Heavy rains in the state for ten days; Orange alert declared for 7 districts including Shivamogga
x
ಸಾಂದರ್ಭಿಕ ಚಿತ್ರ

ರಾಜ್ಯದಲ್ಲಿ ಹತ್ತು ದಿನ ಭಾರೀ ಮಳೆ; 7 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಣೆ

ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಮತ್ತು ತುಮಕೂರಲ್ಲಿ ಸಣ್ಣ ಪ್ರಮಾಣದ ಮಳೆಯಾಗಲಿದೆ.


Click the Play button to hear this message in audio format

ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ಹವಾಮಾನ ವೈಪರಿತ್ಯದಿಂದಾಗಿ ರಾಜ್ಯದಲ್ಲಿ ಮುಂದಿನ ಹತ್ತು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದಲ್ಲಿ ಬುಧವಾರ (ಅ.22) ಭಾರಿ ಮಳೆಯಾಗುವ ಸಾಧ್ಯತೆಯಿದ್ದು ಶಿವಮೊಗ್ಗ,ಕೊಡಗು ಸೇರಿದಂತೆ ಏಳು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್​ ಘೋಷಿಸಲಾಗಿದೆ.

ಕರಾವಳಿಯಲ್ಲಿ ವರುಣಾರ್ಭಟ ಮುಂದುವರಿಯಲಿದ್ದು, ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು, ಉತ್ತರ ಒಳನಾಡು, ಕರಾವಳಿಯಲ್ಲಿ ಭಾರೀ ಮಳೆಯಾಗಲಿದೆ.

ಎಲ್ಲೆಲ್ಲಿ ಮಳೆ?

ದಕ್ಷಿಣ ಒಳನಾಡು ಭಾಗದ ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಚಾಮರಾಜನಗರ ಮತ್ತು ಹಾಸನದಲ್ಲಿ ಆರೆಂಜ್​ ಅಲರ್ಟ್​ ಇರಲಿದೆ ಎಂದು ಹವಾಮಾನ ಇಲಾಖೆ ಘೊಷಿಸಿದೆ.

ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಮತ್ತು ತುಮಕೂರಲ್ಲಿ ಸಣ್ಣ ಪ್ರಮಾಣದ ಮಳೆಯಾಗಲಿದೆ. ಉತ್ತರ ಒಳನಾಡು ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಬೀದರ್​, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು ಮತ್ತು ಯಾದಗಿರಿಲ್ಲಿ ಸಣ್ಣ ಪ್ರಮಾಣದ ಮಳೆಯಾಗಲಿದೆ. ಬಳ್ಳಾರಿ ಮತ್ತು ವಿಜಯನಗರದಲ್ಲಿ ಮೋಡ ಕವಿದ ವಾತಾವಣರಣ ಅಥವಾ ತುಂತುರು ಮಳೆಯ ನಿರೀಕ್ಷೆ ಇದೆ.

ಉಡುಪಿಯಲ್ಲಿ ವರುಣಾರ್ಭಟ

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಭಾರಿ ಪ್ರಮಾಣದ ಮಳೆಯಾಗಲಿದ್ದು, ಆರೆಂಜ್​ ಅಲರ್ಟ್​ ಘೋಷಿಸಲಾಗಿದೆ. ಮಳೆ ಜೊತೆ ಗಾಳಿಯ ವೇಗ ಗಂಟೆಗೆ 35-45 ಕಿ.ಮೀ ಇರುವ ಸಾಧ್ಯತೆ ಹಿನ್ನಲೆ ಮುನ್ನೆಚ್ಚರಿಕೆಯಾಗಿ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲೂ ಸಾಧಾರಣ ಮಳೆಯಾಗಲಿದೆ.

ಬೆಂಗಳೂರಲ್ಲಿ ಗಾಳಿ ಮಳೆ

ರಾಜಧಾನಿ ಬೆಂಗಳೂರಲ್ಲಿ ಗಾಳಿ ಸಹಿತ ಸಾಧಾರಣ ಮಳೆಯ ಮುನ್ಸೂಚನೆ ಇದ್ದು, ಶೇ. 86ರಷ್ಟು ಮಳೆಯಾಗುವ ಸಾಧ್ಯತೆ ಇದ್ದು, ಗಾಳಿಯ ವೇಗ ಗಂಟೆಗೆ 11 ರಿಂದ 20 ಕಿ.ಮೀ ಇರಲಿದೆ. ನಗರದ ಗರಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್​ ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ ಎಂದು ಹವಾವಾನ ಇಲಾಖೆ ತಿಳಿಸಿದೆ.

Read More
Next Story