ರಾಜ್ಯದಲ್ಲಿ ಮುಂದಿನ ಐದು ದಿನಗಳ ಕಾಲ ಭಾರೀ ಮಳೆ ಮುನ್ಸೂಚನೆ
x

ರಾಜ್ಯದಲ್ಲಿ ಇನ್ನೂ ಐದು ದಿನ ಮಳೆಯಾಗಲಿದೆ. 

ರಾಜ್ಯದಲ್ಲಿ ಮುಂದಿನ ಐದು ದಿನಗಳ ಕಾಲ ಭಾರೀ ಮಳೆ ಮುನ್ಸೂಚನೆ

ಕರಾವಳಿ ಜಿಲ್ಲೆಗಳಲ್ಲಿ ಗಂಟೆಗೆ 40 ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿರುವುದರಿಂದ, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಸೂಚನೆ ನೀಡಿದೆ.


ಕೇರಳದಲ್ಲಿ ವಾಯುಭಾರ ಕುಸಿತದಿಂದ ಉಂಟಾಗಿರುವ ಚಂಡಮಾರುತದ ಪರಿಣಾಮ ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಇನ್ನೂ ಐದು ದಿನ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ರಾಜ್ಯದ 12ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಂಗಳವಾರ ಧಾರಾಕಾರ ಮಳೆ ಮುಂದುವರಿಯಲಿದೆ. ಮುಂದಿನ ಐದು ದಿನಗಳವರೆಗೆ ಭಾರೀ ಮಳೆ ಆಗಲಿದೆ. ಮಂಗಳವಾರ ವಿವಿಧ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಆಗಲಿದೆ. ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಮಂಗಳವಾರ ವಿವಿಧ ಜಿಲ್ಲೆಗಳಿಗೆ ಯೆಲ್ಲೋ ಹಾಗೂ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಈ ಭಾಗದಲ್ಲಿ ಆರೆಂಜ್ ಅಲರ್ಟ್ ಕೊಡಲಾಗಿದೆ. ಹಾಸನ, ಚಿಕ್ಕಮಗಳೂರು, ಕೊಡಗು ಹಾಗೂ ಶಿವಮೊಗ್ಗ, ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷನೆ ಮಾಡಲಾಗಿದೆ.

ಮೀನುಗಾರರಿಗೆ ಎಚ್ಚರಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಂಟೆಗೆ 40 ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿರುವುದರಿಂದ, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಸೂಚನೆ ನೀಡಿದೆ. ಗಾಳಿಯೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಸುರಕ್ಷಿತ ಸ್ಥಳಗಳಲ್ಲಿ ಇರುವಂತೆ ಮನವಿ ಮಾಡಿದೆ.

ಬೆಂಗಳೂರಿನಲ್ಲಿ ಭಾರೀ ಮಳೆ ನಿರೀಕ್ಷೆ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲೂ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕೆಲ ದಿನಗಳಿಂದ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದೆ. ಮಂಗಳವಾರ ಭಾರೀ ಮಳೆಯಾಗುವ ಸಾಧ್ಯತೆ ಇದೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Read More
Next Story