2000 ರೂ. ಬದಲು ಬಾಣಂತಿಯರಿಗೆ ಬದುಕುವ ಗ್ಯಾರಂಟಿ ಸರ್ಕಾರ ನೀಡಲಿ: ಆರ್‌ ಅಶೋಕ್‌
x
ಆರ್‌ ಅಶೋಕ್‌

2000 ರೂ. ಬದಲು ಬಾಣಂತಿಯರಿಗೆ ಬದುಕುವ ಗ್ಯಾರಂಟಿ ಸರ್ಕಾರ ನೀಡಲಿ: ಆರ್‌ ಅಶೋಕ್‌

ಕಳಪೆ ದ್ರಾವಣ ಪೂರೈಸಿದ ಕಂಪನಿ ವಿರುದ್ಧ ದೆಹಲಿಗೆ ಹೋಗಿ ದೂರು ಕೊಡುವುದಾಗಿ ಆರೋಗ್ಯ ಸಚಿವರು ಹೇಳಿದ್ದರು. ಆದರೆ ಇನ್ನೂ ಯಾಕೆ ಹೋಗಿ ದೂರು ಕೊಟ್ಟಿಲ್ಲ ಎಂದು ಅಶೋಕ್ ಪ್ರಶ್ನಿಸಿದ್ದಾರೆ.


Click the Play button to hear this message in audio format

ರಾಜ್ಯದಲ್ಲಿ ಸಂಭವಿಸುತ್ತಿರುವ ಬಾಣಂತಿಯರ ಸರಣಿ ಸಾವಿನ ವಿಚಾರವಾಗಿ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಪ್ರತಿಪಕ್ಷ ನಾಯಕ ಆರ್ ಅಶೋಕ್, ಮಹಿಳೆಯರಿಗೆ ನಿಮ್ಮ 2000 ರೂಪಾಯಿ ನೀಡುವ ಬದಲು ಮೊದಲು ಬಾಣಂತಿಯರ ಸಾವು ನಿಲ್ಲಿಸಿ. ಔಷಧ ನಿಯಂತ್ರಣದಲ್ಲಿ ಗೋಲ್ಮಾಲ್ ಆಗುತ್ತಿರುವುದನ್ನು ತಪ್ಪಿಸಿ. ರಾಜ್ಯದಲ್ಲಿ ಬಾಣಂತಿಯರಿಗೆ ಬದುಕುವ ಗ್ಯಾರಂಟಿಯನ್ನು ಸರ್ಕಾರ ಕೊಡಲಿ ಎಂದು ಅವರು ಆಗ್ರಹಿಸಿದ್ದಾರೆ.

ಗುರುವಾರ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇದು ಸರ್ಕಾರಿ ಪ್ರಾಯೋಜಿತ ಕೊಲೆಗೆ ಸಮ. ಇನ್ನೂ ಕೂಡ ಈ ಸರ್ಕಾರಕ್ಕೆ ಆತ್ಮಹತ್ಯೆ ಮಾಡಿಕೊಳ್ಳಬೇಕು ಎಂದು ಅನಿಸುತ್ತಿಲ್ಲವೇ ಎಂದು ಪ್ರಶ್ನಿಸಿದ್ದಾರೆ. ಬಾಣಂತಿಯರ ಸಾವಿಗೆ ಸಂಬಂಧಿಸಿದ ನ್ಯಾಯಾಂಗ ತನಿಖೆ ಬಗ್ಗೆ, ಡೆತ್ ಆಡಿಟ್ ಬಗ್ಗೆ ಇನ್ನೂ ಯಾವುದೇ ಮಾಹಿತಿ ಬಂದಿಲ್ಲ. ಕಳಪೆ ದ್ರಾವಣ ಪೂರೈಸಿದ ಕಂಪನಿ ವಿರುದ್ಧ ದೆಹಲಿಗೆ ಹೋಗಿ ದೂರು ಕೊಡುವುದಾಗಿ ಆರೋಗ್ಯ ಸಚಿವರು ಹೇಳಿದ್ದರು. ಆದರೆ ಇನ್ನೂ ಯಾಕೆ ಹೋಗಿ ದೂರು ಕೊಟ್ಟಿಲ್ಲ ಎಂದು ಅಶೋಕ್ ಪ್ರಶ್ನಿಸಿದ್ದಾರೆ. ಸರ್ಕಾರಿ ಆಸ್ಪತ್ರೆಗಳು ಬಾಣಂತಿಯರ ಪಾಲಿಗೆ ಮರಣ ಮೃದಂಗ ಬಾರಿಸುವಂತಾಗಿದೆ ಎಂದು ಅವರು ದೂರಿದರು.

ಈ ಎಲ್ಲಾ ಸಮಸ್ಯೆಗಳಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕಾರಣ. ಅವರು ರಾಜೀನಾಮೆ ನೀಡಬೇಕು ಮತ್ತು ಬಾಣಂತಿಯರ ಸಾವು ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಕೊಡಬೇಕು. ಈಗಿನ ಆರೋಗ್ಯ ಸಚಿವರು ರಾಜಿನಾಮೆ ಕೊಟ್ಟು ಹೊಸ ಸಚಿವರು ಬಂದರೆ ಹಾಗೂ ಸಕ್ರಿಯವಾಗಿ ಕೆಲಸ ಮಾಡಿದರೆ ಬಾಣಂತಿಯರ ಸಾವಿನ ವಿಚಾರದಲ್ಲಿ ಪರಿಹಾರ ದೊರೆಯಲು ಸಾಧ್ಯವಾಗಬಹುದು. ನಾವು ಪ್ರತಿಪಕ್ಷವಾಗಿ ಕಳೆದ ಒಂದು ವರ್ಷದಲ್ಲಿ ಹೋರಾಟ ಮಾಡಿದಷ್ಟು ಹಿಂದೆಂದೂ ಮಾಡಿಲ್ಲ. ನಾವು ಹಳೆಯ ವಿಚಾರಗಳನ್ನು ಎಲ್ಲವನ್ನು ತಾರ್ಕಿಕಂತ್ಯಕ್ಕೆ ಕೊಂಡೊಯ್ದಿದ್ದೇವೆ. ಈ ಪ್ರಕರಣದಲ್ಲೂ ಅಷ್ಟೆ, ಬಿಜೆಪಿಯಿಂದ ಸತ್ಯಶೋಧನಾ ಸಮಿತಿ ಮಾಡಿದ್ದೇವೆ. ವರದಿ ದೊರೆತ ಬಳಿಕ ಹೋರಾಟ ಮುಂದುವರಿಸಲಿದ್ದೇವೆ. ರಾಜ್ಯಪಾಲರನ್ನು ಭೇಟಿ ಮಾಡುತ್ತೇವೆ ಎಂದು ಅವರು ತಿಳಿಸಿದರು.

Read More
Next Story