ಕುತೂಹಲ ಮೂಡಿಸಿದ ಸಿಎಂ, ಡಿಸಿಎಂ ಡಿನ್ನರ್‌ ಪಾರ್ಟಿ
x

ಕುತೂಹಲ ಮೂಡಿಸಿದ ಸಿಎಂ, ಡಿಸಿಎಂ ಡಿನ್ನರ್‌ ಪಾರ್ಟಿ


ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಂಟಿಯಾಗಿ ಬುಧವಾರ ಸಂಪುಟದ ಎಲ್ಲ ಸಚಿವರಿಗೆ ಔತಣಕೂಟ ಏರ್ಪಡಿಸಿದ್ದಾರೆ.

ಜ್ಯ ಕಾಂಗ್ರೆಸ್ ಸರ್ಕಾರ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಸಚಿವರಿಗೆ ಔತಣಕೂಟ ಆಯೋಜನೆ ಮಾಡಲಾಗಿದೆ ಎಂದು ಹೇಳಲಾಗಿದೆ. ಸದಾಶಿವನಗರದಲ್ಲಿರುವ ಸಂಸದ ಡಿ.ಕೆ.ಸುರೇಶ್ ನಿವಾಸದಲ್ಲಿ ಸಂಜೆ 7 ಗಂಟೆಗೆ ಔತನಕೂಟ ನಡೆಯಲಿದೆ. ಸಿಎಂ ಸಿದ್ದರಾಮಯ್ಯ ಸೇರಿದಂತೆ ಎಲ್ಲಾ ಸಚಿವರಿಗೂ ಆಹ್ವಾನ ನೀಡಲಾಗಿದೆ.

ಔತಣಕೂಟ ಹುಟ್ಟುಹಾಕಿದ ಹಲವು ಅನುಮಾನ:

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬದಲಾವಣೆ ಕುರಿತು ಡಿಕೆಶಿ ಸುಳಿವು ನೀಡಿದ್ದರು. ಇದರ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆಶಿ ಮುಂದುವರೆಯುತ್ತಾರಾ, ಕೆಳಗಿಳಿಯುತ್ತಾರಾ ಎನ್ನುವ ಚರ್ಚೆ ಜೋರಾಗಿದೆ. ಮತ್ತೊಂದು ನಡೆಯಲ್ಲಿ ಸಿಎಂ ಗಾದಿ ಮೇಲೆ ಡಿಸಿಎಂ ಡಿಕೆ ಶಿವಕುಮಾರ್ ಕಣ್ಣಿಟ್ಟಿದ್ದಾರೆ ಎನ್ನಲಾಗಿದೆ. ಆದರೆ ಕೂಟದಲ್ಲಿ ಸಿಎಂ ಸಿದ್ದರಾಮಯ್ಯಾ ಅವರೂ ಭಾಗವಹಿಸುತ್ತಿರುವುದರಿಂದ ವಿಶೇಷ ಅರ್ಥ ಕಲ್ಪಿಸಬೇಕಿಲ್ಲ ಎಂದು ಕೆಪಿಸಿಸಿ ಮೂಲಗಳು ತಿಳಿಸಿವೆ.

ಜೂನ್‌ನಲ್ಲಿ ನಡೆಯಲಿರುವ ಶಿಕ್ಷಕರು, ಪದವೀಧರ ಕ್ಷೇತ್ರ ಚುನಾವಣೆ ಗೆಲುವಿಗಾಗಿ ತಂತ್ರಗಾರಿಕೆ ನಡೆಸುವ ಜೊತೆಗೆ ಬಿಬಿಎಂಪಿ ಸೇರಿದಂತೆ ಸ್ಥಳೀಯ ಚುನಾವಣೆ ತಯಾರಿ ಕುರಿತು ಚರ್ಚಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಎಷ್ಟು ಸ್ಥಾನ ಸಿಗಲಿದೆ ಎಂಬ ಬಗ್ಗೆ ಗುಪ್ತಚರ ಇಲಾಖೆಯಿಂದಲೂ ಸಿಎಂ ಹಾಗೂ ಡಿಸಿಎಂಗೆ ಮಾಹಿತಿ ಸಿಕ್ಕಿದೆ. ಈ ವಿಚಾರವಾಗಿ ಔತಣಕೂಟದಲ್ಲಿ ಚರ್ಚೆ ನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.

Read More
Next Story