
ಸಚಿವ ಜಮೀರ್ ಖಾನ್ ಆಪ್ತ ಅಧಿಕಾರಿ ಸರ್ಫರಾಜ್ ಬಳಿ 14.38 ಕೋಟಿ ರೂ. ಅಕ್ರಮ ಆಸ್ತಿ ಪತ್ತೆ
ಸರ್ಫರಾಜ್ ಖಾನ್ ಬಳಿ 8.44 ಕೋಟಿ ರೂ. ಮೌಲ್ಯದ 4 ಐಷಾರಾಮಿ ಮನೆಗಳು ಹಾಗೂ 37 ಎಕರೆ ಕೃಷಿ ಭೂಮಿ ಸ್ಥಿರಾಸ್ತಿ ಪತ್ತೆಯಾಗಿದೆ. ಸುಮಾರು 2.99 ಕೋಟಿ ರೂ.ಗಿಂತ ಹೆಚ್ಚು ಮೌಲ್ಯದ ಚಿನ್ನಾಭರಣ ಪತ್ತೆಯಾಗಿದೆ.
ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರ ಆಪ್ತ ಎನ್ನಲಾದ ಮತ್ತು ವಸತಿ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಸರ್ದಾರ್ ಸರ್ಫರಾಜ್ ಖಾನ್‌ಗೆ ಸೇರಿದ ಸ್ಥಳಗಳ ಈ ಹಿಂದೆ ದಾಳಿ ನಡೆಸಿದ ವೇಳೆ ವಶ ಪಡಿಸಿಕೊಂಡಿದ್ದ ಆಸ್ತಿ ಮೌಲ್ಯ14.38 ಕೋಟಿ ರೂ. ಗಳಿಗೂ ಮೀರಿದೆ.
ಆಸ್ತಿಮೌಲ್ಯವನ್ನು ಲೋಕಾಯುಕ್ತ ಪೊಲೀಸರು ಅಂತಿಮಗೊಳಿಸಿದ್ದಾರೆ.
ಈ ವೇಳೆ ಕೋಟ್ಯಂತರ ರು. ಮೌಲ್ಯದ ಆಸ್ತಿಯನ್ನು ಪತ್ತೆ ಹಚ್ಚಲಾಗಿತ್ತು. ಸರ್ಫರಾಜ್ ನಿವಾಸ, ಕಚೇರಿ ಹಾಗೂ ಸಂಬಂಧಿಕರ ಮನೆಗಳ ಮೇಲೆ ದಾಳಿ ಮಾಡಿ ಆಸ್ತಿಯನ್ನು ವಶಕ್ಕೆ ಪಡೆದುಕೊಳ್ಳಲಾಗಿತ್ತು ಎಂದು ಲೋಕಾಯುಕ್ತ ಪೊಲೀಸರು ಹೇಳಿದ್ದಾರೆ.
ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಮಾಡಿರುವ ಆರೋಪದ ಮೇರೆಗೆ 2025ರ ಡಿ.24 ರಂದು ಸರ್ಫರಾಜ್ ಅವರಿಗೆ ಸೇರಿದ ಒಟ್ಟು 13 ಸ್ಥಳಗಳಲ್ಲಿ ಏಕಕಾಲಕ್ಕೆ ಶೋಧ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರು. ಮೌಲ್ಯದ ಆಸ್ತಿಯನ್ನು ಪತ್ತೆ ಹಚ್ಚಲಾಗಿತ್ತು. ಸರ್ಫರಾಜ್ ನಿವಾಸ, ಕಚೇರಿ ಹಾಗೂ ಸಂಬಂಧಿಕರ ಮನೆಗಳ ಮೇಲೆ ದಾಳಿ ಮಾಡಿ ಆಸ್ತಿಯನ್ನು ವಶಕ್ಕೆ ಪಡೆದುಕೊಳ್ಳಲಾಗಿತ್ತು ಎಂದು ಲೋಕಾಯುಕ್ತ ಪೊಲೀಸರು ಹೇಳಿದ್ದಾರೆ.
