Heavy Rain| ರಾಜ್ಯದಲ್ಲಿ 5 ದಿನಗಳ ಕಾಲ ಗುಡುಗು ಸಹಿತ ಭಾರೀ ಮಳೆ
x

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. 

Heavy Rain| ರಾಜ್ಯದಲ್ಲಿ 5 ದಿನಗಳ ಕಾಲ ಗುಡುಗು ಸಹಿತ ಭಾರೀ ಮಳೆ

ಪೂರ್ವ ಮುಂಗಾರು ಮಳೆ ತೀವ್ರಗೊಳ್ಳುವ ನಿರೀಕ್ಷೆಯಿದ್ದು, 5 ದಿನಗಳ ಕಾಲ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಮತ್ತು ಮಧ್ಯಮದಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ.


ರಾಜ್ಯದ ಹಲವು ಜಿಲ್ಲೆಗಳಲ್ಲಿ ಐದು ದಿನ ಗುಡುಗು, ಮಿಂಚು, ಬಿರುಗಾಳಿ ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಪೂರ್ವ ಮುಂಗಾರು ಮಳೆ ತೀವ್ರಗೊಳ್ಳುವ ನಿರೀಕ್ಷೆಯಿದ್ದು, 5 ದಿನಗಳ ಕಾಲ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಮತ್ತು ಮಧ್ಯಮದಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿ ರಾಜ್ಯದ 18 ಜಿಲ್ಲೆಗಳಲ್ಲಿ ಮಂಗಳವಾರ ಮಳೆಯಾಗಲಿದೆ. ಬೆಂಗಳೂರು, ಹಾವೇರಿ, ಚಿತ್ರದುರ್ಗ, ಇಳಕಲ್, ತ್ಯಾಗರ್ತಿ, ಆನವಟ್ಟಿಯಲ್ಲಿ ಮಳೆಯಾಗಿದೆ. ಮುಂದಿನ ಮೂರು ದಿನಗಳ ಕಾಲ ಕರಾವಳಿ ಭಾಗದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈಗಾಗಲೇ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಿದ್ದು, ಅವಾಂತರ ಸೃಷ್ಟಿಸಿದೆ. ಹಾಸನದ ಉಪನಗರ ಬಿಟಿ ಕೊಪ್ಪಲ್​​ನನಲ್ಲಿ ಮಳೆಯ ಸಮಯದಲ್ಲಿ ತುಂಡಾಗಿ ಬಿದ್ದ ವಿದ್ಯುತ್ ತಂತಿಯನ್ನು ತುಳಿದು ಕೆಎಸ್‌ ಆರ್‌ಟಿಸಿ ಉದ್ಯೋಗಿಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಅದೇ ತಾಲ್ಲೂಕಿನ ಕುಣಿಗನಹಳ್ಳಿಯಲ್ಲಿ, ಬಲವಾದ ಗಾಳಿ ಮತ್ತು ಮಳೆಯಿಂದಾಗಿ ವಿದ್ಯುತ್ ಕಂಬವೊಂದು ಆಟೋರಿಕ್ಷಾದ ಮೇಲೆ ಉರುಳಿಬಿದ್ದು ಹಾನಿ ಸಂಭವಿಸಿದೆ.

ಬೆಂಗಳೂರಿನ ನೆಲಮಂಗಲದಲ್ಲಿ ಸುರಿದ ಭಾರೀ ಮಳೆಯಿಂದಾಗಿ ಶಾಲೆ, ಸ್ತ್ರೀ ಶಕ್ತಿ ಭವನ ಮತ್ತು ಹಲವಾರು ಮನೆಗಳ ಚಾವಣಿಗೆ ಹಾನಿಯಾಗಿದೆ. ತೆಂಗಿನಕಾಯಿ ಮತ್ತು ಅಡಿಕೆ ಮರಗಳು ಬುಡಮೇಲಾಗಿ ನೆಲಕ್ಕುರುಳಿದ್ದು, ಅವ್ಯವಸ್ಥೆಯನ್ನು ಮತ್ತಷ್ಟು ಹೆಚ್ಚಿಸಿದೆ. ದೇವನಹಳ್ಳಿಯಲ್ಲಿ ಎರಡು ಗಂಟೆಗಳಿಗೂ ಹೆಚ್ಚು ಕಾಲ ಸುರಿದ ಮಳೆಯಿಂದ ತಗ್ಗು ಪ್ರದೇಶಗಳ ಮನೆಗಳಿಗೆ ನೀರು ನುಗ್ಗಿದೆ.

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನಲ್ಲಿ ಮಳೆಯಿಂದ ಬಾಳೆ ತೋಟಗಳು ಹಾನಿಗೊಳಗಾಗಿವೆ. ವಿವಿಧ ಸ್ಥಳಗಳಲ್ಲಿ ಮರಗಳು ಮತ್ತು ವಿದ್ಯುತ್ ಕಂಬಗಳು ಸಹ ಧರೆಗುರುಳಿವೆ.

Read More
Next Story