Caste Census |ಜಾತಿಗಣತಿಯ ಮೂಲ ಪ್ರತಿ ನನ್ನ ಬಳಿ ಇಲ್ಲ ;  ಬಿಜೆಪಿ ಆರೋಪ ಸುಳ್ಳು; ಸಿಎಂ
x

Caste Census |ಜಾತಿಗಣತಿಯ ಮೂಲ ಪ್ರತಿ ನನ್ನ ಬಳಿ ಇಲ್ಲ ; ಬಿಜೆಪಿ ಆರೋಪ ಸುಳ್ಳು; ಸಿಎಂ

ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯ ಮೂಲ ಪ್ರತಿ ನನ್ನ ಬಳಿ ಇಲ್ಲ. ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಮಾಡಿರುವ ಆರೋಪ ಸುಳ್ಳು. ಅಶೋಕ್ ಅವರು ಯಾವತ್ತಾದರೂ ಸತ್ಯವನ್ನು ಹೇಳಿದ್ದಾರೆಯೇ ಎಂದು ಸಿಎಂ ಪ್ರಶ್ನಿಸಿದರು.


ಮುಸ್ಲಿಮರು, ಹಿಂದುಳಿದವರಿಗೆ ಮಾತ್ರವಲ್ಲದೆ ಎಲ್ಲಾ ಧರ್ಮದ, ಎಲ್ಲಾ ಜಾತಿಯ ಬಡವರಿಗೆ ಶಿಕ್ಷಣ ಸಿಗಬೇಕು. ಸಾಮಾಜಿಕ ಆರ್ಥಿಕ ಶಕ್ತಿ ತುಂಬಬೇಕು ಎಂಬುದೇ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಹಾಗೂ ಸರ್ಕಾರದ ಗುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಳಗಾವಿ ಸಾಂಭ್ರಾ ವಿಮಾನ ನಿಲ್ದಾಣದಲ್ಲಿ ಭಾನುವಾರ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯ ಮೂಲ ಪ್ರತಿ ನನ್ನ ಬಳಿ ಇಲ್ಲ. ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಮಾಡಿರುವ ಆರೋಪ ಸುಳ್ಳು. ಅಶೋಕ್ ಅವರು ಯಾವತ್ತಾದರೂ ಸತ್ಯವನ್ನು ಹೇಳಿದ್ದಾರೆಯೇ? ಅವರು ಸುಳ್ಳೇ ಹೇಳುವುದು. ಮೂಲ ಪ್ರತಿ ನನ್ನ ಬಳಿಯಿರಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದ ಸಿಎಂ, ರಾಹುಲ್ ಗಾಂಧಿಯವರಿಗೆ ನಾವು ಪತ್ರ ಬರೆದಿಲ್ಲ ಆದರೆ ಅವರೊಂದಿಗೆ ಚರ್ಚೆ ಮಾಡಿ ಸಚಿವ ಸಂಪುಟ ಸಭೆಯಲ್ಲಿ ಸಮೀಕ್ಷೆಯ ವರದಿ ಮಂಡಿಸಿದ್ದೇವೆ ಎಂದು ತಿಳಿಸಿದ್ದಾರೆ.

ಸಚಿವರ ಅಭಿಪ್ರಾಯದ ನಂತರ ಅಂತಿಮ ತೀರ್ಮಾನ

ಕಾಂಗ್ರೆಸ್ ಶಾಸಕರೇ ಜಾತಿಗಣತಿ ವರದಿ ಬಗ್ಗೆ ವಿರೋಧ ವ್ಯಕ್ತಪಡಿಸಿರುವ ಕುರಿತ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಸಚಿವ ಸಂಪುಟ ಸಭೆಯಲ್ಲಿ ಯಾರೂ ಈ ಬಗ್ಗೆ ವಿರೋಧ ವ್ಯಕ್ತಪಡಿಸಿ ಜೋರಾಗಿ ಮಾತನಾಡಿಲ್ಲ. ಸಮೀಕ್ಷೆಯನ್ನು ಓದಿಕೊಂಡು ಅಭಿಪ್ರಾಯ ತಿಳಿಸುವಂತೆ ಸೂಚಿಸಲಾಗಿದ್ದು ಸಚಿವರು ಅಭಿಪ್ರಾಯ ತಿಳಿಸಿದ ನಂತರ ಪುನಾ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡಿ ಅಂತಿಮ ತೀರ್ಮಾನಕ್ಕೆ ಬರಲಾಗುವುದು ಎಂದು ಹೇಳಿದ್ದಾರೆ.

ಯಾವ ಜಾತಿಗೂ ಅನ್ಯಾಯವಾಗಬಾರದು

ಯಾವ ಜಾತಿಗೂ ಅನ್ಯಾಯವಾಗಬಾರದು ಎನ್ನುವುದು ಸರ್ಕಾರದ ಉದ್ದೇಶ. ಇದು ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ. ಸಂವಿಧಾನ ಜಾರಿಯಾಗಿ 75 ವರ್ಷಗಳಾಗಿದ್ದರೂ ಬಡವ ಬಡವನಾಗಿಯೇ ಉಳಿಯಬೇಕೆ? ಸಮಾನತೆ ಬೇಡವೇ, ಜಾತಿಗೆ ಅಂಟಿಕೊಂಡೇ ಇರಬೇಕೆ ಎಂದು ಮುಖ್ಯಮಂತ್ರಿಗಳು ಪ್ರಶ್ನಿಸಿದ್ದಾರೆ.

Read More
Next Story