ಲೋಕಸಭಾ ಅಧಿವೇಶನ| ಕನ್ನಡದಲ್ಲಿಯೇ ಪ್ರಮಾಣವಚನ ಸ್ವೀಕರಿಸಿದ ಹೆಚ್‌ಡಿ ಕುಮಾರಸ್ವಾಮಿ
x

ಲೋಕಸಭಾ ಅಧಿವೇಶನ| ಕನ್ನಡದಲ್ಲಿಯೇ ಪ್ರಮಾಣವಚನ ಸ್ವೀಕರಿಸಿದ ಹೆಚ್‌ಡಿ ಕುಮಾರಸ್ವಾಮಿ


18ನೇ ಲೋಕಸಭೆಯ ಮೊದಲ ಅಧಿವೇಶನ ಇಂದು ನಡೆಯುತ್ತಿದ್ದು, ಲೋಕಸಭೆ ಸದಸ್ಯರಾಗಿ ಮಂಡ್ಯ ಸಂಸದ ಎಚ್‌ಡಿ ಕುಮಾರಸ್ವಾಮಿ ಅವರು ದೇವರ ಹೆಸರಿನಲ್ಲಿ ಮಾತೃ ಭಾಷೆಯಲ್ಲೇ ಪ್ರಮಾಣವಚನ ಸ್ವೀಕರಿಸಿದರು.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಕುಮಾರಸ್ವಾಮಿ ಅವರು, ʻʻ18ನೇ ಲೋಕಸಭೆಯ ಸದಸ್ಯನಾಗಿ, ಮಂಡ್ಯ ಮಹಾಜನತೆಯ ಪ್ರತಿನಿಧಿಯಾಗಿ ಗೌರವಾನ್ವಿತ ಹಂಗಾಮಿ ಸಭಾಧ್ಯಕ್ಷರಾದ ಶ್ರೀ ಭರ್ತೃಹರಿ ಮಹತಾಬ್‌ ಅವರ ಸಮಕ್ಷಮದಲ್ಲಿ ನನ್ನ ಮಾತೃಭಾಷೆಯಾದ ಕನ್ನಡಲ್ಲಿ ಪ್ರಮಾಣ ಸ್ವೀಕರಿಸಿದೆ. ಇದು ನನ್ನ ಬದುಕಿನ ಅವಿಸ್ಮರಣೀಯ, ಹೆಮ್ಮೆಯ ಕ್ಷಣ. ಭಾರತದ ಪ್ರಜಾಪ್ರಭುತ್ವ ದೇಗುಲದಲ್ಲಿ ಈ ಧನ್ಯತೆಯ ಕ್ಷಣಕ್ಕೆ ಕಾರಣೀಭೂತರಾದ ಮಂಡ್ಯ ಲೋಕಸಭೆ ಕ್ಷೇತ್ರದ ಎಲ್ಲಾ ತಂದೆ ತಾಯಂದಿರು, ಅಣ್ಣ ತಮ್ಮಂದಿರು, ಅಕ್ಕ ತಂಗಿಯರು ಹಾಗೂ ಸಮಸ್ತ ಕನ್ನಡಿಗರಿಗೆ ಅನಂತ ಧನ್ಯವಾದಗಳನ್ನು ಅರ್ಪಣೆ ಮಾಡುತ್ತೇನೆʼʼ ಎಂದು ತಿಳಿಸಿದ್ದಾರೆ.

ಪದ್ದತಿಯಂತೆ ಎಲ್ಲಾ ನೂತನ ಸದಸ್ಯರಿಗೆ ಹಂಗಾಮಿ ಸ್ಪೀಕರ್‌ ಅವರ ಸಮ್ಮುಖದಲ್ಲಿ ಎಚ್‌ಡಿಕೆ ವಚನ ಬೋಧಿಸಿದರು.ಈ ವೇಳೆ ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸಿದ ಕುಮಾರಸ್ವಾಮಿ ಅವರು, ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಸ್ಥಾನ ಪಡೆದುಕೊಂಡರು.

ಪ್ರತಿಷ್ಠೆಯ ಕಣವಾಗಿದ್ದ ಮಂಡ್ಯ ಲೋಕ ಸಭಾ ಕ್ಷೇತ್ರದಲ್ಲಿ ಜೆಡಿಎಸ್​ ಪಕ್ಷದ ವರಿಷ್ಠ ಎಚ್​ ಡಿ ಕುಮಾರಸ್ವಾಮಿ ಗೆಲುವು ಸಾಧಿಸಿದ್ದರು. ಈ ಮೂಲಕ ತೀವ್ರ ಜಿದ್ದಾಜಿದ್ದಿಯಲ್ಲಿ ಅವರು ಕಾಂಗ್ರೆಸ್​ ಅಭ್ಯರ್ಥಿ ಸ್ಟಾರ್​ ಚಂದ್ರು ವಿರುದ್ಧ 2 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಕಂಡಿದ್ದರು.

Read More
Next Story