Dharmasthala case | Left forces machinations behind formation of SIT: Minister HDK
x

ಕೇಂದ್ರ ಸಚಿವ ಎಚ್‌. ಡಿ. ಕುಮಾರಸ್ವಾಮಿ

2 ಬಾರಿ ಮರಣೋತ್ತರ ಪರೀಕ್ಷೆ ವಿವಾದ; ಬಿಮ್ಸ್ ಅಧೀಕ್ಷಕರಿಗೆ ಮಂಪರು ಪರೀಕ್ಷೆಗೆ ಎಚ್‌ಡಿಕೆ ಆಗ್ರಹ

ಮರಣೋತ್ತರ ಪರೀಕ್ಷೆ ವೇಳೆ ಇಬ್ಬರು ವೈದ್ಯರ ನಡುವೆ ಏನೆಲ್ಲಾ ತಿಕ್ಕಾಟ ನಡೆಯಿತು ಎನ್ನುವುದು ಕೂಡ ನನಗೆ ಗೊತ್ತಿದೆ. ಬಿಮ್ಸ್ ಅಧಿಕ್ಷಕರ ಹೇಳಿಕೆಯಲ್ಲೇ ಪ್ರಶ್ನೆಯೂ ಅಡಗಿದೆ, ಉತ್ತರವೂ ಇದೆ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ.


Click the Play button to hear this message in audio format

ಗಣಿನಾಡು ಬಳ್ಳಾರಿಯಲ್ಲಿ ಬ್ಯಾನರ್‌ ಕಟ್ಟುವ ವಿಚಾರವಾಗಿ ಸಂಭವಿಸಿದ ಸಂಘರ್ಷ ಹಲವಾರು ರಾಜಕೀಯ ತಿರುವು ಪಡೆದುಕೊಳ್ಳುತ್ತಿದೆ.
ಗುಂಡು ತಗುಲಿ ಮೃತಪಟ್ಟ ರಾಜಶೇಖರ್‌ ದೇಹವನ್ನು ಎರಡು ಬಾರಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ ಎಂಬ ಸ್ಫೋಟಕ ಹೇಳಿಕೆ ನೀಡಿದ್ದ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಇದೀಗ ರಾಜ್ಯ ಸರ್ಕಾರದ ಮುಂದೆ ಹಲವು ಪ್ರಶ್ನೆಗಳನ್ನು ಇಟ್ಟಿದ್ದಾರೆ.

ಈ ಕುರಿತು ತಮ್ಮ ಸಾಮಾಜಿಕ ಮಾಧ್ಯಮ ʼಎಕ್ಸ್‌ʼನಲ್ಲಿ ಪೋಸ್ಟ್‌ ಮಾಡಿರುವ ಅವರು, "ಬಳ್ಳಾರಿಯಲ್ಲಿ ಕಗ್ಗೊಲೆಯಾದ ನಿಮ್ಮದೇ ಪಕ್ಷದ ನತದೃಷ್ಟ ಕಾರ್ಯಕರ್ತನನ್ನು ಎರಡು ಬಾರಿ ಮರಣೋತ್ತರ ಪರೀಕ್ಷೆ ನಡೆಸಿದ ಕಥಾನಕದ ಬಗ್ಗೆ ನಾನು ಹೇಳಿದ್ದು ಸತ್ಯ. ಸತ್ತ ಶರೀರವನ್ನೂ ರಾಜಕೀಯ ಸ್ವಾರ್ಥಕ್ಕೆ ಬಳಸಿಕೊಳ್ಳುವ ನಿಮ್ಮ ಕೀಳು ನಡವಳಿಕೆ ಕುರಿತು ಸೋಮವಾರ (ಜ.5) ನಾನು ಹೇಳಿದ್ದು ಅಕ್ಷರಶಃ ನಿಜ. ಎರಡು ಬಾರಿ ಮರಣೋತ್ತರ ಪರೀಕ್ಷೆ ನಡೆಸಿರುವುದು ಅಸತ್ಯವಾದರೆ ಬಿಮ್ಸ್ ಅಧಿಕ್ಷಕರನ್ನು ತಕ್ಷಣವೇ ಬ್ರೈನ್ ಮ್ಯಾಪಿಂಗ್‌ಗೆ ಒಳಪಡಿಸಿ. ಆಗ ನಿಮ್ಮ ಮರಣೋತ್ತರ ಪರೀಕ್ಷೆಯ ಮಾಯಜಾಲ ಬಯಲಾಗುತ್ತದೆ ಎಂದಿದ್ದಾರೆ.

