Meteorological department predicts heavy rain till July 31 across the state
x

ಸಾಂದರ್ಭಿಕ ಚಿತ್ರ

Monsoon Rain| ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆ; ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಹಿನ್ನೆಲೆ ಭಾರೀ ಮಳೆಯ ಮುನ್ಸೂಚನೆ ನೀಡಿದೆ. ಇದರಿಂದ ಶಾಲೆ, ಪಿಯುಸಿ ವರೆಗೆ ವಿದ್ಯಾರ್ಥಿಗಳಿಗೆ ರಜೆ ಘೋಷಣೆ ಮಾಡಲಾಗಿದೆ.


ರಾಜ್ಯದ ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ಎಡೆಬಿಡದೆ ಮಳೆಯಾಗುತ್ತಿದ್ದು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು ಸೇರಿ 6 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿರುವ ಹಿನ್ನೆಲೆಯಲ್ಲು ಕೆಲ ಜಿಲ್ಲೆಗಳಲ್ಲಿ ಶಾಲಾ ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ.

ಉಡುಪಿಯಲ್ಲಿ ಶಾಲೆಗಳಿಗೆ ರಜೆ

ಉಡುಪಿ ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಹಿನ್ನೆಲೆ ಭಾರೀ ಮಳೆಯ ಮುನ್ಸೂಚನೆ ನೀಡಿದೆ. ಇದರಿಂದ ಶಾಲೆ, ಪಿಯುಸಿ ವರೆಗೆ ವಿದ್ಯಾರ್ಥಿಗಳಿಗೆ ರಜೆ ಘೋಷಣೆ ಮಾಡಿ ಉಡುಪಿ ಡಿಸಿ ಡಾ.ವಿದ್ಯಾ ಕುಮಾರಿ ಆದೇಶ ಹೊರಡಿಸಿದ್ದಾರೆ.

ಭಾರಿ‌ ಮಳೆ ಹಿನ್ನೆಲೆಯಲ್ಲಿ ಶಿವಮೊಗ್ಗದ ಹೊಸನಗರ ಮತ್ತು ಸಾಗರ ತಾಲೂಕಿನಾದ್ಯಂತ ಶಾಲೆ ಕಾಲೇಜುಗಳಿಗೆ ರಜೆ ನೀಡಲಾಗಿದೆ. ಉಳಿದೆಡೆ ಎಂದಿನಂತೆ ಇತರ ಜಿಲ್ಲೆಗಳಲ್ಲಿ ಶಾಲೆ -ಅಂಗನವಾಡಿ -ಕಾಲೇಜು ನಡೆಯಲಿದೆ.

ಉತ್ತರ ಕನ್ನಡದಲ್ಲೂ ಭಾರೀ ಮಳೆ

ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನೆಲೆ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯ ಕುಮಟಾ,‌ಕಾರವಾರ, ಅಂಕೋಲಾ, ಹೊನ್ನಾವರ, ಭಟ್ಕಳ, ಶಿರಸಿ,‌ಸಿದ್ದಾಪುರ, ಯಲ್ಲಾಪುರ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಆದೇಶ ಹೊರಡಿಸಿದ್ದಾರೆ. ಕೊಡಗಿನಲ್ಲೂ ಭಾರೀ ಮಳೆ ಹಿನ್ನೆಲೆ ಪ್ರೌಢ ಶಾಲೆವರೆಗೆ ರಜೆ ಘೋಷಿಸಲಾಗಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಚಿಕ್ಕಬಳ್ಳಾಪುರ, ಶಿವಮೊಗ್ಗ, ಬೆಳಗಾವಿ, ಧಾರವಾಡ, ಕೋಲಾರ, ತುಮಕೂರು, ಚಿತ್ರದುರ್ಗ, ಹಾವೇರಿ, ದಾವಣಗೆರೆ, ವಿಜಯನಗರ, ಬಳ್ಳಾರಿ, ಕೊಪ್ಪಳ, ರಾಯಚೂರು, ಬಾಗಲಕೋಟೆ, ವಿಜಯಪುರ, ಗದಗ, ಯಾದಗಿರಿ, ಕಲಬುರಗಿ, ಚಾಮರಾಜನಗರ, ಬೀದರ್ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ ಮಾಡಲಾಗಿದೆ.

ಬೆಂಗಳೂರಲ್ಲಿ ಕಳೆದ ಎರಡು ಮೂರು ದಿನಗಳಿಂದ ಮೋಡ ಕವಿದ ವಾತಾವರಣ ಇದೆ. ಆಗಾಗ ಮಳೆ ಕೂಡ ಬೀಳುತ್ತಿದೆ. ಇದೇ ರೀತಿಯ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Read More
Next Story