Increased security; Installation of AI cameras at our metro stations
x

ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ಎಐ ಕ್ಯಾಮರಾ ಅಳವಡಿಸಲು ತೀರ್ಮಾನ.

Namma Metro | ಮೆಟ್ರೋ ನಿಲ್ದಾಣಗಳಿಗೆ ಎಐ ಸಿಸಿಟಿವಿ ಕ್ಯಾಮೆರಾಗಳ ಕಣ್ಗಾವಲು

ಎಐ (ಕೃತಕ ಬುದ್ದಿಮತ್ತೆ) ತಂತ್ರಜ್ಞಾನದ ಸಿಸಿಟಿವಿ ಕ್ಯಾಮೆರಾಗಳನ್ನು ಮೆಟ್ರೋ ನಿಲ್ದಾಣದ ಒಳಗೆ ಹಾಗೂ ಹೊರಗೆ ಅಳವಡಿಸಲಾಗಿದೆ. ನಿಲ್ದಾಣದ ಸುತ್ತಮುತ್ತ ನಡೆಯುವ ಅನಿರೀಕ್ಷಿತ ಅಪಾಯಗಳನ್ನು ತಕ್ಷಣ ಗುರುತಿಸಿ, ಪ್ರಯಾಣಿಕರಿಗೆ ಸುರಕ್ಷತೆ ಒದಗಿಸಲಿವೆ.


ಕೇಂದ್ರ ಸರ್ಕಾರದ ಕಟ್ಟೆಚ್ಚರದ ಸೂಚನೆ ಬೆನ್ನಲ್ಲೇ ಸಾರ್ವಜನಿಕರು ಹೆಚ್ಚಾಗಿ ಸೇರುವ ʼನಮ್ಮ ಮೆಟ್ರೋʼ ನಿಲ್ದಾಣಗಳಲ್ಲಿ ಎಐ (ಕೃತಕ ಬುದ್ದಿಮತ್ತೆ) ತಂತ್ರಜ್ಞಾನ ಆಧರಿತ ಸಿಸಿಟಿವಿ ಕ್ಯಾಮೆರಾಗಳನ್ನು ಬಿಎಂಆರ್‌ಸಿಎಲ್‌ ಅಳವಡಿಸಿದೆ.

ಭಾರತ ಹಾಗೂ ಪಾಕಿಸ್ತಾನದ ಮಧ್ಯೆ ಉದ್ವಿಗ್ನತೆ ಹೆಚ್ಚಾದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ದೇಶದ ಎಲ್ಲಾ ರಾಜ್ಯಗಳಲ್ಲೂ ಕಟ್ಟೆಚ್ಚರ ವಹಿಸುವಂತೆ ಸೂಚಿಸಿತ್ತು. ಇದರಿಂದ ಎಚ್ಚೆತ್ತ ರಾಜ್ಯ ಸರ್ಕಾರ ಸಾರ್ವಜನಿಕ ಸ್ಥಳಗಳು ಹಾಗೂ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಭದ್ರತೆ ಒದಗಿಸಿತ್ತು. ಇದೀಗ ಮೆಟ್ರೋ ರೈಲು ನಿಲ್ದಾಣಗಳಲ್ಲಿ ಎಐ ತಂತ್ರಜ್ಞಾನ ಆಧರಿತ ಸಿಸಿಟಿವಿ ಕ್ಯಾಮೆರಾ ಅಳವಡಿಸಿದೆ.

ಎಲ್ಲೆಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಕೆ

ನಮ್ಮ ಮೆಟ್ರೋ ರೈಲಿನಲ್ಲಿ ಪ್ರತಿನಿತ್ಯ ಸರಾಸರಿ ಎಂಟು ಲಕ್ಷಕ್ಕೂ ಅಧಿಕ ಪ್ರಯಾಣಿಕರು ಸಂಚರಿಸುತ್ತಿದ್ದು, ಪ್ರಯಾಣಿಕರ ಸುರಕ್ಷತೆ ದೃಷ್ಟಿಯಿಂದ ಮೊದಲ ಹಂತದಲ್ಲಿ ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣ, ಸ್ವಾಮಿ ವಿವೇಕಾನಂದ ರಸ್ತೆ ಮೆಟ್ರೋ ನಿಲ್ದಾಣ, ಇಂದಿರಾನಗರ ಮೆಟ್ರೋ ನಿಲ್ದಾಣ, ಹಲಸೂರು ಮೆಟ್ರೋ ನಿಲ್ದಾಣ, ಟ್ರಿನಿಟಿ ಮೆಟ್ರೋ ನಿಲ್ದಾಣ ಹಾಗೂ ಎಂ.ಜಿ.ರಸ್ತೆ ಮೆಟ್ರೋ ನಿಲ್ದಾಣಗಳಲ್ಲಿ 600 ಸುಧಾರಿತ ಸಿಸಿಟಿವಿ ಕ್ಯಾಮೆರಾ ಹಾಗೂ ಎಐ ತಂತ್ರಜ್ಞಾನದ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ.

ಎಐ ತಂತ್ರಜ್ಞಾನದ ಕ್ಯಾಮೆರಾಗಳು ರೈಲು ನಿಲ್ದಾಣದ ಒಳಗೆ ಹಾಗೂ ಹೊರಗಿನ ಪ್ರದೇಶಗಳನ್ನು ಸೂಕ್ಷ್ಮವಾಗಿ ಗಮನಿಸಿ ಅಪಾಯಗಳನ್ನು ತಕ್ಷಣ ಗುರುತಿಸಲಿವೆ. ಮೆಟ್ರೋ ನಿಲ್ದಾಣಗಳ ಬಳಿಯ ವಾಹನಗಳ ನಂಬರ್‌ ಪ್ಲೇಟ್‌ ಗುರುತಿಸುವಂತೆ ಎಎನ್‌ಪಿಆರ್‌(ಆಟೋಮಾಟಿಕ್‌ ನಂಬರ್‌ ಪ್ಲೇಟ್‌ ರೆಕಗ್ನಿಷನ್‌ ) ತಂತ್ರಜ್ಞಾನ ಬಳಸಲಾಗಿದೆ.

Read More
Next Story