BDA Scam| ಬಿಎಸ್‌ವೈ ತನಿಖೆಗೆ ಮತ್ತೊಮ್ಮೆ ರಾಜ್ಯಪಾಲರ ಅನುಮತಿ ಕೋರಿದ ಸರ್ಕಾರ
x
ಬಿಎಸ್‌ ಯಡಿಯೂರಪ್ಪ

BDA Scam| ಬಿಎಸ್‌ವೈ ತನಿಖೆಗೆ ಮತ್ತೊಮ್ಮೆ ರಾಜ್ಯಪಾಲರ ಅನುಮತಿ ಕೋರಿದ ಸರ್ಕಾರ

ಬಿಡಿಎ ಹೌಸಿಂಗ್​ ನಿರ್ಮಾಣದ ಭ್ರಷ್ಟಚಾರ ನಡೆದಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿ.ಎಂ ಬಿ.ಎಸ್‌ ಯಡಿಯೂರಪ್ಪ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಬೇಕೆಂದು ರಾಜ್ಯ ಸರ್ಕಾರ, ರಾಜ್ಯಪಾಲರಿಗೆ ಮನವಿ ಮಾಡಿದೆ.


Click the Play button to hear this message in audio format

ಬೆಂಗಳೂರು ಅಭಿವೃದ್ಧಿ ಪ್ರಾದಿಕಾರದ ​ ನಿರ್ಮಾಣದ ಭ್ರಷ್ಟಚಾರ ನಡೆದಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿ.ಎಂ ಬಿ.ಎಸ್‌ ಯಡಿಯೂರಪ್ಪ ವಿರುದ್ಧ ಭ್ರಷ್ಟಾಚಾರ ಆರೋಪಗಳ ತನಿಖೆಗೆ ಪೂರ್ವಾನುಮತಿ ನೀಡುವಂತೆ ನೀಡಬೇಕೆಂದು ರಾಜ್ಯ ಸರ್ಕಾರ, ರಾಜ್ಯಪಾಲರಿಗೆ ಶಿಫಾರಸು ಮಾಡಿದೆ.

ಯಡಿಯೂರಪ್ಪ ಹಾಗೂ ಅವರು ಕುಟುಂಬದ ವಿರುದ್ಧ ಗಂಭೀರ ಭ್ರಷ್ಟಾಚಾರ ಆರೋಪಗಳ ತನಿಖೆಗೆ ಪೂರ್ವಾನುಮತಿ ನೀಡುವಂತೆ ರಾಜ್ಯಪಾಲರಿಗೆ ಶಿಫಾರಸು ಮಾಡಲು ರಾಜ್ಯ ಸಚಿವ ಸಂಪುಟ ಇತ್ತೀಚೆಗೆ ನಿರ್ಣಯಿಸಿತ್ತು.

ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಹಾಂ ಅವರು ಯಡಿಯೂರಪ್ಪ ಹಾಗೂ ಅವರ ಕುಟುಂಬದ ವಿರುದ್ಧ 16 ಗಂಭೀರ ಆರೋಪಗಳನ್ನು ಮಾಡಿದ್ದರು. ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವಂತೆ ಈ ಹಿಂದೆ ರಾಜ್ಯ ಸರ್ಕಾರ ಕೋರಿತ್ತು. ಆದರೆ, ರಾಜ್ಯಪಾಲರು ಅನುಮತಿ ನಿರಾಕರಿಸಿದ್ದರು. ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆ ಪ್ರಕರಣದ ತನಿಖೆಗೆ ಪೂರ್ವಾನುಮತಿ ನೀಡುವಂತೆ ರಾಜ್ಯಪಾಲರಿಗೆ ಮತ್ತೊಮ್ಮೆ ಶಿಫಾರಸು ಮಾಡಲು ನಿರ್ಧರಿಸಿತ್ತು.

ಏನಿದು ಪ್ರಕರಣ?

