ಅರ್ಧ ಪಾಕಿಸ್ತಾನ ಇದೆ ಎಂಬ ಹೇಳಿಕೆ: ಯತ್ನಾಳ ವಿರುದ್ಧ ಟಬು ರಾವ್ ದೂರು
x

ಅರ್ಧ ಪಾಕಿಸ್ತಾನ ಇದೆ ಎಂಬ ಹೇಳಿಕೆ: ಯತ್ನಾಳ ವಿರುದ್ಧ ಟಬು ರಾವ್ ದೂರು


"ಸಚಿವ ದಿನೇಶ್ ಗುಂಡೂರಾವ್ ಮನೆಯಲ್ಲಿ ಅರ್ಧ ಪಾಕಿಸ್ತಾನ ಇದೆ" ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ನೀಡಿದ್ದರು. ಈ ಹೇಳಿಕೆಯ ವಿರುದ್ಧ ದಿನೇಶ್ ಗುಂಡೂರಾವ್ ಪತ್ನಿ ಟಬು ರಾವ್ ಅವರು ಬೆಂಗಳೂರಿನ ಸಂಜಯನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ‌

ಟಬು ರಾವ್ ಅವರು ಶಾಸಕ ಯತ್ನಾಳ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಇದಕ್ಕೂ ಮುನ್ನ ಬಿಜೆಪಿ ನಾಯಕರಿಗೆ ತಮ್ಮ ಟ್ವಿಟರ್ ಖಾತೆಯಲ್ಲಿ ಮನವಿ ಮಾಡಿಕೊಂಡಿದ್ದರು. ಇದೀಗ ಯತ್ನಾಳ ವಿರುದ್ಧ ದೂರು ನೀಡಿದ್ದಾರೆ.

ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಟಬು ರಾವ್, ʻʻಬಸನಗೌಡ ಪಾಟೀಲ್ ಯತ್ನಾಳ್ ಯಾರು ನನಗೆ ಗೊತ್ತಿಲ್ಲ. ನಾನು ರಾಜಕೀಯದಲ್ಲಿಲ್ಲ, ನನಗೇಕೆ ಹೀಗೆ ಹೇಳಿದ್ದಾರೆ ಗೊತ್ತಿಲ್ಲ. ಈ ರೀತಿ ಮಾತನಾಡೋದೆ ರಾಜಕೀಯನಾ?" ಎಂದು ಪ್ರಶ್ನೆ ಮಾಡಿದ್ದಾರೆ.

ʻʻಭಾರತ ಮಾತೆ ಅಂತಾರೆ, ಇದೇನಾ ಇವರು ಕೊಡುವ ಗೌರವ? ಈಗ ದೂರು ಸಲ್ಲಿಸಿದ್ದೇವೆ, ಮುಂದೆ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹಾಕುತ್ತೇನೆ. ದಿನೇಶ್ ಬಗ್ಗೆ ಮಾತನಾಡಿದರೆ ಪರ್ವಾಗಿಲ್ಲ, ನಮ್ಮ ಬಗ್ಗೆ ಏಕೆ ಮಾತನಾಡ್ತಾರೆ" ಎಂದು ಅವರು ವಾಗ್ದಾಳಿ ನಡೆಸಿದರು.

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಏ.6 ರಂದು ವಿಜಯಪುರ ಜಿಲ್ಲಾ ಬಿಜೆಪಿ ಕಚೇರಿ ಬಳಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುವ ವೇಳೆ, ರಾಮೇಶ್ವರ ಕೆಫೆ ಬಾಂಬ್ ಬ್ಲಾಸ್ಟ್ ಕೇಸ್ನಲ್ಲಿ ಬಿಜೆಪಿ ಕಾರ್ಯಕರ್ತ ವಿಚಾರಣೆ ನಡೆಸಿದ್ದ ಎನ್ಐಎ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸುತ್ತಾ ದಿನೇಶ್ ಗುಂಡೂರಾವ್ ಕುಟುಂಬದ ಬಗ್ಗೆ ಮಾತಾಡಿದ್ದಾರೆ. ಈ ವೇಳೆ "ಸಚಿವರ ಮನೆಯಲ್ಲಿ ಅರ್ಧ ಪಾಕಿಸ್ತಾನ ಇದೆʼʼ ಎಂದು ಹೇಳಿದ್ದರು.

Read More
Next Story