
ಸುಚಿವೃತ್ ಮನೆಗೆ ಸಚಿವ ಈಶ್ವರ ಖಂಡ್ರೆ ಭೇಟಿ ನೀಟಿ ಮಾತುಕತೆ ನಡೆಸಿದರು.
ಜನಿವಾರ ವಿವಾದ; ಸುಚಿವ್ರತ್‌ಗೆ ಬಿಕೆಐಟಿಯಲ್ಲಿ ಉಚಿತ ಎಂಜಿನಿಯರಿಂಗ್ ಸೀಟು: ಸಚಿವ ಈಶ್ವರ ಖಂಡ್ರೆ
ಸಿಇಟಿ ಪರೀಕ್ಷೆಯ ಸಂದರ್ಭದಲ್ಲಿ ಸುಚಿವ್ರತ್ ಕುಲಕರ್ಣಿಯವರು ಜನಿವಾರ ಧರಿಸಿದ್ದ ಕಾರಣಕ್ಕೆ ಪರೀಕ್ಷಾ ಕೇಂದ್ರಕ್ಕೆ ಪ್ರವೇಶ ನಿರಾಕರಿಸಲಾಗಿತ್ತು. ಈ ಘಟನೆಯು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಕಾರಣವಾಗಿದೆ.
ಸಿಇಟಿ ಪರೀಕ್ಷೆಯ ಸಂದರ್ಭದಲ್ಲಿ ಸುಚಿವ್ರತ್ ಕುಲಕರ್ಣಿಯವರು ಜನಿವಾರ ಧರಿಸಿದ್ದ ಕಾರಣಕ್ಕೆ ಪರೀಕ್ಷಾ ಕೇಂದ್ರಕ್ಕೆ ಪ್ರವೇಶ ನಿರಾಕರಿಸಲಾಗಿತ್ತು. ಈ ಘಟನೆಯು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಕಾರಣವಾಗಿದ್ದು, ಬ್ರಾಹ್ಮಣ ಸಂಘಟನೆಗಳು ಮೈಸೂರಿನಲ್ಲಿ ಪ್ರತಿಭಟನೆಯನ್ನೂ ನಡೆಸಿದ್ದವು.
ಜನಿವಾರ ಧರಿಸಿದ್ದ ಕಾರಣಕ್ಕೆ ಕಾಮನ್ ಎಂಟ್ರನ್ಸ್ ಟೆಸ್ಟ್ (ಸಿಇಟಿ) ಗಣಿತ ಪರೀಕ್ಷೆಗೆ ಪ್ರವೇಶ ನಿರಾಕರಣೆಗೆ ಒಳಗಾಗಿದ್ದ ವಿದ್ಯಾರ್ಥಿ ಸುಚಿವ್ರತ್ ಕುಲಕರ್ಣಿಗೆ ಬೀದರ್ ಜಿಲ್ಲೆಯ ಭಾಲ್ಕಿಯ ಭೀಮಣ್ಣ ಖಂಡ್ರೆ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಬಿಕೆಐಟಿ)ಯಲ್ಲಿ ಉಚಿತ ಎಂಜಿನಿಯರಿಂಗ್ ಸೀಟು ನೀಡುವುದಾಗಿ ಕರ್ನಾಟಕದ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಹಾಗೂ ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ಘೋಷಿಸಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಖಂಡ್ರೆ, ವಿದ್ಯಾರ್ಥಿಯ ಶೈಕ್ಷಣಿಕ ಭವಿಷ್ಯಕ್ಕೆ ಹಾನಿಯಾಗದಂತೆ ತಡೆಯಲು ತಮ್ಮ ಸರ್ಕಾರ ಬದ್ಧ ಎಂದು ಹೇಳಿದ್ದಾರೆ. .
