
ಕರಾವಳಿ ಜಿಲ್ಲೆಗಳಲ್ಲಿ ಯೆಲ್ಲೋ ಅರ್ಲಟ್ | 24 ಗಂಟೆಗಳಲ್ಲಿ ಭಾರೀ ಮಳೆ ಮುನ್ಸೂಚನೆ
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ
ಕರಾವಳಿ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರಕನ್ನಡ, ದಕ್ಷಿಣಕನ್ನಡ, ಉಡುಪಿ, ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ವಿಜಯನಗರ, ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ದಾವಣಗೆರೆ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ರಾಯಚೂರು, ಕೊಪ್ಪಳ, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಉತ್ತರ ಕನ್ನಡ, ಕಲಬುರಗಿ, ದಕ್ಷಿಣ ಕನ್ನಡ, ಉಡುಪಿ ಹಾಗೂ ಕೊಡಗು ಜಿಲ್ಲೆಯ ಹಲವೆಡೆ ಮಳೆಯಾಗಿದೆ.
ಬೆಂಗಳೂರಿನ ಎಚ್ಎಎಲ್‌ನಲ್ಲಿ 28.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.1ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ ಕರಾವಳಿಯಲ್ಲಿ ಬಿರುಗಾಳಿಯ ವೇಗ ಗಂಟೆಗೆ 35-45ಕಿ.ಮೀನಿಂದ 55 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದ್ದು, ಮೀನುಗಾರರು ಸಮುದ್ರಕ್ಕಿಳಿಯದಂತೆ ಎಚ್ಚರಿಕೆ ನೀಡಲಾಗಿದೆ.