Grihalakshmi Multipurpose Cooperative Society to be launched in the state soon
x

ಕಾರ್ಯಕ್ರಮವನ್ನು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಉದ್ಘಾಟಿಸಿದರು.

ರಾಜ್ಯದಲ್ಲಿ ಶೀಘ್ರವೇ ʼಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘʼ ಆರಂಭ

ಮೂರು ತಿಂಗಳಲ್ಲಿ ಜಿಲ್ಲಾ ಮಟ್ಟಕ್ಕೂ ಗೃಹಲಕ್ಷ್ಮಿ ಸೊಸೈಟಿಯನ್ನು ವಿಸ್ತರಣೆ ಮಾಡಲಾಗುವುದು. ಆ ಮೂಲಕ ಮೂರು ಲಕ್ಷದವರೆಗೆ ಕಡಿಮೆ ಬಡ್ಡಿ ದರದಲ್ಲಿ ಫಲಾನುಭವಿಗಳಿಗೆ ಸಾಲ ನೀಡಲಾಗುವುದು ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ತಿಳಿಸಿದರು.


Click the Play button to hear this message in audio format

ಎರಡು ಸಾವಿರ ಗೃಹಲಕ್ಷ್ಮಿ ಫಲಾನುಭವಿಗಳ ಹಣ ಸಂಗ್ರಹಿಸಲಾಗಿದ್ದು, ಅವರಿಗೆ ಲಾಭ ತಂದುಕೊಡುವ ಸಲುವಾಗಿ ʼಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘʼವನ್ನು ಆರಂಭಿಸಲಾಗುತ್ತಿದೆ. ಗೃಹಲಕ್ಷ್ಮಿ ಯೋಜನೆಯ ಮಾದರಿಯಲ್ಲೇ ʼಗೃಹಲಕ್ಷ್ಮಿ ಬ್ಯಾಂಕ್ʼ ಕೂಡ ಜನಮನ್ನಣೆ ಗಳಿಸಲು ಅಧಿಕಾರಿಗಳು ಶ್ರಮ ಹಾಕಬೇಕು ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ತಿಳಿಸಿದರು.

ಬುಧವಾರ ರಾಜ್ಯಮಟ್ಟದ ಪೂರ್ವ ಭಾವಿ ಸಭೆಯಲ್ಲಿ ಮಾತನಾಡಿದ ಅವರು, ಮೂರು ತಿಂಗಳಲ್ಲಿ ಜಿಲ್ಲಾ ಮಟ್ಟಕ್ಕೂ ಗೃಹಲಕ್ಷ್ಮಿ ಸೊಸೈಟಿಯನ್ನು ವಿಸ್ತರಣೆ ಮಾಡಲಾಗುವುದು. ಆ ಮೂಲಕ ಮೂರು ಲಕ್ಷದವರೆಗೆ ಕಡಿಮೆ ಬಡ್ಡಿ ದರದಲ್ಲಿ ಫಲಾನುಭವಿಗಳಿಗೆ ಸಾಲ ನೀಡಲಾಗುವುದು. ಸೊಸೈಟಿ ಯಶಸ್ಸಿಗೆ ಎಲ್ಲರ ಸಹಕಾರ, ಜವಾಬ್ದಾರಿ ಇರಬೇಕು. ನಾವು ಯಾರಿಂದಲೂ ಹಣ ಪಡೆಯುವುದಿಲ್ಲ, ಫಲಾನುಭವಿಗಳಿಂದ ಫೋನ್ ಪೇ ಮೂಲಕ ಹಣ ಸಂಗ್ರಹಿಸಲಾಗುವುದು. ಗೃಹಲಕ್ಷ್ಮಿ ಯಶಸ್ಸಿಗೆ ಶ್ರಮಿಸಿದಂತೆ ಗೃಹಲಕ್ಷ್ಮಿ ಸೊಸೈಟಿಯ ಯಶಸ್ಸಿಗೂ ಹೆಚ್ಚಿನ ನಿಗಾ ವಹಿಸಬೇಕು ಎಂದರು.

