ರಾಜ್ಯಾದ್ಯಂತ ಭಾರೀ ಮಳೆ ಸಾಧ್ಯತೆ; 21 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಘೋಷಣೆ
x

ರಾಜ್ಯಾದ್ಯಂತ ಭಾರೀ ಮಳೆ ಸಾಧ್ಯತೆ; 21 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್' ಘೋಷಣೆ


ರಾಜ್ಯದಾದ್ಯಂತ ಮುಂದಿನ 24 ಗಂಟೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು 21 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್' ಘೋಷಿಸಿದೆ.

ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ಹಾವೇರಿ, ಶಿವಮೊಗ್ಗ, ಉಡುಪಿ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಕೊಡಗು, ಹಾಸನ, ತುಮಕೂರು, ಕೊಡಗು, ಮೈಸೂರು ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಂಭವವಿದ್ದು, ಹವಾಮಾನ ಇಲಾಖೆ 'ಯೆಲ್ಲೊ ಅಲರ್ಟ್' ನೀಡಿದೆ.

ಭಾನುವಾರ ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಎಲ್ಲ ಜಿಲ್ಲೆಗಳಲ್ಲಿ 11 ರಿಂದ 20 ಸೆಂ.ಮೀ.ವರೆಗೆ ಮಳೆಯಾಗುವ ಲಕ್ಷಣ ಇದೆ. ಕರಾವಳಿಯ ಮೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ನ ಎಚ್ಚರಿಕೆ ನೀಡಲಾಗಿದ್ದು, 6 ರಿಂದ 11 ಸೆಂ.ಮೀ ವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಸೋಮವಾರ (ಏ. 22) ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಮಂಡ್ಯ, ಮೈಸೂರು, ಶಿವಮೊಗ್ಗ ಹಾಗೂ ತುಮಕೂರಿನಲ್ಲಿ 6 ರಿಂದ 11 ಸೆಂ.ಮೀ ವರೆಗೆ ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್‌ ಎಚ್ಚರಿಕೆ ನೀಡಲಾಗಿದೆ. ಗುಡುಗು, ಮಿಂಚು, ಗಾಳಿ ಸಹಿತ ಮಳೆಯಾಗಲಿದೆ. ಕರಾವಳಿಯಲ್ಲಿ ಗಾಳಿಯು 30ರಿಂದ 40 ಕಿ.ಮೀ ವೇಗ ಬೀಸಲಿದೆ. ಉತ್ತರ ಒಳನಾಡಿನಲ್ಲಿ ಗಾಳಿಯು 50 ರಿಂದ 60 ಕಿ.ಮೀ ವೇಗದಲ್ಲಿ ಬೀಸಲಿದೆ.

ಕಳೆದ 24 ಗಂಟೆಯಲ್ಲಿ ಉತ್ತರ ಕನ್ನಡದ ಕುಮಟಾದಲ್ಲಿ ಅತಿ ಹೆಚ್ಚು 13 ಸೆಂ.ಮೀ ಮಳೆಯಾಗಿದೆ. ಗೋಕರ್ಣದಲ್ಲಿ 10, ಮಂಕಿ 8, ಕೊಪ್ಪ, ಕಮ್ಮರಡಿಯಲ್ಲಿ ತಲಾ 7, ಉಡುಪಿ, ಜಯಪುರ, ಮಂಗಳೂರಿನಲ್ಲಿ ತಲಾ 6, ಕುಂದಾಪುರ, ಬಾಳೆಹೊನ್ನೂರು, ಚಿಕ್ಕಮಗಳೂರಿನಲ್ಲಿ ತಲಾ 5, ಧರ್ಮಸ್ಥಳ, ಕೊಟ್ಟಿಗೆಹಾರದಲ್ಲಿ ತಲಾ 4, ಸಿದ್ದಾಪುರ, ಬೀದರ್, ಕಳಸ, ಕುಶಾಲನಗರದಲ್ಲಿ ತಲಾ 3 ಸೆಂ.ಮೀ ಮಳೆಯಾಗಿದೆ. ಉಳಿದಂತೆ ರಾಜ್ಯದ ವಿವಿಧ ಕಡೆ ಮಳೆಯಾದ ವರದಿಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Read More
Next Story