ಪ್ರಕರಣ ಮುಚ್ಚಿಹಾಕಲು ಯತ್ನ

ಶೂಟೌಟ್‌ ಪ್ರಕರಣವನ್ನು ಮುಚ್ಚಿಹಾಕಲು ನಿಮ್ಮ ಸರ್ಕಾರ ನಡೆಸುತ್ತಿರುವ ಮಹಾನ್ ಹರಸಾಹಸ ಏನೇನು ಎಂಬುದು ಗೊತ್ತಿದೆ. ಹಾಗೆಯೇ, ಬಿಮ್ಸ್ ಅಧಿಕ್ಷಕರ ಹೇಳಿಕೆಯನ್ನೂ ಗಮನಿಸಿದ್ದೇನೆ. ಅವರ ಪ್ರಕಾರ 6 ಗಂಟೆಯಿಂದ ಶುರುವಾದ ಮರಣೋತ್ತರ ಪರೀಕ್ಷೆ 3 ಗಂಟೆಗಳ ಕಾಲ ನಡೆದು ವಿಳಂಬವಾಯಿತು. ದೇಹದಲ್ಲಿ ಅನೇಕ ಚೂರುಗಳು ಇದ್ದವು ಎಂದು ಹೇಳಿದ್ದಾರೆ, ಸರಿ. ಆದರೆ, ಆ ವೈದ್ಯರೇ ಮರಣೋತ್ತರ ಪರೀಕ್ಷೆ ಮುಗಿಸಬಹುದಿತ್ತು. ಹಾಗಿದ್ದ ಮೇಲೆ ಇನ್ನೊಬ್ಬ ವೈದ್ಯರನ್ನು ಕರೆಸಿಕೊಂಡ ಗುಟ್ಟೇನು?, ಮೃತದೇಹ ಪರೀಕ್ಷೆಗೆ ಎಷ್ಟು ವೈದ್ಯರು ಬೇಕು?, ಮರಣೋತ್ತರ ಪರೀಕ್ಷೆ ವೇಳೆ ನೀವು ಜೀವ ಉಳಿಸಬೇಕಿತ್ತಾ?, ಅಥವಾ ಸತ್ಯ ಹುಡುಕಬೇಕಿತ್ತಾ?, ಆಗ ನೀವು ಕರೆಸಬೇಕಿದ್ದದ್ದು ಪೊರೆನ್ಸಿಕ್ ತಜ್ಞರನ್ನು ಎಂದು ಕಿಡಿಕಾರಿದ್ದಾರೆ.

ವೈದ್ಯರ ನಡುವೆಯೇ ಗೊಂದಲ

ಮರಣೋತ್ತರ ಪರೀಕ್ಷೆಯ ವೇಳೆ ಆ ಇಬ್ಬರು ವೈದ್ಯರ ನಡುವೆ ಏನೆಲ್ಲಾ ತಿಕ್ಕಾಟ ನಡೆಯಿತು? ಎನ್ನುವುದು ಕೂಡ ನನಗೆ ಗೊತ್ತಿದೆ. ಬಿಮ್ಸ್ ಅಧಿಕ್ಷಕರ ಹೇಳಿಕೆಯಲ್ಲೇ ನಿಮಗೆ ಪ್ರಶ್ನೆಯೂ ಅಡಗಿದೆ, ಉತ್ತರವೂ ಇದೆ. ಮೊದಲ ವೈದ್ಯರೇ ಮರಣೋತ್ತರ ಪರೀಕ್ಷೆ ಮುಗಿಸಬಹುದಿತ್ತು. ಇನ್ನೊಬ್ಬ ವೈದ್ಯರ ಅವಶ್ಯಕತೆ ಏನಿತ್ತು?, ಸಮಾಜವನ್ನು ಹಾಳು ಮಾಡಲಿಕ್ಕೊ ಅಥವಾ ನಿಮ್ಮ ತನಿಖೆ ದಿಕ್ಕು ತಪ್ಪಿಸಲಿಕ್ಕೊ, ಮಾಹಿತಿ ಇಲ್ಲದೆಯೋ ನಾನು ಹೇಳಿದ್ದಲ್ಲ. ಮೃತದೇಹವನ್ನೂ ನಿಮ್ಮ ಮನೆಹಾಳು ರಾಜಕೀಯಕ್ಕೆ ಬಳಸಿಕೊಂಡಿದ್ದನ್ನು ರಾಜ್ಯದ ಜನತೆಗೆ ಗಮನಕ್ಕೆ ತಂದಿದ್ದೇನೆ ಎಂದು ತಮ್ಮ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ.

