ಮಾನಹಾನಿ ಹೇಳಿಕೆ ನೀಡದಂತೆ ಸಿಪಿವೈ ಪುತ್ರಿ ನಿಶಾಗೆ ಹೈಕೋರ್ಟ್‌ ನಿರ್ಬಂಧ
x
ಸಿ.ಪಿ ಯೋಗೇಶ್ವರ್‌ ವಿರುದ್ಧ ಮಾನಹಾನಿ ಹೇಳಿಕೆ ನೀಡದಂತೆ ನಿಶಾ ಯೋಗೇಶ್ವರ್ ಹೈಕೋರ್ಟ್‌ ನಿರ್ಬಂಧ ಹೇರಿದೆ.

ಮಾನಹಾನಿ ಹೇಳಿಕೆ ನೀಡದಂತೆ ಸಿಪಿವೈ ಪುತ್ರಿ ನಿಶಾಗೆ ಹೈಕೋರ್ಟ್‌ ನಿರ್ಬಂಧ

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ವಿರುದ್ಧ ಅವರ ಮೊದಲ ಪತ್ನಿಯ ಪುತ್ರಿ ನಿಶಾ ಯೋಗೇಶ್ವರ್, ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಮಾನಹಾನಿಕರ ಅಥವಾ ಅವಹೇಳನಕಾರಿ ಹೇಳಿಕೆಗಳನ್ನು ನೀಡದಂತೆ ಹೈಕೋರ್ಟ್ ನಿರ್ಬಂಧಿಸಿದೆ.


Click the Play button to hear this message in audio format

ರಾಜ್ಯದಲ್ಲಿ ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಹಿನ್ನಲೆಯಲ್ಲಿ ಮಹತ್ವದ ರಾಜಕೀಯ ಬೆಳವಣಿಗೆಗಳು ನಡೆಯುತ್ತಿದ್ದು, ಈ ನಡುವೆ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ವಿರುದ್ಧ ಅವರ ಮೊದಲ ಪತ್ನಿಯ ಪುತ್ರಿ ನಿಶಾ ಯೋಗೇಶ್ವರ್, ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಮಾನಹಾನಿಕರ ಅಥವಾ ಅವಹೇಳನಕಾರಿ ಹೇಳಿಕೆಗಳನ್ನು ನೀಡದಂತೆ ಹೈಕೋರ್ಟ್ ನಿರ್ಬಂಧಿಸಿದೆ.

ಈ ಸಂಬಂಧ ಸಿ.ಪಿ.ಯೋಗೇಶ್ವರ್ ಪತ್ನಿ ಪಿ.ವಿ.ಶೀಲಾ ಸಲ್ಲಿಸಿರುವ ರಿಟ್ ಅರ್ಜಿಯನ್ನು ಸೋಮವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ ಚಂದನಗೌಡ‌ರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಕುರಿತಂತೆ ಮಧ್ಯಂತರ ಆದೇಶ ಹೊರಡಿಸಿದೆ.

'ನನ್ನ ಪತಿ ಸಿ.ಪಿ.ಯೋಗೇಶ್ವರ್ ಅವರು ಚುನಾವಣೆಗೆ ಸ್ಪರ್ಧಿಸಿರುವ ಬೆನ್ನಲ್ಲೇ ನಮ್ಮ ಮಲಮಗಳಾದ ನಿಶಾ ಯೋಗೇಶ್ವ‌ರ್ ಸಾಮಾಜಿಕ ಜಾಲತಾಣಗಳಲ್ಲಿ ನಮ್ಮ ಕುಟುಂಬದ ವಿರುದ್ಧ ಅವಹೇಳನಕಾರಿ, ಮಾನಹಾನಿಕರ, ಆಧಾರರಹಿತ ಮತ್ತು ಪ್ರಚೋದನಕಾರಿ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಈ ಸಂಬಂಧ ಬೆಂಗಳೂರಿನ ಸಿಇಎನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ' ಎಂದು ಆಕ್ಷೇಪಿಸಿದ್ದಾರೆ.

ಅರ್ಜಿಯ ಮಧ್ಯಂತರ ಮನವಿಯನ್ನು ಪರಿಗಣಿಸಿರುವ ಹೈಕೋರ್ಟ್, 'ಇನ್‌ಸ್ಟಾಗ್ರಾಂ, ಎಕ್ಸ್ ಕಾರ್ಪ್ (ಟ್ವಿಟರ್), ಗೂಗಲ್ ಮತ್ತು ಯೂ-ಟ್ಯೂಬ್ ಜಾಲತಾಣಗಳಲ್ಲಿ ನಿಶಾ ಯೋಗೇಶ್ವರ್ ಅವರ ನಿಂದನಾತ್ಮಕ ಹೇಳಿಕೆಗಳನ್ನು ಅಪ್‌ಲೋಡ್ ಮಾಡಬಾರದು ಮತ್ತು ಈಗಾಗಲೇ ಪ್ರಸಾರ ಮಾಡಲಾಗಿರುವ ತುಣುಕುಗಳನ್ನು ತಡೆಹಿಡಿಯಬೇಕು' ಎಂದು ಮಧ್ಯಂತರ ಆದೇಶ ನೀಡಿ, ವಿಚಾರಣೆ ಮುಂದೂಡಿದೆ.

Read More
Next Story