ರಾಜ್ಯದ ಮಹಿಳೆಯರಿಗೆ ಹಾಗೂ ಇಲಾಖೆಗೆ ಶಕ್ತಿ ತುಂಬುವುದೇ ನನ್ನ ಗುರಿ. ನವೆಂಬರ್‌ 19ರಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ, ಅಕ್ಕಾ ಪಡೆ ಲೋಕಾರ್ಪಣೆ, ಗೃಹಲಕ್ಷ್ಮಿ ಬ್ಯಾಂಕ್ ಉದ್ಘಾಟನೆ ಮಾಡಲಾಗುವುದು. ಈ ಕಾರ್ಯಕ್ರಮಕ್ಕೆ ಸುಮಾರು 40 ಸಾವಿರಕ್ಕೂ ಅಧಿಕ ಮಹಿಳೆಯರು ಆಗಮಿಸುವ ನಿರೀಕ್ಷೆ ಇದ್ದು, ಯಾವುದೇ ಲೋಪವಾಗದಂತೆ ಯಶಸ್ಸಿಗೆ ಪ್ರತಿಯೊಬ್ಬರು ಕೈಜೋಡಿಸಬೇಕು ಎಂದು ಕರೆ ನೀಡಿದರು.

ಮಹಿಳೆಯರ ಧೈರ್ಯ ಹೆಚ್ಚಿಸಲಿರುವ ಅಕ್ಕಾ ಪಡೆ

ಮಹಿಳೆಯರಿಗೆ ಹೆಚ್ಚು ಸುರಕ್ಷತೆ ನೀಡುವ ಸಲುವಾಗಿ ಅಕ್ಕಾ‌ ಪಡೆಯನ್ನು ರಾಜ್ಯಾದ್ಯಂತ ಆರಂಭಿಸಲಾಗುತ್ತಿದೆ. ಇದಕ್ಕೆ ಇಲಾಖೆಯ ಅಧಿಕಾರಿಗಳು, ಪೊಲೀಸ್ ಇಲಾಖೆಯೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು, ಅಕ್ಕಾ ಪಡೆ ಮನೆ ಮಾತಾಗುವಂತೆ ನೋಡಿಕೊಳ್ಳಬೇಕು. ಹೋಮ್ ಗಾರ್ಡ್ಸ, ಎನ್ ಸಿಸಿ ವಿದ್ಯಾರ್ಥಿಗಳು ಅಕ್ಕಾ ಪಡೆ ಯಲ್ಲಿ ಕಾರ್ಯನಿರ್ವಹಿಸಲಿದೆ. ಬೆಳಗ್ಗೆ 8 ರಿಂದ ರಾತ್ರಿ 8ರವರೆಗೆ ಶಾಲಾ‌- ಕಾಲೇಜು, ಪಾರ್ಕ್, ಶಾಂಪಿಂಗ್ ಮಾಲ್ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಗಸ್ತು‌ ತಿರುಗಲಿದ್ದು, ಶಾಲಾ‌ ಕಾಲೇಜುಗಳಿಗೆ ಭೇಟಿ ನೀಡಿ ಸಹಾಯ ಮಾಡಲಿದೆ ಎಂದರು.‌

ಡೀಪ್‌ ಫೇಕ್‌ ಕುರಿತು ಜಾಗೃತಿ

ಡೀಪ್ ಫೇಕ್ ಹಾವಳಿ ಜಾಸ್ತಿಯಾಗುತ್ತಿದ್ದು, ಹಿರಿಯ ಮಹಿಳೆಯರೇ ಹೆಚ್ಚು ಗುರಿಯಾಗುತ್ತಿದ್ದಾರೆ. ಇದನ್ನು ತಡೆಯುವ ಕೆಲಸ ಅಕ್ಕಾ ಪಡೆ ಮಾಡಲಿದೆ.ಕಾರ್ಯಾರಂಭಗೊಂಡ ಮೂರು ತಿಂಗಳಲ್ಲಿ ಮನೆ ಮನೆಗೆ ತೆರಳಿ ಈ ಕುರಿತು ಜನರಿಗೆ ಜಾಗೃತಿ ಮೂಡಿಸಲಿದೆ ಎಂದು ತಿಳಿಸಿದರು.

ಎಲ್‌ಕೆಜಿ, ಯುಕೆಜಿ ದಾಖಲಾತಿ ಜಾಸ್ತಿ ಆಗಲಿ

ಅಂಗನವಾಡಿ ಕೇಂದ್ರಗಳಲ್ಲಿ ಆರಂಭವಾಗುವ ಎಲ್‌ಕೆಜಿ, ಯುಕೆಜಿ ತರಗತಿಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ದಾಖಲಾಗುವಂತೆ ಮಾಡಬೇಕು, ಇದಕ್ಕೆ ಅಂಗನವಾಡಿ ಕಾರ್ಯಕರ್ತರು, ಸಹಾಯಕಿಯರ ನೆರವು ಅಗತ್ಯ ಎಂದು ಹೇಳಿದರು.

Read More
Next Story