ISRO has many vacancies for graduates, last date to apply is 2nd October
x

ಇಸ್ರೋ

ಪದವೀಧರರಿಗೆ ಇಸ್ರೋದಲ್ಲಿ ಉದ್ಯೋಗ; ಅರ್ಜಿ ಸಲ್ಲಿಸಲು ಅ.2 ಕೊನೆ ದಿನ

ಯಾವುದೇ ವಿಷಯದಲ್ಲಿ ಪದವಿ (ಕಲೆ, ವಾಣಿಜ್ಯ, ವಿಜ್ಞಾನ, ಎಂಜಿನಿಯರಿಂಗ್) ಪಡೆದಿರಬೇಕು. ನಿಗದಿತ ವಿದ್ಯಾರ್ಹತೆಯಲ್ಲಿ ಕನಿಷ್ಠ ಶೇ. 60ರಷ್ಟು ಅಂಕಗಳನ್ನು ಗಳಿಸಿರಬೇಕು. ಅಭ್ಯರ್ಥಿಗಳಿಗೆ ಹಿಂದಿ ಟೈಪ್‌ರೈಟಿಂಗ್ ತಿಳಿದಿರಬೇಕು.


Click the Play button to hear this message in audio format

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಅಧೀನದಲ್ಲಿರುವ ಸ್ಪೇಸ್ ಅಪ್ಲಿಕೇಶನ್ ಸೆಂಟರ್ (SAC)ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಯು.ಆರ್. ರಾವ್ ಸ್ಯಾಟಲೈಟ್ ಸೆಂಟರ್ (URSC), ಲಿಕ್ವಿಡ್ ಪ್ರೊಪಲ್ಷನ್ ಸಿಸ್ಟಮ್ಸ್ ಸೆಂಟರ್ (LPSC), ಇಸ್ರೋ ಪ್ರೊಪಲ್ಷನ್ ಕಾಂಪ್ಲೆಕ್ಸ್ (IPRC) ಮತ್ತು ಇಸ್ರೋ ಟೆಲಿಮೆಟ್ರಿ, ಟ್ರ್ಯಾಕಿಂಗ್ ಆಂಡ್ ಕಮಾಂಡ್ ನೆಟ್‌ವರ್ಕ್ (ISTRAC) ಕೇಂದ್ರಗಳಲ್ಲಿ ನೇಮಕಾತಿ ನಡೆಯಲಿದ್ದು, ಆಸಕ್ತರು ಅ. 2 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ವಿದ್ಯಾರ್ಹತೆ

ಯಾವುದೇ ವಿಷಯದಲ್ಲಿ ಪದವಿ (ಕಲೆ, ವಾಣಿಜ್ಯ, ವಿಜ್ಞಾನ, ಎಂಜಿನಿಯರಿಂಗ್) ಪಡೆದಿರಬೇಕು. ನಿಗದಿತ ವಿದ್ಯಾರ್ಹತೆಯಲ್ಲಿ ಕನಿಷ್ಠ ಶೇ 60ರಷ್ಟು ಅಂಕ ಗಳಿಸಿರಬೇಕು. ಅಭ್ಯರ್ಥಿಗಳಿಗೆ ಹಿಂದಿ ಟೈಪ್‌ರೈಟಿಂಗ್ ತಿಳಿದಿರಬೇಕು.

ವಯೋಮಿತಿ ಮತ್ತು ವೇತನ ಶ್ರೇಣಿ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ 25 ವರ್ಷ ವಯಸ್ಸು ನಿಗದಿಪಡಿಸಲಾಗಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 25,500 ರಿಂದ 81,100 ರೂ. ವರೆಗೆ ವೇತನ ಪಡೆಯಬಹುದಾಗಿದೆ.

ಅರ್ಜಿ ಶುಲ್ಕ ಮತ್ತು ಆಯ್ಕೆ ಪ್ರಕ್ರಿಯೆ

ಪರಿಶಿಷ್ಟ ಜಾತಿ ಮತ್ತು ಪಂಗಡ, ಮಾಜಿ ಸೈನಿಕರು, ವಿಶೇಷ ಚೇತನರು ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ. ಇತರೆ ಅಭ್ಯರ್ಥಿಗಳಿಗೆ 500 ರೂ. ಶುಲ್ಕ ನಿಗದಿಪಡಿಸಿದೆ. ಅಭ್ಯರ್ಥಿಗಳಿಗೆ ಬೆಂಗಳೂರು ಸೇರಿದಂತೆ ದೇಶದ ವಿವಿಧೆಡೆ ಲಿಖಿತ ಪರೀಕ್ಷೆ ನಡೆಸಲಾಗುತ್ತದೆ. ಇದರಲ್ಲಿ ಅರ್ಹತೆ ಪಡೆದವರಿಗೆ ಸಂದರ್ಶನ ಮತ್ತು ದಾಖಲೆ ಪರಿಶೀಲನೆ ನಡೆಸಿ ಅಂತಿಮವಾಗಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.

ಹೆಚ್ಚಿನ ವಿವರಗಳಿಗಾಗಿ ಇಸ್ರೋ ಅಥವಾ ಸ್ಪೇಸ್ ಅಪ್ಲಿಕೇಶನ್ ಸೆಂಟರ್‌ನ ಅಧಿಕೃತ ವೆಬ್‌ಸೈಟ್ www.sac.gov.in ಗೆ ಭೇಟಿ ನೀಡಬಹುದಾಗಿದೆ ಎಂದು ಇಸ್ರೋ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

Read More
Next Story