ಶ್ರೀರಂಗಪಟ್ಟಣ ಬಳಿ ಭೀಕರ ಅಪಘಾತ: ಟಿಪ್ಪರ್-ಕಾರು ಡಿಕ್ಕಿ, ಚಾಲಕ ಜೀವಂತ ದಹನ
x

ಶ್ರೀರಂಗಪಟ್ಟಣ ಬಳಿ ಭೀಕರ ಅಪಘಾತ: ಟಿಪ್ಪರ್-ಕಾರು ಡಿಕ್ಕಿ, ಚಾಲಕ ಜೀವಂತ ದಹನ

ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ, ಕಾರಿನಲ್ಲಿದ್ದ ಚಂದ್ರಶೇಖರ್ ಅವರಿಗೆ ಹೊರಬರಲು ಸಾಧ್ಯವಾಗದೆ, ಅವರು ಕಾರಿನಲ್ಲೇ ಜೀವಂತವಾಗಿ ದಹನವಾಗಿದ್ದಾರೆ.


ಟಿಪ್ಪರ್ ಮತ್ತು ಕಾರಿನ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ, ಕಾರಿಗೆ ಬೆಂಕಿ ಹೊತ್ತಿಕೊಂಡು ಚಾಲಕ ಸ್ಥಳದಲ್ಲೇ ಸುಟ್ಟು ಕರಕಲಾದ ಘೋರ ದುರಂತವೊಂದು ತಾಲ್ಲೂಕಿನ ಪಾಲಹಳ್ಳಿ ಬಳಿ ಬುಧವಾರ ತಡರಾತ್ರಿ ನಡೆದಿದೆ.

ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಮುರುಕನಹಳ್ಳಿ ಗ್ರಾಮದ ನಿವಾಸಿ ಚಂದ್ರಶೇಖರ್ (49) ಮೃತಪಟ್ಟ ದುರ್ದೈವಿ. ಅವರು ತಮ್ಮ ಕಾರಿನಲ್ಲಿ ಪಾಂಡವಪುರದಿಂದ ಹುಣಸೂರಿನತ್ತ ಪ್ರಯಾಣಿಸುತ್ತಿದ್ದರು. ಈ ವೇಳೆ, ಎದುರಿನಿಂದ ವೇಗವಾಗಿ ಬಂದ ಟಿಪ್ಪರ್ ಲಾರಿ ಅವರ ಕಾರಿಗೆ ರಭಸವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನಲ್ಲಿ ತಕ್ಷಣವೇ ಬೆಂಕಿ ಕಾಣಿಸಿಕೊಂಡಿದೆ ಎಂದು ಸಿಪಿಐ ಬಿ.ಜಿ. ಕುಮಾರ್ ಮಾಹಿತಿ ನೀಡಿದ್ದಾರೆ.

ಬೆಂಕಿಯ ಕೆನ್ನಾಲಿಗೆಗೆ ಆಹುತಿಯಾದ ಚಾಲಕ

ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ, ಕಾರಿನಲ್ಲಿದ್ದ ಚಂದ್ರಶೇಖರ್ ಅವರಿಗೆ ಹೊರಬರಲು ಸಾಧ್ಯವಾಗದೆ, ಅವರು ಕಾರಿನಲ್ಲೇ ಜೀವಂತವಾಗಿ ದಹನವಾಗಿದ್ದಾರೆ. ಘಟನೆಯಲ್ಲಿ ಕಾರು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಅಪಘಾತ ಸಂಭವಿಸುತ್ತಿದ್ದಂತೆ, ಟಿಪ್ಪರ್ ಚಾಲಕ ಸ್ಥಳದಿಂದ ತಲೆಮರೆಸಿಕೊಂಡಿದ್ದಾನೆ.

ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಕಾರಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ನಂದಿಸಿದ್ದಾರೆ. ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತಲೆಮರೆಸಿಕೊಂಡಿರುವ ಟಿಪ್ಪರ್ ಚಾಲಕನಿಗಾಗಿ ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದಾರೆ.

Read More
Next Story