
ದ್ವೇಷ ಹೇಳಿಕೆ: ಬಿಜೆಪಿ ನಾಯಕ ಸಿ ಟಿ ರವಿ ವಿರುದ್ಧ ಎಫ್‌ಐಆರ್
ʼಸಿ.ಟಿ ರವಿ ಬರಹ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಈ ಬಗ್ಗೆ ಕಾನೂನು ಕ್ರಮ ಕೈಗೊಂಡು ವರದಿ ಸಲ್ಲಿಸಬೇಕುʼ ಎಂದು ಚುನಾವಣಾ ಆಯೋಗ ಜಿಲ್ಲಾ ಚುನಾವಣಾಧಿಕಾರಿಗೆ ಸೂಚಿಸಿತ್ತು.
ಚಿಕ್ಕಮಗಳೂರು: ಸಾಮಾಜಿಕ ಜಾಲತಾಣದಲ್ಲಿ ದ್ವೇಷದ ಹೇಳಿಕೆ ಪ್ರಕಟಿಸಿದ ಆರೋಪದಲ್ಲಿ ಮಾಜಿ ಸಚಿವ ಸಿಟಿ ರವಿ ವಿರುದ್ಧ ಪ್ರಕರಣ ದಾಖಲಾಗಿದೆ.
ಚುನಾವಣಾ ಆಯೋಗದ ಸಾಮಾಜಿಕ ಜಾಲತಾಣ ಮೇಲ್ವಿಚಾರಣಾ ಸಮಿತಿಯ ನೋಡಲ್ ಅಧಿಕಾರಿಯ ಸೂಚನೆ ಮೇರೆಗೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಕೆ.ಜಯಲಕ್ಷ್ಮಮ್ಮ ಅವರು ಸಿ ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಠಾಣೆಗೆ ದೂರು ನೀಡಿದ್ದಾರೆ.
ʼಸಿ.ಟಿ ರವಿ ಬರಹ ಚುನಾವಣಾ ನೀತಿ ಸಂಹಿತೆಯಡಿ ಉಲ್ಲಂಘನೆಯಾಗಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಈ ಬಗ್ಗೆ ಕಾನೂನು ಕ್ರಮ ಕೈಗೊಂಡು ವರದಿ ಸಲ್ಲಿಸಬೇಕುʼ ಎಂದು ಚುನಾವಣಾ ಆಯೋಗ ಜಿಲ್ಲಾ ಚುನಾವಣಾಧಿಕಾರಿಗೆ ಸೂಚಿಸಿತ್ತು.
“ಸಾಗರಗಳ ಆಳವನ್ನು ಅಳೆಯಬಹುದು, ಆದರೆ ಹಿಂದೂಗಳು ಮತ್ತು ಹಿಂದೂ ಧರ್ಮದ ವಿರುದ್ಧ ರಾಹುಲ್ ಗಾಂಧಿಯವರ ದ್ವೇಷವನ್ನು ಎಂದಿಗೂ ಕಂಡುಹಿಡಿಯಲಾಗುವುದಿಲ್ಲ. ಹಿಂದೂ ಧರ್ಮದಲ್ಲಿ ಶಕ್ತಿ ಎಂಬ ಪದವಿದೆ, ನಮ್ಮ ಹೋರಾಟ ಶಕ್ತಿ ವಿರುದ್ಧ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ದುಷ್ಟ ಶಕ್ತಿಗಳ ದಾಳಿಯಿಂದ ನಮ್ಮ ಧರ್ಮವನ್ನು ರಕ್ಷಿಸಲು ಹಿಂದೂಗಳು ಪ್ರತಿ ಚುನಾವಣೆಯಲ್ಲಿ ಕಾಂಗ್ರೆಸ್ ವಿರುದ್ಧ ನಿರ್ದಯವಾಗಿ ಮತ ಹಾಕಬೇಕು” ಎಂದು ಸಿಟಿ ರವಿ ಅವರು ಟ್ವೀಟ್ ಮಾಡಿದ್ದರು. ಈ ಟ್ವೀಟ್ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದೆ.