
ಕಲಬುರಗಿಯಲ್ಲಿ ಕ್ರೌರ್ಯ | ಗುಂಡಿಕ್ಕಿ ಗ್ರಾ.ಪಂ ಮಾಜಿ ಸದಸ್ಯ ಬರ್ಬರ ಹತ್ಯೆ
ಗ್ರಾಮ ಪಂಚಾಯಿತಿ ಮಾಜಿ ಸದಸ್ಯನನ್ನು ಗುಂಡಿಕ್ಕಿ ಕೊಲೆ ಮಾಡಿರುವ ಘಟನೆ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಜಿಡಗಾ ಕ್ರಾಸ್ ಬಳಿ ನಡೆದಿದೆ.
ವಿಶ್ವನಾಥ್ ಜಮಾದಾರ್ ಗುಂಡಿಗೆ ಬಲಿಯಾದ ವ್ಯಕ್ತಿ. ಮಗನನ್ನು ಶಾಲೆಗೆ ಬಿಟ್ಟು ಮರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ.
ವಿಶ್ವನಾಥ್ ಜಮಾದಾರ್ ಶುಕ್ರವಾರ ಬೆಳಿಗ್ಗೆ ಮಗನನ್ನು ಶಾಲೆಗೆ ಬಿಟ್ಟು ಬರುತ್ತೇನೆ ಅಂತ ಬೈಕ್ ನಲ್ಲಿ ಹೋಗಿದ್ದರು. ಮಗನನ್ನು ಶಾಲೆಗೆ ಬಿಟ್ಟು ಜಿಡಗಾ ಕ್ರಾಸ್ ಬಳಿ ಬೈಕ್‌ನಲ್ಲಿ ಬರುತ್ತಿದ್ದ ವೇಳೆ ಬೈಕ್‌ನಲ್ಲಿ ಬಂದ ಇಬ್ಬರು ಅಪರಿಚಿತ ದುಷ್ಕರ್ಮಿಗಳು ವಿಶ್ವನಾಥ್ ಅವರ ಮೇಲೆ ಏಕಾಏಕಿ ಗುಂಡಿನ ದಾಳಿ ಮಾಡಿದ್ದಾರೆ.
ವಿಶ್ವನಾಥ್ ಅವರ ತೆಲೆಗೆ ಮೂರು ಗುಂಡು ಹೊಡೆದಿದ್ದಾರೆ. ಪರಿಣಾಮ ತೀವ್ರ ರಕ್ತಸ್ರಾವವಾಗಿ ವಿಶ್ವನಾಥ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಿರ್ಜನ ಪ್ರದೇಶದಲ್ಲಿ ವಿಶ್ವನಾಥ್ ಅವರನ್ನು ಕೊಂದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ವಿಶ್ಥನಾಥ್ ಮೃತದೇಹ ಕಂಡ ದಾರಿಹೋಕರು ಪೊಲೀಸರಿಗೆ ವಿಚಾರ ತಿಳಿಸಿದ್ದಾರೆ. ಕೂಡಲೇ ಆಳಂದ ಪೊಲೀಸರು ಸ್ಥಳಕ್ಕೆ ಬಂದಿದ್ದಾರೆ.
ಕಲಬುರಗಿ ಎಸ್ಪಿ ಅಡ್ಡೂರು ಶ್ರೀನಿವಾಸಲು ಕೂಡ ಸ್ಥಳಕ್ಕೆ ನೀಡಿ ಪರೀಶಿಲನೆ ನಡೆಸಿದ್ದಾರೆ. ಕೊಲೆ ಪ್ರಕರಣ ದಾಖಲಿಸಿಕೊಂಡಿರುವ ಆಳಂದ ಪೊಲೀಸರು, ಹಂತಕರ ಪತ್ತೆಗೆ ಬಲೆ ಬೀಸಿದ್ದಾರೆ.