ಬೆಂಗಳೂರು ವಿಮಾನ ನಿಲ್ದಾಣದಲ್ಲಿ 37.88 ಕೋಟಿ ರೂ. ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ವಶ
x

ಸಾಂದರ್ಭಿಕ ಚಿತ್ರ

ಬೆಂಗಳೂರು ವಿಮಾನ ನಿಲ್ದಾಣದಲ್ಲಿ 37.88 ಕೋಟಿ ರೂ. ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ವಶ

ಪ್ರಯಾಣಿಕನನ್ನು ಕೂಡಲೇ ವಶಕ್ಕೆ ಪಡೆಯಲಾಗಿದ್ದು, ಮಾದಕ ದ್ರವ್ಯಗಳು ಮತ್ತು ಮನೋವಿಕೃತ ವಸ್ತುಗಳ (NDPS) ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಲಾಗಿದೆ.


Click the Play button to hear this message in audio format

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾರೀ ಪ್ರಮಾಣದ ಮಾದಕವಸ್ತು ಸಾಗಾಟ ಜಾಲವನ್ನು ಭೇದಿಸಿದ ಬೆಂಗಳೂರು ಕಸ್ಟಮ್ಸ್‌ನ ಗುಪ್ತಚರ ಘಟಕ, ಬರೋಬ್ಬರಿ 37.88 ಕೋಟಿ ರೂಪಾಯಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಂಡಿದೆ.

ಅಕ್ಟೋಬರ್ 29ರಂದು ಕೆಐಎಯ ಟರ್ಮಿನಲ್ 2ರಲ್ಲಿ ಬ್ಯಾಂಕಾಕ್‌ನಿಂದ ದುಬೈ ಮೂಲಕ ಆಗಮಿಸುತ್ತಿದ್ದ ಓರ್ವ ಪ್ರಯಾಣಿಕನನ್ನು ವಾಯು ಗುಪ್ತಚರ ಘಟಕ ತಡೆದು ಪರಿಶೀಲನೆ ನಡೆಸಿದೆ. ಈ ವೇಳೆ ಆತ ಬಚ್ಚಿಟ್ಟಿದ್ದ 37.88 ಕೆಜಿ ತೂಕದ ಹೈಡ್ರೋಪೋನಿಕ್ ಗಾಂಜಾ ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಯಾಣಿಕನನ್ನು ಕೂಡಲೇ ವಶಕ್ಕೆ ಪಡೆಯಲಾಗಿದ್ದು, ಮಾದಕ ದ್ರವ್ಯಗಳು ಮತ್ತು ಮನೋವಿಕೃತ ವಸ್ತುಗಳ (NDPS) ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಲಾಗಿದೆ. ಈ ಮಾದಕವಸ್ತು ಕಳ್ಳಸಾಗಣೆಯ ಹಿಂದಿನ ಹೆಚ್ಚಿನ ತನಿಖೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Read More
Next Story