ಹಾಸನ: ಎಂಬಿಬಿಎಸ್ ವಿದ್ಯಾರ್ಥಿಯನ್ನು ಬಲಿ ಪಡೆದ ಡೆಂಗ್ಯೂ
x
ಡೆಂಗ್ಯೂ ಜ್ವರಕ್ಕೆ ಎಂ.ಬಿ.ಬಿ.ಎಸ್‌ ವಿದ್ಯಾರ್ಥಿ ಬಲಿಯಾಗಿದ್ದಾನೆ.

ಹಾಸನ: ಎಂಬಿಬಿಎಸ್ ವಿದ್ಯಾರ್ಥಿಯನ್ನು ಬಲಿ ಪಡೆದ ಡೆಂಗ್ಯೂ

ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ವಿದ್ಯಾರ್ಥಿ, ಗೋಹಳ್ಳಿ ಗ್ರಾಮದ ರೇಖಾ ಮತ್ತು ಮಂಜುನಾಥ್ ದಂಪತಿಯ ಪುತ್ರ ಕುಶಾಲ್ (22) ಡೆಂಗ್ಯೂ ಜ್ವರಕ್ಕೆ ಬಲಿಯಾಗಿದ್ದಾನೆ.


Click the Play button to hear this message in audio format

ಹಾಸನ ಜಿಲ್ಲೆಯ ವೈದ್ಯಕೀಯ ವಿದ್ಯಾರ್ಥಿಯೊಬ್ಬರು ಡೆಂಗ್ಯೂಗೆ ಬಲಿಯಾಗಿದ್ದಾರೆ. ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ವಿದ್ಯಾರ್ಥಿ, ಗೋಹಳ್ಳಿ ಗ್ರಾಮದ ರೇಖಾ ಮತ್ತು ಮಂಜುನಾಥ್ ದಂಪತಿಯ ಪುತ್ರ ಕುಶಾಲ್ (22) ಮೃತ ವಿದ್ಯಾರ್ಥಿ.

ಕಳೆದ ಒಂದು ವಾರದಿಂದ ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕುಶಾಲ್ ಗುರುವಾರ ಸಂಜೆ ಮೃತಪಟ್ಟಿದ್ದಾನೆ.

ಕುಶಾಲ್ ತಾಯಿ, ಟೈಲರ್ ವೃತ್ತಿಯಲ್ಲಿದ್ದು, ಅವರೂ ಕೂಡ ಡೆಂಗ್ಯೂ ಸೋಂಕಿನಿಂದ ಬಳಲುತ್ತಿದ್ದಾರೆ. ಆವರೂ ಕೂಡ ಆಸ್ಪತ್ರೆಯಲ್ಲೇ ಒಳರೋಗಿಯಾಗಿದ್ದು, ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿದ್ದು, ಆತಂಕಕ್ಕೆ ಕಾರಣವಾಗಿವೆ. ಕರ್ನಾಟಕದಲ್ಲಿ ಒಟ್ಟು ಡೆಂಗ್ಯೂ ಪ್ರಕರಣಗಳ ಸಂಖ್ಯೆ 10,000 ದಾಟಿದ್ದು, 10,449 ಪ್ರಕರಣಗಳು ದಾಖಲಾಗಿವೆ. ರಾಜ್ಯದಲ್ಲಿ 487 ಹೊಸ ಪ್ರಕರಣಗಳು ದಾಖಲಾಗಿವೆ ಮತ್ತು ರಾಜ್ಯದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 358 ಕ್ಕೆ ತಲುಪಿದೆ. ಅವುಗಳಲ್ಲಿ 128 ಡೆಂಗ್ಯೂ ಸೋಂಕಿತರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದುವರೆಗೆ ೯ ಜನ ಡೆಂಗ್ಯೂಗೆ ಬಲಿಯಾಗಿದ್ದಾರೆ.


Read More
Next Story