ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ: ಇಬ್ಬರು ಬೈಕ್ ಸವಾರರ ದುರ್ಮರಣ
x

ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ: ಇಬ್ಬರು ಬೈಕ್ ಸವಾರರ ದುರ್ಮರಣ

ಮೃತ ಯುವಕರನ್ನು ಆಕಾಶ್ ಮತ್ತು ಅಫ್ಜಲ್ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


ನಗರದ ಹೃದಯ ಭಾಗದಲ್ಲಿ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದ್ದು, ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕೆ.ಆರ್. ಮಾರುಕಟ್ಟೆ ಫ್ಲೈಓವರ್‌ನಲ್ಲಿ ಎರಡು ಬೈಕ್‌ಗಳ ನಡುವೆ ಡಿಕ್ಕಿ ಸಂಭವಿಸಿ ಈ ದುರ್ಘಟನೆ ನಡೆದಿದೆ.

ಮೃತ ಯುವಕರನ್ನು ಆಕಾಶ್ ಮತ್ತು ಅಫ್ಜಲ್ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಅತಿ ವೇಗ ಮತ್ತು ಅಜಾಗರೂಕ ಚಾಲನೆಯೇ ಈ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಬೈಕ್‌ಗಳು ಡಿಕ್ಕಿ ಹೊಡೆದ ರಭಸಕ್ಕೆ ಇಬ್ಬರೂ ಸವಾರರು ಚಿಮ್ಮಿ ರಸ್ತೆಗೆ ಬಿದ್ದಿದ್ದಾರೆ. ತಲೆಗೆ ಬಲವಾಗಿ ಏಟು ಬಿದ್ದಿದ್ದರಿಂದ ಇಬ್ಬರೂ ಸಾವನ್ನಪ್ಪಿದ್ದಾರೆ. ಮೃತಪಟ್ಟ ಸವಾರರು ಹೆಲ್ಮೆಟ್ ಧರಿಸಿರಲಿಲ್ಲ ಎಂದು ತಿಳಿದುಬಂದಿದೆ.

Read More
Next Story