Government takes necessary steps to make the state a quantum capital: Minister S.S. Bhosaraju
x

ಸಭೆಯಲ್ಲಿ ಸಚಿವ ಎಸ್‌.ಎಸ್.‌ ಭೋಸರಾಜು ಮಾತನಾಡಿದರು.

ಬೆಂಗಳೂರಿನಲ್ಲಿ ನಡೆಯಲಿದೆ ದೇಶದ ಮೊದಲ ಕ್ವಾಂಟಮ್ ಸಮ್ಮೇಳನ: ಸಚಿವ ಭೋಸರಾಜು

ದೇಶದ ಮೊದಲ ಕ್ವಾಂಟಮ್‌ ಸಮ್ಮೇಳನಕ್ಕೆ ಆಗಮಿಸುತ್ತಿರುವ ನೊಬೆಲ್‌ ಪುರಸ್ಕೃತ ವಿಜ್ಞಾನಿಗಳಾದ ಪ್ರೊ. ಡಂಕನ್‌ ಹಲ್ದಾನೆ ಹಾಗೂ ಪ್ರೊ. ಡೇವಿಡ್‌ ಗ್ರಾಸ್‌ ಅವರೊಂದಿಗೆ ಜುಲೈ 30 ರಂದು ಸಭೆಯನ್ನು ಆಯೋಜಿಸಲಾಗಿದೆ.


"ಐಟಿ ಮತ್ತು ಏರೋಸ್ಪೇಸ್ ಕ್ಷೇತ್ರದಂತೆ, ಕ್ವಾಂಟಮ್ ತಂತ್ರಜ್ಞಾನದಲ್ಲೂ ಕರ್ನಾಟಕವನ್ನು ಜಾಗತಿಕ ಕೇಂದ್ರವನ್ನಾಗಿ ರೂಪಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ," ಎಂದು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಭೋಸರಾಜು ಅವರು ಘೋಷಿಸಿದ್ದಾರೆ.

ಈ ಮಹತ್ವಾಕಾಂಕ್ಷಿ ಗುರಿಯನ್ನು ತಲುಪಲು, ಬೆಂಗಳೂರಿನಲ್ಲಿ ಜುಲೈ 31 ಹಾಗೂ ಆಗಸ್ಟ್ 1 ರಂದು "ಕ್ವಾಂಟಮ್ ಇಂಡಿಯಾ ಬೆಂಗಳೂರು ಸಮ್ಮೇಳನ"ವನ್ನು ಆಯೋಜಿಸಲಾಗಿದೆ ಎಂದು ಅವರು ತಿಳಿಸಿದರು.

ವಿಕಾಸಸೌಧದಲ್ಲಿ ನಡೆದ ಸಮ್ಮೇಳನದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಸಚಿವರು, "ದೇಶದಲ್ಲೇ ಮೊದಲ ಬಾರಿಗೆ ಆಯೋಜಿಸಲಾಗುತ್ತಿರುವ ಈ ಸಮ್ಮೇಳನದಲ್ಲಿ ನೋಬೆಲ್ ಪುರಸ್ಕೃತ ವಿಜ್ಞಾನಿಗಳಾದ ಪ್ರೊ. ಡಂಕನ್ ಹಲ್ದಾನೆ ಹಾಗೂ ಪ್ರೊ. ಡೇವಿಡ್ ಗ್ರಾಸ್ ಅವರು ಭಾಗವಹಿಸುತ್ತಿರುವುದು ಹೆಮ್ಮೆಯ ಸಂಗತಿ. ಕರ್ನಾಟಕವನ್ನು 'ಕ್ವಾಂಟಮ್ ರಾಜಧಾನಿ'ಯನ್ನಾಗಿಸುವ ನಿಟ್ಟಿನಲ್ಲಿ ರೂಪುರೇಷೆಗಳನ್ನು ಸಿದ್ಧಪಡಿಸಲು, ಈ ವಿಜ್ಞಾನಿಗಳೊಂದಿಗೆ ಜುಲೈ 30 ರಂದು ವಿಶೇಷ ಸಭೆಯನ್ನು ಏರ್ಪಡಿಸಲಾಗಿದೆ," ಎಂದರು.

ಬೆಂಗಳೂರು ಈಗಾಗಲೇ ದೇಶದ ನಾವೀನ್ಯತೆಯ ರಾಜಧಾನಿಯಾಗಿದ್ದು, ಕ್ವಾಂಟಮ್ ತಂತ್ರಜ್ಞಾನದ ಅಭಿವೃದ್ಧಿಗೆ ಅಗತ್ಯವಾದ ಪೂರಕ ಸೌಕರ್ಯಗಳನ್ನು ಹೊಂದಿದೆ. ಈ ಸಾಮರ್ಥ್ಯವನ್ನು ಬಳಸಿಕೊಂಡು, ಆರ್ಥಿಕ ಮತ್ತು ಸಾಮಾಜಿಕ ಬೆಳವಣಿಗೆಯಲ್ಲಿ ಮಹತ್ವದ ಪಾತ್ರವಹಿಸುತ್ತಿರುವ ಈ ಕ್ಷೇತ್ರದಲ್ಲಿ ರಾಜ್ಯದ ಛಾಪು ಮೂಡಿಸಲು ಸರ್ಕಾರ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ ಎಂದು ಸಚಿವರು ವಿವರಿಸಿದರು.

Read More
Next Story