ಮಾರ್ಚ್‌ 4 ರಿಂದ ರಾಜ್ಯ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಧರಣಿ
x

ಮಾರ್ಚ್‌ 4 ರಿಂದ ರಾಜ್ಯ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಧರಣಿ

ಹಲವು ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಕರ್ನಾಟಕ ರಾಜ್ಯ ಸಾರಿಗೆ ನೌಕರರು ಮತ್ತೆ ಬೀದಿಗೆ ಇಳಿಯಲಿದ್ದಾರೆ.


ಬೆಂಗಳೂರು: ಸರ್ಕಾರಿ ನೌಕರರ ಸರಿಸಮಾನ ವೇತನ ಸೇರಿದಂತೆ ಹಲವು ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಕರ್ನಾಟಕ ರಾಜ್ಯ ಸಾರಿಗೆ ನೌಕರರು ಮತ್ತೆ ಬೀದಿಗೆ ಇಳಿಯಲಿದ್ದಾರೆ.

ಸಾರಿಗೆ ನೌಕರರು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನ (ಫ್ರೀಡಂ ಪಾರ್ಕ್)ದಲ್ಲಿ ಮಾರ್ಚ್‌ 4 ರಿಂದ ಅನಿರ್ದಿಷ್ಟಾವಧಿ ಧರಣಿ ಹಮ್ಮಿಕೊಳ್ಳಲು ತೀರ್ಮಾನಿಸಿದ್ದಾರೆ. ಈ ಹಿಂದಿನ ಸಾರಿಗೆ ನೌಕರರ ಹಿಂದಿನ ಮುಷ್ಕರಗಳಲ್ಲಿ ಸಿಬ್ಬಂದಿ ಮೇಲೆ ದಾಖಲಾದ ಪ್ರಕರಣ ಹಿಂಪಡೆಯಬೇಕು. ನಮಗೂ ಸರಿಸಮಾನ ವೇತನ, ಸೌಲಭ್ಯ ಕಲ್ಪಿಸಬೇಕೆಂದು ಆಗ್ರಹಿಸಿರುವ ಸಾರಿಗೆ ನಿಗಮಗಳ ನೌಕರರ ಸಮಾನ ಮನಸ್ಕರ ವೇದಿಕೆ ವತಿಯಿಂದ ಈ ಧರಣಿ ಹಮ್ಮಿಕೊಳ್ಳಲಾಗಿದೆ ಎಂದು ವೇದಿಕ ಮಾಹಿತಿ ನೀಡಿದೆ.

ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಾರಿಗೆ ನೌಕರರ ಕೂಟದ ಗೌರವಾಧ್ಯಕ್ಷ ಬಿ.ಎಸ್.ಸುರೇಶ್ ಅವರು, ʼʼಕಳೆದ 2020ರ ಡಿಸೆಂಬರ್ ಹಾಗೂ ನಂತರ ವರ್ಷದ 2021ರ ಏಪ್ರಿಲ್ ಸಾರಿಗೆ ನೌಕರರ ಮುಷ್ಕರಕ್ಕೆ ಸಂಬಂಧಿಸಿ ಕಾರ್ಮಿಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಅವರ ವಿರುದ್ಧ ಕೈಗೊಂಡ ಎಲ್ಲಾ ಶಿಸ್ತಿನ ಕ್ರಮಗಳನ್ನು ಹಾಗೂ ದಾಖಲಾದ 60ಕ್ಕೂ ಹೆಚ್ಚು ಪ್ರಕರಣವನ್ನು ರದ್ದುಗೊಳಿಸಬೇಕುʼʼ ಎಂದು ಸರ್ಕಾರವನ್ನು ಆಗ್ರಹಿಸಿದರು.

ʼʼ2020ರ ಜ.1ರಿಂದ ಅನ್ವಯವಾಗುವಂತೆ ನಾಲ್ಕು ಸಾರಿಗೆ ನಿಗಮಗಳ ಸಿಬ್ಬಂದಿಗೆ ಒಂದೇ ಕಂತಿನಲ್ಲಿ ವೇತನದ ಹಿಂಬಾಕಿ ಪಾವತಿಸಬೇಕು. ಅಲ್ಲದೇ 2020ರಿಂದ ನಿವೃತ್ತಿಯಾದ ನೌಕರರಿಗೆ ವೇತನ ವಿಮರ್ಶೆ ಮಾಡಿ ಬಾಕಿ, ಹಿಂಬಾಕಿ ಮೊತ್ತವನ್ನು ತ್ವರಿತವಾಗಿ ಪಾವತಿ ಮಾಡಬೇಕು ಎಂದು ತಿಳಿಸಿದರು. ಉಚಿತ ಆರೋಗ್ಯ ಭಾಗ್ಯ ಯೋಜನೆ ಜಾರಿಗೊಳಿಸಬೇಕು. ಚುನಾವಣಾ ಪೂರ್ವ ಪ್ರಣಾಳಿಕೆಯಲ್ಲಿರುವಂತೆ ಸಮಾನ ವೇತನ ಮತ್ತು ಸೌಲ ಸೌಭ್ಯವನ್ನು ಸಾರಿಗೆ ನೌಕರರಿಗೂ ಸರ್ಕಾರ ವಿಸ್ತರಣೆ ಮಾಡಬೇಕು. ದಿ ಕಾರ್ಮಿಕರ ಸಂಸ್ಥೆಗೆ ಕೂಡಲೇ ಚುನಾವಣೆ ನಡೆಸಿ, ಮಾನ್ಯತೆ ಪ್ರಶ್ನೆ ಇತ್ಯರ್ಥಗೊಳಿಸಬೇಕು ಎಂದು ಅವರು ಸರ್ಕಾರಕ್ಕೆ ಮನವಿ ಮಾಡಿದರು.

ಈ ಎಲ್ಲ ಬೇಡಿಕೆಗಳನ್ನು ಈಡೇರಿಸಲು ರಾಜ್ಯ ಸರ್ಕಾರಕ್ಕೆ ಒತ್ತಡ ತರಲು ಅನಿರ್ದಿಷ್ಟಾವಧಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.

Read More
Next Story