ಕರ್ನಾಟಕದ ಹಲವೆಡೆ ಭಾರೀ ಮಳೆ ; ಏಳು ಜಿಲ್ಲೆಗಳಲ್ಲಿ ಶಾಲಾ ಕಾಲೇಜಿಗೆ ರಜೆ ಘೋಷಣೆ
x

ಬೆಳಗಾವಿಯಲ್ಲಿ ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ. 

ಕರ್ನಾಟಕದ ಹಲವೆಡೆ ಭಾರೀ ಮಳೆ ; ಏಳು ಜಿಲ್ಲೆಗಳಲ್ಲಿ ಶಾಲಾ ಕಾಲೇಜಿಗೆ ರಜೆ ಘೋಷಣೆ

ಸಕಲೇಶಪುರ ಭಾಗದಲ್ಲಿ ಭಾನುವಾರದಿಂದ ಭಾರೀ ಮಳೆಯಾಗುತ್ತಿದ್ದು, ಕಡಗರವಳ್ಳಿ ಬಳಿ ಗುಡ್ಡ ಕುಸಿದಿದೆ. ಮತ್ತೆ ಗುಡ್ಡ ಕುಸಿತದ ಭೀತಿ ಹಿನ್ನೆಲೆಯಲ್ಲಿ ಸಂಚಾರ ಸ್ಥಗಿತಗೊಳಿಸಲಾಗಿದೆ.


ರಾಜ್ಯಾದ್ಯಂತ ಮುಂಗಾರು ಮಳೆಯ ಅಬ್ಬರ ಜೋರಾಗಿದೆ. ಕರಾವಳಿ, ಮಲೆನಾಡು ಹಾಗೂ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆ ಸಾಕಷ್ಟು ಅವಾಂತರ ಸೃಷ್ಟಿಸಿದೆ.

ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಉತ್ತರ ಕನ್ನಡ, ಕೊಡಗು, ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಕಳೆದ ಎರಡು ದಿನಗಳಿಂದ ಮಳೆ ಜೋರಾಗಿದೆ. ಮಳೆ ಆರ್ಭಟದಿಂದಾಗಿ ಏಳು ಜಿಲ್ಲೆಗಳ ವಿವಿಧ ತಾಲೂಕುಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಹಿನ್ನೆಲೆಯಲ್ಲಿ 11 ತಾಲೂಕುಗಳಲ್ಲಿ ಪ್ರಾಥಮಿಕ, ಪ್ರೌಢಶಾಲೆ, ಪಿಯು ಕಾಲೇಜುಗಳಿಗೆ ಸೋಮವಾರ ರಜೆ ಘೋಷಣೆ ಮಾಡಲಾಗಿದೆ. ಮುಂಡಗೋಡು ತಾಲೂಕಿನಲ್ಲಿ ಮಾತ್ರ ರಜೆ ನೀಡಿಲ್ಲ.

ದಕ್ಷಿಣ ಕನ್ನಡದಲ್ಲಿಯೂ ಭಾರೀ ಮಳೆ ಮುನ್ಸೂಚನೆ ಕಾರಣ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಹೆಚ್​.ವಿ.ದರ್ಶನ್ ಆದೇಶ ಹೊರಡಿಸಿದ್ದಾರೆ.

ಶಿವಮೊಗ್ಗ ಜಿಲ್ಕೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಶಿವಮೊಗ್ಗ ಡಿಸಿ ಗುರುದತ್ತ ಹೆಗಡೆ ಆದೇಶ ಹೊರಡಿಸಿದ್ದಾರೆ. ಹಾಸನದ ವಿವಿಧ ತಾಲೂಕುಗಳಲ್ಲಿ ಶಾಲೆ ಕಾಲೇಜು ರಜೆ ಘೋಷಿಸಲಾಗಿದೆ.

ಕೊಡಗಿನಲ್ಲಿ ಆರೆಂಜ್ ಅಲರ್ಟ್ ಹಿನ್ನೆಲೆಯಲ್ಲಿ ಜಿಲ್ಲೆಯ ಅಂಗನವಾಡಿ, ಶಾಲಾ ಕಾಲೇಜಿಗೆ ಸೋಮವಾರ ರಜೆ ಘೋಷಿಸಲಾಗಿದೆ.

ಜೋರು ಗಾಳಿ‌ ಮಳೆಯಾಗುವ ಸಾಧ್ಯತೆ ಹಿನ್ನೆಲೆ ಶಾಲಾ ಕಾಲೇಜುಗಳಿಗೆ ರಜೆ ನೀಡಿ ಕೊಡಗು ಜಿಲ್ಲಾಧಿಕಾರಿ ವೆಂಕಟರಾಜಾ ಆದೇಶ ಹೊರಡಿಸಿದ್ದಾರೆ. ಹಾರಂಗಿ ಜಲಾಶಯಕ್ಕೆ ಒಳ ಹರಿವು ಹೆಚ್ಚಾಗಿದ್ದು, ಡ್ಯಾಂನಿಂದ 8 ಸಾವಿರ ಕ್ಯೂಸೆಕ್ ನೀರು ಹೊರಬಿಡಲಾಗಿದೆ.

ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಕೂಡ ಧಾರಾಕಾರ ಮಳೆಯಾಗುತ್ತಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಮೂಡಿಗೆರೆ, ಕಳಸ, ಶೃಂಗೇರಿ, ಕೊಪ್ಪ, ಎನ್.ಆರ್.ಪುರ ತಾಲೂಕುಗಳ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ರಸ್ತೆ ಸಂಚಾರ ಬಂದ್

ಸಕಲೇಶಪುರ ಭಾಗದಲ್ಲಿ ಭಾನುವಾರದಿಂದ ಭಾರೀ ಮಳೆಯಾಗುತ್ತಿದ್ದು, ಕಡಗರವಳ್ಳಿ ಬಳಿ ಗುಡ್ಡ ಕುಸಿದಿದೆ. ಮತ್ತೆ ಗುಡ್ಡ ಕುಸಿತದ ಭೀತಿ ಹಿನ್ನೆಲೆಯಲ್ಲಿ ಸಂಚಾರ ಸ್ಥಗಿತಗೊಳಿಸಲಾಗಿದೆ.

ದಾವಣಗೆರೆ ಜಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದ್ದು, ಶಾಲೆ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆ ಮುಂದುವರಿದಿದೆ. ಶೃಂಗೇರಿ ತಾಲೂಕಿನಲ್ಲಿ ತುಂಗಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಗಾಂಧಿ ಮೈದಾನ, ಪ್ಯಾರಲಲ್ ರಸ್ತೆ ಸಂಪೂರ್ಣ ಜಲಾವೃತವಾಗಿದೆ.

Read More
Next Story