Toxic Movie Controversy | ‘ಟಾಕ್ಸಿಕ್’ ಸಿನಿಮಾ ವಿರುದ್ಧ ಎಫ್​ಐಆರ್​ಗೆ ತಡೆ ನೀಡಿದ  ಹೈಕೋರ್ಟ್
x
‘ಟಾಕ್ಸಿಕ್’ ಸಿನಿಮಾದ ನಿರ್ಮಾಪಕರ ವಿರುದ್ಧ ಹಾಕಲಾಗಿದ್ದ ಎಫ್​ಐಆರ್​ಗೆ ಹೈಕೋರ್ಟ್​ ತಡೆ ನೀಡಿದೆ.

Toxic Movie Controversy | ‘ಟಾಕ್ಸಿಕ್’ ಸಿನಿಮಾ ವಿರುದ್ಧ ಎಫ್​ಐಆರ್​ಗೆ ತಡೆ ನೀಡಿದ ಹೈಕೋರ್ಟ್

ಯಶ್ ಅಭಿನಯದ ಟಾಕ್ಸಿಕ್‌ ಚಿತ್ರದ ಚಿತ್ರೀಕರಣಕ್ಕಾಗಿ ಪೀಣ್ಯದ ಎಚ್‌ಎಂಟಿ ಪ್ರದೇಶದ ಅರಣ್ಯ ಭೂಮಿಯಲ್ಲಿ ನೂರಾರು ಮರಗಳನ್ನು ಕಡಿದು ಹಾಕಲಾಗಿದೆ ಎಂದು ಆರೋಪಿಸಿ, ಚಿತ್ರ ನಿರ್ಮಾಣ ಸಂಸ್ಥೆ ವಿರುದ್ಧ ನಡೆಯುತ್ತಿರುವ ತನಿಖೆ ಮತ್ತು ವಿಚಾರಣಾ ನ್ಯಾಯಾಲಯದ ಪ್ರಕ್ರಿಯೆಗೆ ಹೈಕೋರ್ಟ್ ಮಧ್ಯಂತರ ತಡೆ ವಿಧಿಸಿದೆ.


Click the Play button to hear this message in audio format

ಯಶ್ ಅಭಿನಯದ ಟಾಕ್ಸಿಕ್‌ ಚಿತ್ರದ ಚಿತ್ರೀಕರಣಕ್ಕಾಗಿ ಪೀಣ್ಯದ ಎಚ್‌ಎಂಟಿ ಪ್ರದೇಶದ ಅರಣ್ಯ ಭೂಮಿಯಲ್ಲಿ ನೂರಾರು ಮರಗಳನ್ನು ಕಡಿದು ಹಾಕಲಾಗಿದೆ ಎಂದು ಆರೋಪಿಸಿ, ಚಿತ್ರ ನಿರ್ಮಾಣ ಸಂಸ್ಥೆ ಕೆವಿಎನ್ ಮಾನ್‌ಸ್ಟರ್ ಮೈಂಡ್ ಕ್ರಿಯೇಷನ್ಸ್‌ ಎಲ್‌ಎಲ್‌ಪಿ ವಿರುದ್ಧ ನಡೆಸಲಾಗುತ್ತಿರುವ ತನಿಖೆ ಮತ್ತು ಅಧೀನ ನ್ಯಾಯಾಲಯದ ಪ್ರಕ್ರಿಯೆಗೆ ಹೈಕೋರ್ಟ್ ಮಧ್ಯಂತರ ತಡೆ ವಿಧಿಸಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಎಫ್‌ಐಆರ್ ದಾಖಲಿಸದಂತೆ ಟಾಕ್ಸಿಕ್ ಸಿನಿಮಾದ ನಿರ್ಮಾಪಕರು ಕೋರ್ಟ್ ಮೊರೆ ಹೋಗಿದ್ದರು. ಈ ಬಗ್ಗೆ ಗುರುವಾರ ಅರ್ಜಿ ವಿಚಾರಣೆಗೆ ಕೈಗೆತ್ತಿಕೊಂಡ ಹೈಕೋರ್ಟ್‌ ನ್ಯಾಯಮೂರರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠವು ಟಾಕ್ಸಿಕ್ ಸಿನಿಮಾ ನಿರ್ಮಾಪಕರ ವಿರುದ್ಧ ಎಫ್‌ಐಆರ್ ಮಾಡದಂತೆ ಮಧ್ಯಂತರ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದೆ.

