
ಸಭೆಯಲ್ಲಿ ಭಾಗವಹಿಸಿದ್ದ ಮಹಿಳಾ ಘಟಕದ ಸದಸ್ಯರು
ಜೆಡಿಎಸ್ ಮಹಿಳಾ ಘಟಕದ ಸಭೆ: ತಾಲೂಕು, ಜಿಲ್ಲಾ ಮಟ್ಟದಲ್ಲಿ ಸಂಘಟನೆ ಬಲಪಡಿಸಲು ನಿರ್ಧಾರ
ಬೂತ್ ಮಟ್ಟದಿಂದಲೇ ಮಹಿಳಾ ಕಾರ್ಯಕರ್ತರನ್ನು ಸಂಘಟಿಸುವುದು ಮತ್ತು ಪಕ್ಷದ ಸಿದ್ಧಾಂತಗಳನ್ನು ಮನೆಮನೆಗೆ ತಲುಪಿಸುವ ಜವಾಬ್ದಾರಿಯನ್ನು ಮಹಿಳಾ ಘಟಕಕ್ಕೆ ನೀಡುವ ಕುರಿತು ಸಮಾಲೋಚನೆ ನಡೆಸಲಾಯಿತು.
ಜಾತ್ಯತೀತ ಜನತಾದಳ (ಜೆಡಿಎಸ್) ಪಕ್ಷದ ರಾಜ್ಯ ಮಹಿಳಾ ಘಟಕದ ಮಹತ್ವದ ಸಭೆಯು ಭಾನುವಾರ (ಡಿ.29) ನಗರದ ಜೆ.ಪಿ. ಭವನದಲ್ಲಿ ನಡೆಯಿತು. ಪಕ್ಷದ ಕೋರ್ ಕಮಿಟಿ ಅಧ್ಯಕ್ಷ ಎಂ. ಕೃಷ್ಣಾರೆಡ್ಡಿ ಅವರ ನೇತೃತ್ವದಲ್ಲಿ ನಡೆದ ಈ ಸಭೆಯಲ್ಲಿ, ತಳಮಟ್ಟದಿಂದ ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಹಲವಾರು ನಿರ್ಣಾಯಕ ಚರ್ಚೆಗಳು ನಡೆದವು.
ಸಭೆಯಲ್ಲಿ ಪ್ರಮುಖವಾಗಿ ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಮಹಿಳಾ ಘಟಕವನ್ನು ಇನ್ನಷ್ಟು ಕ್ರಿಯಾಶೀಲಗೊಳಿಸುವ ಬಗ್ಗೆ ಸುದೀರ್ಘ ಚರ್ಚೆ ನಡೆಸಲಾಯಿತು. ಬೂತ್ ಮಟ್ಟದಿಂದಲೇ ಮಹಿಳಾ ಕಾರ್ಯಕರ್ತರನ್ನು ಸಂಘಟಿಸುವುದು ಮತ್ತು ಪಕ್ಷದ ಸಿದ್ಧಾಂತಗಳನ್ನು ಮನೆಮನೆಗೆ ತಲುಪಿಸುವ ಜವಾಬ್ದಾರಿಯನ್ನು ಮಹಿಳಾ ಘಟಕಕ್ಕೆ ನೀಡುವ ಕುರಿತು ಸಮಾಲೋಚನೆ ನಡೆಸಲಾಯಿತು. ಇದೇ ವೇಳೆ, ಸಂಘಟನೆಯನ್ನು ಚುರುಕುಗೊಳಿಸಲು ಪಕ್ಷದ ನಿಷ್ಠಾವಂತ ಕಾರ್ಯಕರ್ತೆಯರಿಗೆ ಹೊಸ ಜವಾಬ್ದಾರಿಗಳನ್ನು ವಹಿಸುವ ಬಗ್ಗೆಯೂ ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳಲಾಯಿತು ಎಂದು ಪಕ್ಷದ ಮೂಲಗಳು ಹೇಳಿವೆ.
