Heavy Rain | ಕರಾವಳಿ, ಮಲೆನಾಡಿನಲ್ಲಿ ಮಳೆ ಅಬ್ಬರ ; ದ. ಕನ್ನಡ ಜಿಲ್ಲೆಯಲ್ಲಿ ಇಂದು, ನಾಳೆ ಶಾಲಾ-ಕಾಲೇಜಿಗೆ ರಜೆ ಘೋಷಣೆ
x

Heavy Rain | ಕರಾವಳಿ, ಮಲೆನಾಡಿನಲ್ಲಿ ಮಳೆ ಅಬ್ಬರ ; ದ. ಕನ್ನಡ ಜಿಲ್ಲೆಯಲ್ಲಿ ಇಂದು, ನಾಳೆ ಶಾಲಾ-ಕಾಲೇಜಿಗೆ ರಜೆ ಘೋಷಣೆ

ಮಲೆನಾಡು ಹಾಗೂ ಕರಾವಳಿಯ ಹಲವು ಜಿಲ್ಲೆಗಳಲ್ಲಿ ಮಳೆ ಆರ್ಭಟ ಜೋರಾಗಿದ್ದು, ಸಾಕಷ್ಟು ಅವಾಂತರ ಸೃಷ್ಟಿಸಿದೆ. ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಮೇ 27 ಹಾಗೂ 28 ರಂದು ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ.

ಸರ್ಕಾರಿ, ಅನುದಾನಿತ, ಖಾಸಗಿ ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.

ಮಲೆನಾಡು ಹಾಗೂ ಕರಾವಳಿಯ ಹಲವು ಜಿಲ್ಲೆಗಳಲ್ಲಿ ಮಳೆ ಆರ್ಭಟ ಜೋರಾಗಿದ್ದು, ಸಾಕಷ್ಟು ಅವಾಂತರ ಸೃಷ್ಟಿಸಿದೆ. ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಮೈಸೂರು ಜಿಲ್ಲೆಯಲ್ಲಿ ಮಳೆ ಮುಂದುವರಿದಿರುವ ಹಿನ್ನೆಲೆ ಎಲ್ಲ ಅಂಗನವಾಡಿ ಕೇಂದ್ರಗಳಿಗೆ ಮೇ 27 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್ ರೆಡ್ಡಿ ಆದೇಶ ಹೊರಡಿಸಿದ್ದಾರೆ.

ಹಲವೆಡೆ ಮಳೆಯಿಂದ ಅವಾಂತರ

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಮಳೆಯಿಂದ ಪಂಪ್‌ವೆಲ್ ಫ್ಲೈ ಓವರ್ ಕೆಳಭಾಗ ಸಂಪೂರ್ಣ ಜಲಾವೃತವಾಗಿದೆ.

ಕೊಡಿಯಾಲ್ ಬೈಲ್ ಭಗವತಿ ನಗರ ದ್ವೀಪವಾಗಿ ಮಾರ್ಪಟ್ಟಿದೆ. ರಾಜಕಾಲುವೆ ನೀರು ಮನೆಗಳಿಗೆ ನುಗ್ಗಿದ್ದು, ಜನ ಪರದಾಡುವಂತಾಗಿದೆ.

ನೇತ್ರಾವತಿ ನದಿ ತುಂಬಿ ಹರಿಯುತ್ತಿದ್ದು, ನದಿ ತೀರದಲ್ಲಿರುವ ಜನರಿಗೆ ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.

ಚಿಕ್ಕಮಗಳೂರು ಜಿಲ್ಲೆಯ ಕಡಬ ತಾಲೂಕಿನಲ್ಲಿರುವ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ಸ್ನಾನ ಘಟ್ಟ ಮುಳುಗಡೆಯಾಗಿದೆ. ಭಕ್ತಾಧಿಗಳಿಗೆ ಸ್ನಾನಘಟ್ಟಕ್ಕೆ ಇಳಿಯದಂತೆ ನಿರ್ಬಂಧಿಸಲಾಗಿದೆ.

Read More
Next Story