ಸಿಇಟಿ ಪರೀಕ್ಷೆಯ ಸಂದರ್ಭದಲ್ಲಿ ಸುಚಿವ್ರತ್ ಕುಲಕರ್ಣಿಯವರು ಜನಿವಾರ ಧರಿಸಿದ್ದ ಕಾರಣಕ್ಕೆ ಪರೀಕ್ಷಾ ಕೇಂದ್ರಕ್ಕೆ ಪ್ರವೇಶ ನಿರಾಕರಿಸಲಾಗಿತ್ತು. ಈ ಘಟನೆಯು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಕಾರಣವಾಗಿದ್ದು, ಬ್ರಾಹ್ಮಣ ಸಂಘಟನೆಗಳು ಮೈಸೂರಿನಲ್ಲಿ ಪ್ರತಿಭಟನೆಯನ್ನೂ ನಡೆಸಿದ್ದವು. ಈ ಬಗ್ಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಸಚಿವ ಖಂಡ್ರೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದರು. 24 ಗಂಟೆಗಳ ಒಳಗೆ ತನಿಖೆ ವರದಿ ಸಲ್ಲಿಸಲು ಆದೇಶಿಸಿದ್ದ ಅವರು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಬೀದರ್ ಜಿಲ್ಲೆಯ ಭಾಲ್ಕಿಯಲ್ಲಿರುವ ಬಿಕೆಐಟಿ, ಉತ್ತರ ಕರ್ನಾಟಕದ ಪ್ರಮುಖ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಒಂದಾಗಿದ್ದು, ಶಾಂತಿ ವರ್ಧಕ ಎಜುಕೇಶನ್ ಸೊಸೈಟಿಯ ಒಡೆತನದಲ್ಲಿದೆ. ಸುಚಿವ್ರತ್‌ಗೆ ಈ ಕಾಲೇಜಿನಲ್ಲಿ ಉಚಿತ ಸೀಟು ಒದಗಿಸುವ ತೀರ್ಮಾನವನ್ನು ಖಂಡ್ರೆ ಘೋಷಿಸಿದ್ದು, ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ಗಳು ವೈರಲ್ ಆಗಿವೆ.
ಇತರ ಪರೀಕ್ಷೆಗಳಿಗೆ ಅವಕಾಶ
ಸಚಿವ ಖಂಡ್ರೆ, ಸುಚಿವ್ರತ್‌ಗೆ ಪರ್ಯಾಯ ಅವಕಾಶಗಳನ್ನೂ ಒದಗಿಸಲು ಕ್ರಮ ಕೈಗೊಂಡಿದ್ದಾರೆ. ಉನ್ನತ ಶಿಕ್ಷಣ ಸಚಿವರೊಂದಿಗೆ ಚರ್ಚಿಸಿ, ಸುಚಿವ್ರತ್‌ಗೆ ಪ್ರತ್ಯೇಕ ಸಿಇಟಿ ಪರೀಕ್ಷೆ ಆಯೋಜಿಸುವ ಸಾಧ್ಯತೆಯನ್ನು ಪರಿಶೀಲಿಸಲಾಗುತ್ತಿದೆ. ಜೊತೆಗೆ, ಸುಚಿವ್ರತ್ ಅವರು ಕಾಮೆಡ್‌ಕೆ ಪರೀಕ್ಷೆಯಲ್ಲಿ ಭಾಗವಹಿಸಿ, ಅದರ ಆಧಾರದ ಮೇಲೆ ಸೀಟು ಪಡೆಯಬಹುದು ಎಂದು ಖಂಡ್ರೆ ಸೂಚಿಸಿದ್ದಾರೆ. “ನಾವು ವಿದ್ಯಾರ್ಥಿ ಮತ್ತು ಅವರ ಕುಟುಂಬದೊಂದಿಗೆ ಗಟ್ಟಿಯಾಗಿ ನಿಂತಿದ್ದೇವೆ. ಅವರಿಗೆ ಎಲ್ಲ ರೀತಿಯ ಬೆಂಬಲವನ್ನೂ ಒದಗಿಸುತ್ತೇವೆ,” ಎಂದು ಖಂಡ್ರೆ ಭರವಸೆ ನೀಡಿದ್ದಾರೆ.