ಕನ್ನಡದಲ್ಲೂ ರೈಲ್ವೆ ಮುಂಬಡ್ತಿ ಪರೀಕ್ಷೆ: ರೈಲ್ವೆ ಇಲಾಖೆ ಮಹತ್ವದ ಘೋಷಣೆ
x
ಸೋಮಣ್ಣ

ಕನ್ನಡದಲ್ಲೂ ರೈಲ್ವೆ ಮುಂಬಡ್ತಿ ಪರೀಕ್ಷೆ: ರೈಲ್ವೆ ಇಲಾಖೆ ಮಹತ್ವದ ಘೋಷಣೆ

ದಾವಣಗೆರೆ-ಚಿತ್ರದುರ್ಗ-ತುಮಕೂರು ನೇರ ರೈಲ್ವೆ ಹಾಗೂ ಪಾವಗಡ-ರಾಯದುರ್ಗ ನೂತನ ರೈಲ್ವೆ ಮಾರ್ಗ ಯೋಜನೆ 2027ರ ಜನವರಿಯೊಳಗೆ ಲೋಕಾರ್ಪಣೆಗೊಳ್ಳಲಿದೆ. 2140 ರೂ ಕೋಟಿ ವೆಚ್ಚದಲ್ಲಿ ಯೋಜನೆ ರೂಪಿಸಲಾಗಿದೆ.


Click the Play button to hear this message in audio format

ಇನ್ನು ಮುಂದೆ ರೈಲ್ವೆ ನೇಮಕ ಪರೀಕ್ಷೆ ಮಾತ್ರವಲ್ಲ, ಮುಂಬಡ್ತಿ ಪರೀಕ್ಷೆಗಳನ್ನೂ ಕನ್ನಡದಲ್ಲಿ ಬರೆಯಬಹುದು. ಈ ಬಗ್ಗೆ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಘೋಷಿಸಿದ್ದಾರೆ.

ದಾವಣಗೆರೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನೂತನ ರೈಲ್ವೆ ಮಾರ್ಗಗಳ ಭೂಸ್ವಾಧೀನ ಪ್ರಕ್ರಿಯೆ ಕುರಿತಂತೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಈಗಾಗಲೇ ರೈಲ್ವೆ ಇಲಾಖೆ ಸೇರಲು ನಡೆಸುವ ಪರೀಕ್ಷೆ ಕನ್ನಡದಲ್ಲಿ ಸಹ ಬರೆಯಲು ಅವಕಾಶವಿದೆ.. ಮುಂಡಡ್ತಿಗೆ ಸಂಬಂಧಿ ಇಂಗ್ಲಿಷ್ ಮತ್ತು ಹಿಂದಿ ಭಾಷೆಗಳಲ್ಲಿ ಈ ಪರೀಕ್ಷೆಗಳು ನಡೆಯುತ್ತಿದ್ದು, ಇದೀಗ ಕನ್ನಡದಲ್ಲಿಯೂ ಪರೀಕ್ಷೆ ನಡೆಸಲಾಗುವುದರಿಂದ ಕನ್ನಡಿಗ ಸಿಬ್ಬಂದಿಗೆ ಅನುಕೂಲವಾಗುವುದು ಎಂದು ಹೇಳಿದರು.

ದಾವಣಗೆರೆ-ಚಿತ್ರದುರ್ಗ-ತುಮಕೂರು ನೇರ ರೈಲ್ವೆ ಹಾಗೂ ಪಾವಗಡ-ರಾಯದುರ್ಗ ನೂತನ ರೈಲ್ವೆ ಮಾರ್ಗ ಯೋಜನೆ 2027ರ ಜನವರಿಯೊಳಗೆ ಲೋಕಾರ್ಪಣೆಗೊಳ್ಳಲಿದೆ ಎಂದೂ ವಿ. ಸೋಮಣ್ಣ ಆಶ್ವಾಸನೆ ನೀಡಿದರು. ದರು. 2140 ರೂ ಕೋಟಿ ವೆಚ್ಚದಲ್ಲಿ ನೂತನ ರೈಲ್ವೆ ಮಾರ್ಗಗಳ ನಿರ್ಮಾಣ ಕಾರ್ಯಕ್ಕೆ ಯೋಜನೆ ರೂಪಿಸಲಾಗಿದೆ.

ಈ ಮೊದಲು ರಾಜ್ಯ ಹಾಗೂ ಕೇಂದ್ರ ಸರ್ಕಾರ ಶೇ.50-50 ಅನುಪಾತದಲ್ಲಿ ಯೋಜನೆ ಜಾರಿಗೊಳಿಸಲು ತೀರ್ಮಾನಿಸಲಾಗಿತ್ತು. ಇದನ್ನು ಬದಲಿಸಿ ರಾಜ್ಯ ಸರ್ಕಾರ ಭೂ ಸ್ವಾಧೀನ ವೆಚ್ಚವನ್ನು ಭರಿಸಿ, ಯೋಜನೆಗೆ ಭೂಮಿ ಹಸ್ತಾಂತರಿಸಿದರೆ ರೈಲ್ವೆ ಇಲಾಖೆಯಿಂದಲೇ ಯೋಜನೆಯನ್ನು ಸಂಪೂರ್ಣವಾಗಿ ಅನುಷ್ಠಾನಗೊಳಿಸಲಾಗುವುದು ಎಂದು ತಿಳಿಸಿದರು. ಎರಡು ನೂತನ ರೈಲ್ವೆ ಮಾರ್ಗಗಳಿಗೆ 2409 ಎಕರೆ ಭೂಮಿ ಅವಶ್ಯಕತೆ ಇದ್ದು, ಇದರಲ್ಲಿ ಕೇವಲ 280 ಎಕರೆ ಭೂಸ್ವಾಧೀನ ಪ್ರಕ್ರಿಯೆ ಬಾಕಿ ಇದೆ. ರೈಲ್ವೆ ಮಾರ್ಗಕ್ಕೆ ಈಗಾಗಲೆ 1100 ರೂ ಕೋಟಿ ಅನುದಾನ ಒದಗಿಸಲಾಗಿದೆ. ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡ ನಂತರ ಪ್ರಧಾನಮಂತ್ರಿಗಳ ಸೂಚನೆಯಂತೆ 2027ರ ಜನವರಿ ವೇಳೆಗೆ ನೂತನ ರೈಲ್ವೆ ಮಾರ್ಗಗಳ ನಿರ್ಮಾಣ ಮಾಡಿ, ಪ್ರಧಾನಮಂತ್ರಿ ಹಾಗೂ ರೈಲ್ವೆ ಖಾತೆ ಸಚಿವರಿಂದ ಲೋಕಾರ್ಪಣೆ ಮಾಡುವುದಾಗಿ ಅವರು ತಿಳಿಸಿದರು.

Read More
Next Story