'ನಮ್ಮ ವಿರುದ್ಧದ ಎಫ್‌ಐಆ‌ರ್ ಮತ್ತು ಈ ಸಂಬಂಧ 8ನೇ ಎಸಿಎಂಎಂ ನ್ಯಾಯಾಲಯದ ವಿಚಾರಣಾ ಪ್ರಕ್ರಿಯೆ ರದ್ದುಪಡಿಸಬೇಕು' ಎಂದು ಕೋರಿ 'ಕೆವಿಎನ್ ಮಾನ್‌ಸ್ಟರ್ ಮೈಂಡ್ ಕ್ರಿಯೇಷನ್ಸ್ ಎಲ್‌ಎಲ್‌ಪಿ' ಸಂಸ್ಥೆ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ವಿಚಾರಣೆ ವೇಳೆ ಅರ್ಜಿದಾರರ ಪರ ಹೈಕೋರ್ಟ್ ವಕೀಲ ಬಿಪಿನ್ ಹೆಗ್ಡೆ, 'ಜಾರಕಬಂಡೆ ಕಾವಲ್ ಮತ್ತು ಪೀಣ್ಯ ಪ್ಲಾಂಟೇಶನ್‌ನಲ್ಲಿನ 443 ಎಕರೆಯನ್ನು ಮೈಸೂರು ಸರ್ಕಾರವು 1963ರಲ್ಲಿ ಹಿಂದೂಸ್ತಾನ್ ಮೆಷಿನ್ಸ್ ಟೂಲ್ಸ್‌ಗೆ (ಎಚ್‌ಎಂಟಿ) ನೀಡಿತ್ತು. ಇದರಲ್ಲಿ ಎಚ್‌ಎಂಟಿ 18.2 ಎಕರೆ ಜಾಗವನ್ನು ಕೆನರಾ ಬ್ಯಾಂಕ್‌ಗೆ ಮಾರಾಟ ಮಾಡಿತ್ತು. ಈ ಜಾಗವನ್ನು ಕೆವಿಎನ್ ಸಂಸ್ಥೆ ಭೋಗ್ಯಕ್ಕೆ ಪಡೆದು ತಾತ್ಕಾಲಿಕವಾಗಿ ಟಾಕ್ಸಿಕ್ ಸಿನಿಮಾ ಚಿತ್ರೀಕರಣಕ್ಕಾಗಿ ಸೆಟ್ ನಿರ್ಮಿಸಿದೆ. ಆದರೆ, ಈ ಪ್ರದೇಶ ಮೀಸಲು ಅರಣ್ಯ ಎಂದು ಅರ್ಜಿದಾರರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ' ಎಂದು ಆಕ್ಷೇಪಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ರಾಜ್ಯ ಹೆಚ್ಚುವರಿ ಪ್ರಾಸಿಕ್ಯೂಟರ್ ಬಿ.ಎನ್.ಜಗದೀಶ್, 'ಅಲ್ಲಿದ್ದ ಗಿಡ ಮರಗಳನ್ನು ಕಡಿದು ಹಾಕಲಾಗಿದೆ' ಎಂದರು. ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ಕೆವಿಎನ್ ಮಾನ್‌ಸ್ಟರ್ ಮೈಂಡ್ ಕ್ರಿಯೇಷನ್ಸ್‌ ಎಲ್‌ಎಲ್‌ಪಿ ವಿರುದ್ಧ ಕರ್ನಾಟಕ ಅರಣ್ಯ ಕಾಯ್ದೆ-1963 ಕಲಂ 24(ಜಿ) ಅಡಿ ದಾಖಲಿಸಿರುವ ಎಫ್‌ಐಆರ್ ಅನ್ವಯದ ತನಿಖೆ ಮತ್ತು ವಿಚಾರಣಾ ನ್ಯಾಯಾಲಯದ ನ್ಯಾಯಿಕ ಪ್ರಕ್ರಿಯೆಗೆ ಮಧ್ಯಂತರ ತಡೆ ನೀಡಿ ಆದೇಶಿಸಿತು. ವಿಚಾರಣೆಯನ್ನು ನಾಲ್ಕು ವಾರ ಮುಂದೂಡಲಾಗಿದೆ.

ಸಿನಿಮಾ ಚಿತ್ರೀಕರಣದ ಸೆಟ್ ಹಾಕಲೆಂದು ಅರಣ್ಯ ಪ್ರದೇಶದಲ್ಲಿ ಮರಗಳನ್ನು ಕಡಿದು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಯಶ್ ಅಭಿನಯದ ಟಾಕ್ಸಿಕ್ ಸಿನಿಮಾದ ನಿರ್ಮಾಣ ಸಂಸ್ಥೆ ಹಾಗೂ ಇತರ ಇಬ್ಬರ ವಿರುದ್ಧ ಬೆಂಗಳೂರಿನ ಎಂಟನೇ ಹೆಚ್ಚುವರಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ನಿರ್ದೇಶನದಂತೆ ಎಫ್‌ಐಆ‌ರ್ ದಾಖಲಾಗಿತ್ತು. ಅಕ್ಟೋಬರ್ 29ರಂದು ಸಚಿವ ಈಶ್ವರ್ ಖಂಡ್ರೆ ಅವರು ಚಿತ್ರದ ಚಿತ್ರೀಕರಣದ ಸೆಟ್ ಪರಿಶೀಲನೆ ನಡೆಸಿದಾಗ ವಿಷಯ ಬೆಳಕಿಗೆ ಬಂದಿತ್ತು. ಅರಣ್ಯ ಭೂಮಿಯಲ್ಲಿ ಮರಗಳನ್ನು ಕಡಿಯಲು ಅನುಮತಿ ನೀಡಿದವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಸಚಿವರು ಸ್ಥಳದಲ್ಲಿಯೇ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದರು.

Read More
Next Story