Governor vs Govt. | ಗ್ರೇಟರ್ ಬೆಂಗಳೂರು ಮಸೂದೆಗೆ ರಾಜ್ಯಪಾಲರ ತಡೆ: ಸ್ಪಷ್ಟನೆ ಕೇಳಿ ಸರ್ಕಾರಕ್ಕೆ ವಾಪಸ್
x

ಬೆಂಗಳೂರು ಆಡಳಿತ ಮಸೂದೆಯನ್ನು ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಸ್ಪಷ್ಟನೆ ಕೇಳಿ ರಾಜ್ಯ ಸರ್ಕಾರಕ್ಕೆ ವಾಪಸ್ ಕಳುಹಿಸಿದ್ದಾರೆ.

Governor vs Govt. | ಗ್ರೇಟರ್ ಬೆಂಗಳೂರು ಮಸೂದೆಗೆ ರಾಜ್ಯಪಾಲರ ತಡೆ: ಸ್ಪಷ್ಟನೆ ಕೇಳಿ ಸರ್ಕಾರಕ್ಕೆ ವಾಪಸ್

ರಾಜ್ಯಪಾಲರು ಕೆಲವು ವಿಷಯಗಳ ಕುರಿತು ಸ್ಪಷ್ಟನೆಗಳನ್ನು ಕೇಳಿರುವುದರಿಂದ ಮಸೂದೆ ವಾಪಸ್ ಕಳುಹಿಸಿದ್ದಾರೆ. ಸರ್ಕಾರದಿಂದ ಅಗತ್ಯ ಸ್ಪಷ್ಟನೆಗಳನ್ನು ನೀಡಿ ಪುನಃ ಒಪ್ಪಿಗೆಗಾಗಿ ರಾಜ್ಯಪಾಲರಿಗೆ ಕಳುಹಿಸಲಾಗುವುದು.


ವಿಧಾನಮಂಡಲದ ಉಭಯ ಸದನಗಳಲ್ಲಿ ಅಂಗೀಕಾರ ಪಡೆದ ಗ್ರೇಟರ್ ಬೆಂಗಳೂರು ಆಡಳಿತ ಮಸೂದೆಯನ್ನು ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರ ಅನುಮೋದನೆಗಾಗಿ ಕಳುಹಿಸಲಾಗಿತ್ತು. ಆದರೆ ಕೆಲ ಸ್ಪಷ್ಟನೆ ಕೇಳಿ ಅವರು ಮಸೂದೆಯನ್ನು ರಾಜ್ಯ ಸರ್ಕಾರಕ್ಕೆ ವಾಪಸ್ ಕಳುಹಿಸಿದ್ದಾರೆ.

ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ, "ರಾಜ್ಯಪಾಲರು ಕೆಲವು ವಿಷಯಗಳ ಕುರಿತು ಸ್ಪಷ್ಟನೆಗಳನ್ನು ಕೇಳಿರುವುದರಿಂದ ಮಸೂದೆ ವಾಪಸ್ ಕಳುಹಿಸಿದ್ದಾರೆ. ಸರ್ಕಾರದಿಂದ ಅಗತ್ಯ ಸ್ಪಷ್ಟನೆಗಳನ್ನು ನೀಡಿ ಪುನಃ ಒಪ್ಪಿಗೆಗಾಗಿ ರಾಜ್ಯಪಾಲರಿಗೆ ಕಳುಹಿಸಲಾಗುವುದು," ಎಂದು ಹೇಳಿದ್ದಾರೆ.

2023ರ ಆಗಸ್ಟ್‌ನಿಂದ ಈವರೆಗೆ ಒಟ್ಟು 119 ಮಸೂದೆಗಳು ಅಂಗೀಕಾರ ಪಡೆದಿವೆ. ಅದರಲ್ಲಿ 83 ಮಸೂದೆಗಳು ಈಗಾಗಲೇ ಕಾಯ್ದೆಯಾಗಿ ಜಾರಿಯಲ್ಲಿವೆ. ಏಳು ಮಸೂದೆಗಳ ಬಗ್ಗೆ ರಾಜ್ಯಪಾಲರು ಸ್ಪಷ್ಟನೆ ಕೇಳಿದ್ದಾರೆ. ನಾಲ್ಕು ಮಸೂದೆಗಳು ರಾಜ್ಯಪಾಲರ ಬಳಿ ಪ್ರಸ್ತುತ ಇನ್ನೂ ಬಾಕಿಯಿವೆ. ಇನ್ನು ಐದು ಮಸೂದೆಗಳು ರಾಷ್ಟ್ರಪತಿಯವರ ಅನುಮೋದನೆಗಾಗಿ ಕಳುಹಿಸಲಾಗಿದೆ ಅವರು ಮಾಹಿತಿ ನೀಡಿದರು.

ಮಾರ್ಚ್ 10ರಂದು ಕರ್ನಾಟಕ ವಿಧಾನಸಭೆಯಲ್ಲಿ 'ಗ್ರೇಟರ್ ಬೆಂಗಳೂರು ಆಡಳಿತ ಮಸೂದೆ 2024' ಅಂಗೀಕರಿಸಲಾಯಿತು. ಈ ಮಸೂದೆ ಬೆಂಗಳೂರು ಮಹಾನಗರ ಪಾಲಿಕೆಯನ್ನು (BBMP) ಸುಮಾರು ಏಳು ನಗರ ಪಾಲಿಕೆಗಳಾಗಿ ವಿಭಜಿಸಲು ಹಾಗೂ ಗ್ರೇಟರ್ ಬೆಂಗಳೂರು ಪ್ರಾಧಿಕಾರವನ್ನು ಸ್ಥಾಪಿಸಲು ಉದ್ದೇಶಿಸಿದೆ.

Read More
Next Story