ಎಂ.ಎಸ್ ರಾಮಲಿಂಗಂ ಕನ್‌ಸ್ಟ್ರಕ್ಷನ್‌ ಕಂಪನಿಯ ಅಕ್ರಮ ಬಗ್ಗೆ ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಾಹಂ ಅವರು 2020ರ ನ.19ರಂದು ಯಡಿಯೂರಪ್ಪ ಮತ್ತು ವಿಜಯೇಂದ್ರ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆ (PMLA) ಅಡಿ ಎಸಿಬಿಗೆ ದೂರು ನೀಡಿದ್ದರು. ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ರಾಜ್ಯಪಾಲರಿಗೆ ಮನವಿ ಮಾಡಿದ್ದರು. ಆದರೆ, ರಾಜ್ಯಪಾಲರು ಅನುಮತಿ ನಿರಾಕರಿಸಿದ್ದರು.

ರಾಮಲಿಂಗಂ ಕನ್ಸ್ಟ್ರಕ್ಷನ್ ಕಂಪನಿ ಮತ್ತು ಕೆಲ ಶೆಲ್ ಕಂಪನಿಗಳಿಗೆ ಬಿಡಿಎ ಕಾಮಗಾರಿಗಳ ಗುತ್ತಿಗೆ ನೀಡಲು ಅಂದಿನ ಮುಖ್ಯಮಂತ್ರಿಯಾಗಿದ್ದ ಬಿ.ಎಸ್.ಯಡಿಯೂರಪ್ಪ ಅವರು ಹಾಗೂ ಕುಟುಂಬದ ಸದಸ್ಯರ ಪರವಾಗಿ ಐಎಎಸ್ ಅಧಿಕಾರಿ ಜಿ.ಸಿ. ಪ್ರಕಾಶ್ 12 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಲಂಚದ ಹಣವನ್ನು ಪ್ರಕಾಶ್ ಅವರು ವಸೂಲಿ ಮಾಡಿ ಮಗನ ಮೂಲಕ ಯಡಿಯೂರಪ್ಪ ಅವರಿಗೆ ನೀಡಿದ್ದರು ಎಂದು ಟಿ.ಜೆ ಅಬ್ರಾಹಂ ಅವರು ಕ್ರಿಮಿನಲ್ ಪ್ರಕರಣಗಳ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು. ಭ್ರಷ್ಟಾಚಾರ ಆರೋಪಗಳ ಕುರಿತು ವಿಶೇಷ ತನಿಖಾ ತಂಡದಿಂದ ತನಿಖೆ ನಡೆಸಲು ನಿರ್ದೇಶಿಸಬೇಕೆಂದು ಕೋರಿದ್ದರು.

ಬಿ.ಎಸ್‌. ಯಡಿಯೂರಪ್ಪ, ಬಿ.ವೈ.ವಿಜಯೇಂದ್ರ, ಶಶಿದರ್ ಮರಡಿ ಮತ್ತು ಸಂಜಯ ಸ್ವಾಮೀಜಿ ಶೆಲ್ ಕಂಪನಿಗಳ ಮೂಲಕ ಅಕ್ರಮ ಹಣ ವರ್ಗಾವಣೆ ಮಾಡಿದ್ದಾರೆ ಎಂದು ಅಬ್ರಾಹಿಂ ದೂರಿನಲ್ಲಿ ತಿಳಿಸಿದ್ದರು. ರಾಜ್ಯಪಾಲರು ಪ್ರಾಸಿಕ್ಯೂಷನ್‌ ನಿರಾಕರಿಸಿದ್ದ ಹಿನ್ನೆಲೆಯಲ್ಲಿ ವಿಶೇಷ ನ್ಯಾಯಾಲಯ ಕೂಡ 2021ರ ಜುಲೈ 8 ರಂದು ಅಬ್ರಾಹಂ ದೂರನ್ನು ವಜಾಗೊಳಿಸಿತ್ತು.

ಅನುಮತಿ ನಿರಾಕರಣೆ

ಬಿಡಿಎ ಹೌಸಿಂಗ್ ನಿರ್ಮಾಣ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿಜೆ ಅಬ್ರಾಹಂ ದೂರಿನ ಮೇರೆಗೆ 2020ರಲ್ಲೂ ರಾಜ್ಯಪಾಲರಿಗೆ ಅನುಮತಿ ಕೋರಿ ಕಡತ ಮಂಡಿಸಲಾಗಿತ್ತು. ಆದರೆ ಯಡಿಯೂರಪ್ಪ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಲು ರಾಜ್ಯಪಾಲರು ತಿರಸ್ಕರಿಸಿದ್ದರು.

Read More
Next Story