Heavy rains forecast for three days in the state, red alert for seven districts
x

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. 

Weather Update| ಬೆಂಗಳೂರು ಸೇರಿ 25 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ: ಯೆಲ್ಲೋ ಅಲರ್ಟ್​ ಘೋಷಣೆ

ಏಪ್ರಿಲ್ 3ರಿಂದ ಮಳೆ ಪ್ರಾರಂಭವಾಗಲಿದ್ದು, ರಾಜ್ಯದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.


ರಾಜ್ಯದಲ್ಲಿ 25ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಆಲಿಕಲ್ಲು ಸಹಿತ ಜೋರು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಏಪ್ರಿಲ್ 3ರಿಂದ ಮಳೆ ಪ್ರಾರಂಭವಾಗಲಿದ್ದು, ರಾಜ್ಯದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ವಿಜಯನಗರ, ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ವಿಜಯಪುರ, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಬೀದರ್, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದ್ದು, ಸಾಧಾರಣ ಮಳೆಯಾಗಬಹುದು. ಧಾರವಾಡ ಮತ್ತು ಕೊಪ್ಪಳದಲ್ಲಿ ಈಗಾಗಲೇ ಮಳೆಯಾಗಿದೆ.

ಚಂಡಮಾರುತ ಎಚ್ಚರಿಕೆ

ಒಡಿಶಾದ ಕರಾವಳಿಯಲ್ಲಿ ವಾಯುಭಾರ ಕುಸಿತ ಉಂಟಾಗಿ ಚಂಡಮಾರುತ ರೂಪುಗೊಳ್ಳುವ ಸಾಧ್ಯತೆ ಇದೆ. ಏಪ್ರಿಲ್ 1ರಂದು ದಕ್ಷಿಣ ಕನ್ನಡ, ಬೆಳಗಾವಿ, ಚಿಕ್ಕಮಗಳೂರಿನಲ್ಲಿ ಸಾಧಾರಣ ಮಳೆ, ಏಪ್ರಿಲ್ 3ರಂದು ಗುಡುಗು ಸಹಿತ ಮಳೆಯಾಗಲಿದೆ ಹಾಗೂ ಏಪ್ರಿಲ್ 4ರಂದು ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Read More
Next Story