ಹಾಸನ: ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಆರು ಮಂದಿ ಸಾವು
x

ಹಾಸನ: ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಆರು ಮಂದಿ ಸಾವು


ಹಾಸನ ನಗರದ ಹೊರವಲಯದಲ್ಲಿ ಭಾನುವಾರ ಬೆಳಗ್ಗೆ 6.30ರ ಸುಮಾರಿಗೆ ಕಾರು ಮತ್ತು ಕಂಟೈನರ್ ವಾಹನದ ನಡುವೆ ಡಿಕ್ಕಿ ಸಂಭವಿಸಿ ಒಂದೇ ಕುಟುಂಬದ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ಮಹಿಳೆಯರು, ಮೂವರು ಪುರುಷರು ಮತ್ತು ಒಂದು ಮಗು ಸಾವನ್ನಪ್ಪಿದ್ದಾರೆ. ಮೃತರನ್ನು ಒಂದೇ ಕುಟುಂಬದ ನಾರಾಯಣಸ್ವಾಮಿ, ಸುನಂದಾ, ರವಿಕುಮಾರ್, ನೇತ್ರಾ, ಚೇತನ್, ರಾಕೇಶ್ ಎಂದು ಗುರುತಿಸಲಾಗಿದೆ.

ಮೃತರು ಚಿಕ್ಕಬಳ್ಳಾಪುರ ಜಿಲ್ಲೆ ಹೊಸಕೋಟೆ ತಾಲೂಕಿನ ಕಾರಹಳ್ಳಿ ಮೂಲದವರು ಎನ್ನಲಾಗಿದೆ. ಮಂಗಳೂರಿನಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ಸಂಬಂಧಿಕರೊಬ್ಬರನ್ನು ಭೇಟಿ ಮಾಡಲು ಕುಟುಂಬ ತೆರಳಿದ್ದು, ಮನೆಗೆ ಹಿಂತಿರುಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.

ಕಾರು . ನಿದ್ದೆ ಮಂಪರಿನಲ್ಲಿ ಚಾಲಕ ಕಾರು ಚಲಾಯಿಸಿ ಡಿವೈಡರ್‌ಗೆ ಢಿಕ್ಕಿ ಹೊಡೆದು ಮುಂದಿನ ಲೇನ್‌ಗೆ ಪಲ್ಟಿಯಾಗಿ ಎದುರು ದಿಕ್ಕಿನಿಂದ ಬರುತ್ತಿದ್ದ ಸರಕು ಸಾಗಣೆ ಕಂಟೈನರ್ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಕಾರು ಸಂಪೂರ್ಣ ನಜ್ಜುಗುಜ್ಜು ಆಗಿದೆ. ಹಾಸನ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಹಾಸನ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ (SP) ಮಹಮದ್ ಸುಜೇತಾ ಭೇಟಿ ನೀಡಿದ್ದಾರೆ. ಕಾರಿನೊಳಗಿಂದ ಶವಗಳನ್ನು ಹೊರತೆಗೆಯಲು ಪೊಲೀಸರು ಕಷ್ಟಪಟ್ಟರು.

Read More
Next Story