ಮರಳಿ ಬಿಜೆಪಿ ಗೂಡು ಸೇರಿದ ಜನಾರ್ದನ ರೆಡ್ಡಿ
x

ಮರಳಿ ಬಿಜೆಪಿ ಗೂಡು ಸೇರಿದ ಜನಾರ್ದನ ರೆಡ್ಡಿ


ಅಕ್ರಮ ಗಣಿಗಾರಿಕೆ ಆರೋಪದ ಹಿನ್ನಲೆಯಲ್ಲಿ ಬಿಜೆಪಿಯಿಂದ ಅಮಾನತುಗೊಂಡಿದ್ದ ಕೆಕೆಪಿಆರ್ ಪಕ್ಷದ ರಾಜ್ಯಾಧ್ಯಕ್ಷ ಹಾಗೂ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರು ಮತ್ತೆ ಮಾತೃ ಪಕ್ಷ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ಜನಾರ್ದನ ರೆಡ್ಡಿ ಅವರು ಬಿಜೆಪಿ ಸೇರ್ಪಡೆ ಕುರಿತು ಖುದ್ದು ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರ ಜೊತೆಗೆ ಚರ್ಚೆ ನಡೆಸಿದ್ದು, ಅಮಿತ್ ಶಾ ಅವರೇ ಹಸಿರುನಿಶಾನೆ ತೋರಿದ್ದು, ಯಾವುದೇ ಷರತ್ತುಗಳು ಇಲ್ಲದೆ ಪಕ್ಷದ ನಾಯಕತ್ವ ಮತ್ತು ಸಿದ್ದಾಂತಕ್ಕೆ ಬದ್ದವಾಗಿ ಪಕ್ಷ ಸೇರ್ಪಡೆಗೆ ಸಮ್ಮತಿಸಿದ್ದಾರೆ.

ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ನಡೆದ ಕೆಆರ್‌ಪಿಪಿ ಪಕ್ಷ ವಿಲೀನ ಕಾರ್ಯಕ್ರಮದಲ್ಲಿ ಜನಾರ್ದನ ರೆಡ್ಡಿ, ಪತ್ನಿ ಅರುಣಾ ಲಕ್ಷ್ಮಿ ಸೇರಿ ಕೆಆರ್‌ಪಿಪಿ ಪಕ್ಷದ ಎಲ್ಲ ಪದಾಧಿಕಾರಿಗಳು ಬಿಜೆಪಿ ಸೇರ್ಪಡೆಯಾಗಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಮಾಜಿ ಸಚಿವರಾದ ಶ್ರೀರಾಮುಲು, ಆನಂದ್ ಸಿಂಗ್, ಸಿಟಿ ರವಿ, ಅಶ್ವಥ್‌ನಾರಾಯಣ ಅವರ ಉಪಸ್ಥಿತಿಯಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದಾರೆ.

ಈ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪಕ್ಷದ ಶಾಲು ಹೊದಿಸಿ, ಬಾವುಟ ನೀಡಿ ಸ್ವಾಗತಿಸಿದರು. ಅಲ್ಲದೇ ಪಕ್ಷ ನಿಮ್ಮನ್ನು ಗೌರವಯುತವಾಗಿ ನಡೆಸಿಕೊಳ್ಳಲಿದೆ ಎಂದು ಭರವಸೆಯನ್ನೂ ನೀಡಿದರು. ಈ ವೇಳೆ ಜನಾರ್ದನ ರೆಡ್ಡಿ, ಯಡಿಯೂರಪ್ಪ ಅವರ ಕಾಲಿಗೆ ನಮಸ್ಕರಿಸಿ ಆಶೀರ್ವಾದ ಪಡೆದರು.

Read More
Next Story