾಮೂರ್ತಿ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

Read More
Next Story