ಜೆ.ಪಿ. ಭವನದಲ್ಲಿ ಮಹಿಳಾ ಘಟಕದ ಸಭೆ ನಡೆಸಲಾಯಿತು.
ಜೆ.ಪಿ. ಭವನದಲ್ಲಿ ನಡೆದ ಈ ಸಭೆಯಲ್ಲಿ ಜೆಡಿಎಸ್‌ನ ಹಿರಿಯ ನಾಯಕರು ಮತ್ತು ಮಹಿಳಾ ಘಟಕದ ಪ್ರಮುಖ ಪದಾಧಿಕಾರಿಗಳು ಭಾಗವಹಿಸಿದ್ದರು. ಮಾಜಿ ಸಚಿವೆ ಹಾಗೂ ರಾಜ್ಯ ಮಹಿಳಾ ಘಟಕದ ಗೌರವಾಧ್ಯಕ್ಷೆ ಲೀಲಾದೇವಿ ಆರ್. ಪ್ರಸಾದ್, ವಿಧಾನ ಪರಿಷತ್ ಮಾಜಿ ಸದಸ್ಯ ಹಾಗೂ ಹಿರಿಯ ನಾಯಕ ಕೆ.ಎ. ತಿಪ್ಪೇಸ್ವಾಮಿ, ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ರಶ್ಮೀ ರಾಮೇಗೌಡ ಸೇರಿದಂತೆ ವಿವಿಧ ಜಿಲ್ಲೆಗಳ ಮಹಿಳಾ ಘಟಕದ ಅಧ್ಯಕ್ಷರುಗಳು ಉಪಸ್ಥಿತರಿದ್ದರು. ಸಭೆಯಲ್ಲಿ ಪಾಲ್ಗೊಂಡಿದ್ದ ಮಹಿಳಾ ಕಾರ್ಯಕರ್ತೆಯರು ಮುಕ್ತವಾಗಿ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು.
ಸಭೆಯಲ್ಲಿ ಭಾಗವಹಿಸಿದ್ದ ಮಹಿಳಾ ಘಟಕದ ಸದಸ್ಯರು
ಸ್ಥಳೀಯ ಚುನಾವಣೆ ಮತ್ತು ಸ್ವತಂತ್ರ ಸ್ಪರ್ಧೆಯ ಸಂದೇಶ
ಇತ್ತೀಚೆಗೆ ಪಕ್ಷದ ವರಿಷ್ಠರಾದ ಎಚ್.ಡಿ. ದೇವೇಗೌಡ ಅವರು ಸ್ಥಳೀಯ ಚುನಾವಣೆಗಳಲ್ಲಿ ಜೆಡಿಎಸ್ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಘೋಷಿಸಿದ್ದರು. ಈ ಘೋಷಣೆಯ ಹಿನ್ನೆಲೆಯಲ್ಲಿ ಇಂದಿನ ಸಭೆ ಹೆಚ್ಚು ಮಹತ್ವ ಪಡೆದುಕೊಂಡಿದೆ. ಪಕ್ಷದ ಸಂಘಟನೆಯಲ್ಲಿ ಮಹಿಳೆಯರ ಪಾತ್ರ ನಿರ್ಣಾಯಕವಾಗಲಿದ್ದು, ಗ್ರಾಮೀಣ ಭಾಗದಲ್ಲಿ ಮಹಿಳಾ ಮತದಾರರನ್ನು ಸೆಳೆಯಲು ಹಾಗೂ ಪಕ್ಷದ ನೆಲೆ ಗಟ್ಟಿಗೊಳಿಸಲು ಇಂದಿನ ಸಭೆಯಲ್ಲಿ ಅಗತ್ಯ ಕಾರ್ಯತಂತ್ರ ಮತ್ತು ರೂಪುರೇಷೆಗಳನ್ನು

