ರಾತ್ರಿ ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಲೈಂಗಿಕ ಕಿರುಕುಳ; ವಿಡಿಯೊ ವೈರಲ್​, ದೂರು ದಾಖಲು
x

 ಯುವತಿ ಜೊತೆ ಅನುಚಿತ ವರ್ತನೆ ನಡೆಸಿದ್ದ ಯುವಕ ಮೇಲೆ ದೂರು ದಾಖಲಾಗಿದೆ. 

ರಾತ್ರಿ ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಲೈಂಗಿಕ ಕಿರುಕುಳ; ವಿಡಿಯೊ ವೈರಲ್​, ದೂರು ದಾಖಲು

ಇಬ್ಬರು ಯುವತಿಯರು ಸುದ್ದಗುಂಟೆಪಾಳ್ಯದ ಭಾರತಿ ಲೇಔಟ್‌ನ 1ನೇ ಕ್ರಾಸ್‌ನಲ್ಲಿ ರಾತ್ರಿ 1.52ರ ವೇಳೆ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಅವರನ್ನು ಹಿಂಬಾಲಿಸಿಕೊಂಡ ಬಂದ ಯುವಕ, ಏಕಾಏಕಿ ಒಬ್ಬ ಯುವತಿಯನ್ನು ತಬ್ಬಿಕೊಳ್ಳಲು ಯತ್ನಿಸಿದ್ದ.


Click the Play button to hear this message in audio format

ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಯನ್ನು ಹಿಂಬಾಲಿಸಿ ಆಕೆಯನ್ನು ಬಲವಂತವಾಗಿ ತಬ್ಬಿಕೊಳ್ಳಲು ಯತ್ನಿಸಿದ್ದು ಮಾತ್ರವಲ್ಲದೆ ಎದೆಯ ಭಾಗವನ್ನು ಮುಟ್ಟಿ ಪರಾರಿಯಾಗಿರುವ ಘಟನೆ ಕಳೆದ ಗುರುವಾರ ( ಏಪ್ರಿಲ್ ೩) ಬೆಂಗಳೂರಿನ ಸುದ್ದಗುಂಟೆ ಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಇದರ ವಿಡಿಯೊ ರಸ್ತೆಯ ಪಕ್ಕದ ಮನೆಯೊಂದರ ಸಿಸಿ ಟಿವಿ ಕ್ಯಾಮೆರಾಗಳಲ್ಲಿ ದಾಖಲಾಗಿದೆ. ವಿಡಿಯೊ ವೈರಲ್ ಆದ ಬಳಿಕ ಸಾರ್ವಜನಿಕ ಆಕ್ರೋಶ ವ್ಯಕ್ತವಾಗಿದೆ.

ಸುದ್ದಗುಂಟೆಪಾಳ್ಯದ ಭಾರತಿ ಲೇಔಟ್‌ನ 1ನೇ ಕ್ರಾಸ್‌ನಲ್ಲಿ ನಡೆದ ಘಟನೆಯ ದೃಶ್ಯ ಸ್ಥಳೀಯ ಸಿ.ಸಿ.ಟಿ.ವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಘಟನೆ ಸಂಬಂಧ ಸ್ಥಳೀಯ ನಿವಾಸಿ ಲೋಕೇಶ್‌ಗೌಡ ಎಂಬುವರ ದೂರು ಆಧರಿಸಿ, ಪೊಲೀಸರು ಎಫ್‌ಐಆ‌ರ್ ದಾಖಲಿಸಿಕೊಂಡು, ಆರೋಪಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ.

ಏನಿದು ಘಟನೆ

ಇಬ್ಬರು ಯುವತಿಯರು ಸುದ್ದಗುಂಟೆಪಾಳ್ಯದ ಭಾರತಿ ಲೇಔಟ್‌ನ 1ನೇ ಕ್ರಾಸ್‌ನಲ್ಲಿ ರಾತ್ರಿ 1.52ರ ವೇಳೆ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಅವರನ್ನು ಹಿಂಬಾಲಿಸಿಕೊಂಡ ಬಂದ ಯುವಕ, ಏಕಾಏಕಿ ಒಬ್ಬ ಯುವತಿಯನ್ನು ಎಳೆದಾಡಿ, ತಬ್ಬಿಕೊಳ್ಳಲು ಯತ್ನಿಸಿದ್ದಾನೆ. ಆಕೆಯ ಎದೆಯ ಭಾಗವನ್ನು ಮುಟ್ಟಿ ಅಸಭ್ಯವಾಗಿ ವರ್ತಿಸಿದ್ದಾನೆ. ಈ ವೇಳೆ ಯುವತಿಯರು ಜೋರಾಗಿ ಕಿರುಚಿಕೊಂಡಾಗ ಆತ ಸ್ಥಳದಿಂದ ಪರಾರಿಯಾಗಿದ್ದ.

ಘಟನೆ ಸಂಬಂಧ ಸಂತ್ರಸ್ತ ಯುವತಿಯರು ದೂರು ನೀಡಿಲ್ಲ. ಆದರೆ, ಸ್ಥಳೀಯ ನಿವಾಸಿಯೊಬ್ಬರು ಸಿಸಿಟಿವಿ ಕ್ಯಾಮೆರಾ ದೃಶ್ಯದೊಂದಿಗೆ ಠಾಣೆಗೆ ದೂರು ನೀಡಿದ್ದಾರೆ.

Read More
Next Story