ಲೋಕಾಯುಕ್ತ ಅಧಿಕಾರಿಗಳ ಪ್ರಾಥಮಿಕ ತನಿಖೆಯಲ್ಲಿ 14.38 ಕೋಟಿ ರೂ. ಮೌಲ್ಯದ ಆಸ್ತಿ ಪತ್ತೆಯಾಗಿದೆ. 8.44 ಕೋಟಿ ರೂ. ಮೌಲ್ಯದ 4 ಐಷಾರಾಮಿ ಮನೆಗಳು ಹಾಗೂ 37 ಎಕರೆ ಕೃಷಿ ಭೂಮಿ ಸ್ಥಿರಾಸ್ತಿ ಪತ್ತೆಯಾಗಿದೆ. ಸುಮಾರು 2.99 ಕೋಟಿ ರೂ.ಗಿಂತ ಹೆಚ್ಚು ಮೌಲ್ಯದ ಚಿನ್ನಾಭರಣ ಪತ್ತೆಯಾಗಿದೆ. 1.64 ಕೋಟಿ ರೂ. ಮೌಲ್ಯಗಿಂತ ಅಧಿಕ ಐಷರಾಮಿ ಕಾರು ಮತ್ತು ಇತರೆ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. 66,500 ರೂ. ನಗದು ಮತ್ತು 1.29 ಕೋಟಿ ರೂ. ಮೌಲ್ಯದ ಬ್ಯಾಂಕ್ ಎಫ್‌ಡಿ ಮತ್ತು ಇತರೆ ಹೂಡಿಕೆಗಳು ಪತ್ತೆಯಾಗಿವೆ ಎಂದು ತಿಳಿಸಿದ್ದಾರೆ.
ಸರ್ದಾರ್ ಸರ್ಫರಾಜ್ ಖಾನ್ ಈ ಹಿಂದೆ ಸಹಕಾರ ಸಂಘಗಳ ಆಡಿಟ್ ವಿಭಾಗದ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು. ಸದ್ಯ ಅವರು ವಸತಿ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಕಾರ್ಯದರ್ಶಿಯಾಗಿ ನಿಯೋಜನೆ ಮೇರೆಗೆ ಕಾರ್ಯನಿರ್ವಹಿಸುತ್ತಿದ್ದಾರೆ. ಬೆಂಗಳೂರಿನ ಹಲಸೂರಿನಲ್ಲಿರುವ ಸರ್ಫರಾಜ್ ನಿವಾಸ ಮತ್ತು ಸಂಬಂಧಿಕರ ಮನೆಗಳೂ ಸೇರಿದಂತೆ 5 ಕಡೆ ದಾಳಿ ನಡೆದಿತ್ತು. ಜತೆಗೆ, ಕೊಡಗು ಜಿಲ್ಲೆಯಲ್ಲಿರುವ ಸರ್ಫರಾಜ್ ಒಡೆತನದ ಕಾಫಿ ಎಸ್ಟೇಟ್‌ಗಳು ಹಾಗೂ ಎಚ್.ಡಿ.ಕೋಟೆಯಲ್ಲಿನ ರೆಸಾರ್ಟ್ ಮೇಲೆ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿ ಶೋಧ ಕಾರ್ಯ ನಡೆಸಲಾಗಿತ್ತು.
ಸರ್ಫರಾಜ್ ವಿರುದ್ಧ ಬಾಗಲಕೋಟೆಯ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿದೂರು ದಾಖಲಾಗಿತ್ತು. ಆ ದೂರಿನ ಅನ್ವಯ ಬೆಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿಪ್ರಕರಣ ದಾಖಲಿಸಲಾಗಿತ್ತು. ದಾಳಿ ವೇಳೆ ಸರ್ಫರಾಜ್ ಮತ್ತು ಅವರ ಕುಟುಂಬದ ಸದಸ್ಯರ ಹೆಸರಿನಲ್ಲಿದ್ದ ಸ್ಥಿರಾಸ್ತಿಗಳ ದಾಖಲೆಗಳು ಪತ್ತೆಯಾಗಿದ್ದವು. ರೋಪಿತ ಅಧಿಕಾರಿಯು ಬೇನಾಮಿ ಹೆಸರಿನಲ್ಲಿ ಆಸ್ತಿ ಹೊಂದಿದ್ದಾರೆಯೇ ಎಂಬ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಲೋಕಾಯುಕ್ತ ಅಧಿಕಾರಿಗಳು ತಿಳಿಸಿದ್ದಾರೆ.

