ಬಿಜೆಪಿ ಸರ್ಕಾರದಲ್ಲಿ ಅಕ್ರಮ ನಡೆದಿತ್ತು ಎಂಬುದು ಸುಳ್ಳು: ಎಚ್‌.ಡಿ. ಕುಮಾರಸ್ವಾಮಿ
x

ಬಿಜೆಪಿ ಸರ್ಕಾರದಲ್ಲಿ ಅಕ್ರಮ ನಡೆದಿತ್ತು ಎಂಬುದು ಸುಳ್ಳು: ಎಚ್‌.ಡಿ. ಕುಮಾರಸ್ವಾಮಿ


ಬಿಜೆಪಿ ಸರ್ಕಾರದಲ್ಲಿ ಅಕ್ರಮ ನಡೆದಿತ್ತು ಎಂದು ಸುಳ್ಳು ಪ್ರಚಾರ ಮಾಡುತ್ತಿದ್ದಾರೆ. ಇವರಿಗೆ ಒಂದೇ ಒಂದು ದಾಖಲೆ ಕೊಡಲು ಆಗಿಲ್ಲ ಏಂದು ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು ಕಾಂಗ್ರೆಸ್‌ ನಡೆಯನ್ನು ಟೀಕಿಸಿದ್ದಾರೆ.

ಬಿಡದಿಯಲ್ಲಿ ಮೈಸೂರು ಚಲೋ ಎರಡನೇ ದಿನದ ಪಾದಯಾತ್ರೆಗೆ ಚಾಲನೆ ಕೊಟ್ಟ ನಂತರ ಬಹಿರಂಗ ಸಭೆಯಲ್ಲಿ ಭಾಷಣ ಮಾಡಿದ ಅವರು.ಕಾಂಗ್ರೆಸ್‌ ಸರ್ಕಾರದ ಹಾಗೂ ಮುಡಾ ಹಗರಣದ ವಿರುದ್ಧ ಮಾಡುತ್ತಿರುವ ಈ ಪಾದಯಾತ್ರೆ ಅಸೂಯೆಯಿಂದ ಹಮ್ಮಿಕೊಂಡಿದ್ದಲ್ಲ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ದಿನವೇ ಅಂಗಡಿ ಬಾಗಿಲು ತೆರೆದು ಕೂತಿದೆ. ಗ್ಯಾರಂಟಿಗಳಿಂದ ಬದಲಾವಣೆಗಳನ್ನು ತಂದಿದ್ದೇವೆ ಅನ್ಕೊಂಡಿದ್ದೇವೆ. ಗ್ಯಾರಂಟಿಗಳಿಂದ ರಾಜ್ಯವನ್ನು ದರಿದ್ರದತ್ತ ತಗೊಂಡು ಹೋಗಿದ್ದಾರೆ. ಮಂತ್ರಿಗಳಲ್ಲಿ ಭ್ರಷ್ಟಾಚಾರ ನಡೆಸಲು ಪೈಪೋಟಿ ನಡೀತಿದೆ ಎಂದು ಅವರು ಆರೋಪಿಸಿದರು.

ಮೂಡಾ ಬಗ್ಗೆ ನಾನು, ನಮ್ಮ ಶಾಸಕರು ಇವರ ಅಕ್ರಮದ ಬಗ್ಗೆ ದಾಖಲೆಗಳ ಸಮೇತ ಮಾತನಾಡಿದೇವೆ. ಮೈಸೂರು ನಗರದ ಉಸ್ತುವಾರಿಯನ್ನು ಸಿಎಂ ಅವರೇ ವಹಿಸಿಕೊಂಡಿದ್ದಾರೆ. ಸಿಎಂ ತಮ್ಮ ಪತ್ನಿ ಹೆಸರಲ್ಲಿ 15 ಸೈಟು ಪಡೆಯಲು ನಮ್ಮ ವಿರೋಧ ಇಲ್ಲ. ಆದರೆ ಅಧಿಕಾರ ದುರುಪಯೋಗ ಪಡಿಸಿಕೊಂಡು ಸೈಟು ಪಡೆದಿದ್ದಾರೆ. ಇಲ್ಲಿ ನಿಂಗ, ಜವರ, ದೇವರಾಜ, ದಲಿತ ಅನ್ನೋ ಪ್ರಶ್ನೆ ಇಲ್ಲ. ನಕಲಿ ದಾಖಲೆ ಸೃಷ್ಟಿ 15 ಸೈಟುಗಳನ್ನು ತಗೊಂಡಿದ್ದಾರೆ. ಇದನ್ನು ಸಿಎಂ ಕಾನೂನು ಬಾಹಿರವಾಗಿ ತಗೊಂಡಿದ್ದಾರೆ ಎಂದು ಕುಮಾರಸ್ವಾಮಿ ಅವರು ದೂರಿದರು.

Read More
Next Story