ಗೃಹ ಸಚಿವರ ಸ್ಪಷ್ಟನೆ

ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಹೇಳಿಕೆಯ ಕುರಿತು ಡಾ.ಜಿ. ಪರಮೇಶ್ವರ್‌, "ಘಟನೆಯಲ್ಲಿ ಮೃತಪಟ್ಟ ವ್ಯಕ್ತಿಯನ್ನು ಎರಡು ಸಲ ಮರಣೋತ್ತರ ಪರೀಕ್ಷೆ ನಡೆಸಿಲ್ಲ ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ. ಎರಡು ಸಲ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ ಎಂಬುದಾಗಿ ಹೇಳಿಕೆ ನೀಡಿರುವ ನಾಯಕರುಗಳು ನೋಡಿದ್ದಾರೆಯೇ? ಮರಣೋತ್ತರ ಪರೀಕ್ಷೆ ನಡೆಸಿದ ವೈದ್ಯರು ಹೇಳಿಕೆ ನೀಡಿದ್ದಾರೆ. ಇನ್ನು ಯಾರ ಮಾತನ್ನು ನಂಬಬೇಕು. ಎರಡು ಸಲ ಮರಣೋತ್ತರ ಪರೀಕ್ಷೆ ನಡೆಸಿಲ್ಲ ಎಂದಿರುವ ವೈದ್ಯರ ಮಾತನ್ನು ನಾನು ಕೂಡ ಒಪ್ಪುತ್ತೇನೆ" ಎಂದು ಸ್ಪಷ್ಟಪಡಿಸಿದರು.

"ನಾನು ಮೂರನೇ ಸಲ ಗೃಹ ಸಚಿವನಾಗಿ ಕೆಲಸ ಮಾಡುತ್ತಿದ್ದೇನೆ. ಯಾವ ಸಂದರ್ಭದಲ್ಲಿ ಏನು ತೀರ್ಮಾನ ತೆಗೆದುಕೊಳ್ಳಬೇಕು. ನಮ್ಮ ರಾಜ್ಯದ ಕಾನೂನು ವ್ಯವಸ್ಥೆಯ ದೃಷ್ಟಿಯಿಂದ ಏನೆಲ್ಲ ತೀರ್ಮಾನ ತೆಗೆದುಕೊಳ್ಳಬೇಕು ಎಂಬ ಅರಿವು ನನಗಿದೆ. 38 ವರ್ಷ ರಾಜಕಾರಣ‌ ಮಾಡಿದ್ದೇನೆ. ಪಕ್ಷದಲ್ಲಿ ಮತ್ತು ಸರ್ಕಾರದಲ್ಲಿ ಅನೇಕ ಜವಾಬ್ದಾರಿಗಳನ್ನು ನಿಭಾಯಿಸಿದ್ದೇನೆ. ನನಗೂ ಕೂಡ ಅಪಾರವಾದ ಅನುಭವವಿದೆ. ರಾಜ್ಯದ ಕಾನೂನು ಸುವ್ಯವಸ್ಥೆಯನ್ನು ಕಾಪಾಡಲು ಏನು ಕ್ರಮ, ಯಾವ ಸಂದರ್ಭದಲ್ಲಿ ತೆಗೆದುಕೊಳ್ಳಬೇಕು, ಕಠಿಣವಾದ ನಿರ್ಧಾರಗಳನ್ನು ಯಾವಾಗ ತೆಗೆದುಕೊಳ್ಳಬೇಕು ತೆಗೆದುಕೊಂಡಿದ್ದೇನೆ" ಎಂದರು.

Read More
Next Story