Weather Report: ರಾಜ್ಯಾದ್ಯಂತ ಮುಂದಿನ ಏಳು ದಿನಗಳಲ್ಲಿ ಭಾರೀ ಮಳೆ
x

ರಾಜ್ಯದಲ್ಲಿ ಮುಂದಿನ ಏಳು ದಿನ ಮಳೆಯಾಗುವ ಸಾಧ್ಯತೆ ಇದೆ. 

Weather Report: ರಾಜ್ಯಾದ್ಯಂತ ಮುಂದಿನ ಏಳು ದಿನಗಳಲ್ಲಿ ಭಾರೀ ಮಳೆ

ದಕ್ಷಿಣ ಒಳಭಾಗದ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ ಸೇರಿದಂತೆ ಮುಂತಾದ ಕಡೆ ಗುಡುಗು ಸಹಿತ ಮಳೆಯಾಗಲಿದ್ದು ಗಂಟೆಗೆ 40 ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ.ದೆ̤


ಆಗ್ನೇಯ ಬಂಗಾಳ ಕೊಲ್ಲಿಯ ಕೆಲವು ಭಾಗಗಳು ಮತ್ತು ಅಂಡಮಾನ್- ನಿಕೋಬಾರ್ ದ್ವೀಪಗಳಿಗೆ ನೈಋತ್ಯ ಮಾನ್ಸೂನ್ ಮಾರುತ ಮೇ 13ರಂದು ಪ್ರವೇಶಿಸುವ ಸಾಧ್ಯತೆಯಿದ್ದು. ಮುಂದಿನ ಏಳು ದಿನಗಳವರೆಗೆ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಭಾನುವಾರ (ಮೇ 11)ರಂದು ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆ, ಉತ್ತರ ಕರ್ನಾಟಕದ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ವಿಜಯಪುರ, ಕಲಬುರಗಿ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆ, ದಕ್ಷಿಣ ಒಳಭಾಗದ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ರಾಮನಗರ, ಮೈಸೂರು ಮುಂತಾದ ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಅದೇ ರೀತಿ ಗಂಟೆಗೆ 40ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದೆ.

ಬೀದರ್ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯುವ ಸಾಧ್ಯತೆ ಇದ್ದು, ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಬೇಕು ಹಾಗೂ ಅನಗತ್ಯ ಓಡಾಡಬಾರದು ಎಂದು ತಿಳಿಸಿದೆ.

ಮೇ12ರಿಂದ 17ರವರೆಗೆ ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು ಗಂಟೆಗೆ 30ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು ಗಂಟೆಗೆ 40ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ವಿಜಯನಗರ, ಮೈಸೂರು ಮುಂತಾದ ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಬೆಂಗಳೂರು ನಗರ ಮತ್ತು ನೆರೆಹೊರೆಯ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಭಾಗಶಃ ಮೋಡ ಕವಿದ ವಾತಾವರಣವಿರಲಿದ್ದು, ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಗಂಟೆಗೆ 30ರಿಂದ ೪೦ ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದ್ದು ಗರಿಷ್ಠ 33° ಸೆಲ್ಸಿಯಸ್‌ ಹಾಗೂ ಕನಿಷ್ಠ 22°ಸೆಲ್ಸಿಯಸ್‌ ತಾಪಮಾನವಿರಲಿದೆ. ರಾಜ್ಯದಲ್ಲಿ ಮುಂದಿನ 5 ದಿನಗಳವರೆಗೆ ಗರಿಷ್ಠ ತಾಪಮಾನದಲ್ಲಿ ಯಾವುದೇ ಬದಲಾವಣೆಗಳಿರುವುದಿಲ್ಲ ಪ್ರಕಟಣೆಯಲ್ಲಿ ಎಂದು ತಿಳಿಸಲಾಗಿದೆ.

Read More
Next Story