Veerashaiva Lingayat Jangams are not Budga or Beda Jangams: High Court verdict
x

ಕರ್ನಾಟಕ ಹೈಕೋರ್ಟ್‌ 

ಜನೌಷಧ ಕೇಂದ್ರಗಳ ಸ್ಥಗಿತ ; ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆ

ಜನೌಷಧ ಕೇಂದ್ರಗಳ ಸ್ಥಗಿತಗೊಳಿಸುವ ಕುರಿತ ಸರ್ಕಾರದ ಕ್ರಮ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗಳನ್ನು ಮಂಗಳವಾರ ವಿಚಾರಣೆ ನಡೆಸಿದ ಹೈಕೋರ್ಟ್‌, ಮುಂದಿನ ವಿಚಾರಣೆವರೆಗೂ ಜನೌಷಧ ಕೇಂದ್ರ ಸ್ಥಗಿತಗೊಳಿಸದಂತೆ ಮಧ್ಯಂತರ ಆದೇಶ ನೀಡಿದೆ.


ಕರ್ನಾಟಕದಲ್ಲಿ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿನ ಜನೌಷಧ ಕೇಂದ್ರಗಳನ್ನು ಸ್ಥಗಿತಗೊಳಿಸಿದ್ದ ರಾಜ್ಯ ಸರ್ಕಾರದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ಮಂಗಳವಾರ ತಡೆ ನೀಡಿದೆ.

ಸರ್ಕಾರಿ ಆಸ್ಪತ್ರೆ ಆವರಣದಲ್ಲಿನ ಜನೌಷಧ ಕೇಂದ್ರಗಳ ಸ್ಥಗಿತ ಪ್ರಶ್ನಿಸಿ 16 ಜನರು ಹೈಕೋರ್ಟ್​ ಮೆಟ್ಟಿಲೇರಿದ್ದರು. ಈ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಐ.ಅರುಣ್ ಅವರಿದ್ದ ಹೈಕೋರ್ಟ್ ಪೀಠ ,ಮುಂದಿನ ವಿಚಾರಣೆವರೆಗೂ ಜನೌಷಧ ಕೇಂದ್ರ ಸ್ಥಗಿತ ಬೇಡ ಎಂದು ಮಧ್ಯಂತರ ಆದೇಶ ಹೊರಡಿಸಿದೆ.

ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿರುವ ಜನೌಷಧ ಕೇಂದ್ರಗಳನ್ನು ಮಾತ್ರ ಸ್ಥಗಿತಗೊಳಿಸುವಂತೆ ಸರ್ಕಾರ ಆದೇಶ ಹೊರಡಿಸಿತ್ತು. ಆದೇಶ ಈಗಾಗಲೇ ಜಿಲ್ಲಾ ಆರೋಗ್ಯಾಧಿಕಾರಿಗಳ ಕೈಸೇರಿದ್ದು, ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಪಿಎಂ ಜನ ಔಷಧ ಕೇಂದ್ರಗಳನ್ನು ಮುಚ್ಚಲಾಗಿತ್ತು. ಇದಕ್ಕೆ ಬಿಜೆಪಿ ನಾಯಕರು ಸೇರಿದಂತೆ ಸಾರ್ವಜನಿಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು.

ಬಡವರಿಗೆ ಕಡಿಮೆ ದರದಲ್ಲಿ ನೀಡುವ ಜನೌಷಧ ಕೇಂದ್ರಗಳನ್ನು ಮುಚ್ಚುವುದು ಸರಿಯಲ್ಲ. ರಾಜ್ಯ ಸರ್ಕಾರ ಆದೇಶವನ್ನು ವಾಪಸ್ ಪಡೆಯಬೇಕೆಂದು ವಿಪಕ್ಷಗಳು ಆಗ್ರಹಿಸಿದ್ದವು.

ರಾಜ್ಯ ಸರ್ಕಾರಿ ಆಸ್ಪತ್ರೆಯಲ್ಲಿನ ವೈದ್ಯರು ಬ್ರಾಂಡೆಡ್​ ಔಷಧಿಗಳನ್ನು ಹೊರಗಡೆಯಿಂದ ತರುವಂತೆ ರೋಗಿಗಳಿಗೆ ಸಲಹಾ ಚೀಟಿ ನೀಡುವುದನ್ನು ಸರ್ಕಾರ ನಿಷೇಧಿಸಿದೆ. ಈ ಮೂಲಕ ಸರ್ಕಾರಿ ಆಸ್ಪತ್ರೆಗಳು ರೋಗಿಗಳಿಗೆ ಯಾವುದೇ ತರಹದ ಔಷಧಿಗಳನ್ನು ಹೊರಗೆ ಖರೀದಿಸುವಂತೆ ಶಿಫಾರಸ್ಸು ಮಾಡದಂತೆ ನೋಡಿಕೊಳ್ಳುವುದು ಸರ್ಕಾರದ ನೀತಿಯಾಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರಿ ಆಸ್ಪತ್ರೆ ಆವರಣದಲ್ಲಿನಲ್ಲಿನ ಜನ ಔಷಧಿ ಕೇಂದ್ರಗಳನ್ನು ತೆರೆಯುವುದು ಸರ್ಕಾರದ ನೀತಿಗೆ ವಿರುದ್ಧವಾಗಿದೆ. ಈ ಕಾರಣದಿಂದ ಸರ್ಕಾರಿ ಆಸ್ಪತ್ರೆಗಳ ಆವರಣದ ಜನ ಔಷಧಿ ಕೇಂದ್ರಗಳನ್ನು ಬಂದ್​ ಮಾಡಲು ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು.

ಭಾರತೀಯ ಔಷಧ ಮಂಡಳಿಯು (ಬಿಪಿಪಿಐ) ಜನೌಷಧ ಕೇಂದ್ರಗಳಿಗೆ ನೋಡಲ್ ಸಂಸ್ಥೆಯಾಗಿದ್ದು, ಇಲಾಖೆ ವ್ಯಾಪ್ತಿಯಲ್ಲಿನ ಸರ್ಕಾರಿ ಆಸ್ಪತ್ರೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ ಜನೌಷಧ ಕೇಂದ್ರಗಳನ್ನು ಸ್ಥಗಿತಗೊಳಿಸಲು ಮತ್ತು ಒಪ್ಪಂದದ ನಿಯಮಾನುಸಾರ ಕ್ರಮ ಕೈಗೊಳ್ಳಲು ಸೂಚಿಸಲಾಗಿತ್ತು. ಅಲ್ಲದೆ, ಪರಿಶೀಲನೆಯಲ್ಲಿದ್ದ 31 ಜನೌಷಧ ಕೇಂದ್ರಗಳ ಅರ್ಜಿಗಳಿಗೆ ಅನುಮತಿ ನೀಡದಂತೆಯೂ ಆರೋಗ್ಯ ಇಲಾಖೆಗೆ ಸರ್ಕಾರ ನಿರ್ದೇಶನ ನೀಡಿತ್ತು. ಆದರೆ ಇದೀಗ ಇದಕ್ಕೆ ಹೈಕೋರ್ಟ್​ ತಡೆ ನೀಡಿದೆ.

Read More
Next Story