ಕಲ್ಯಾಣ ಕರ್ನಾಟಕ ಉತ್ಸವ | ರಾಷ್ಟ್ರ ಧ್ವಜಾರೋಹಣ ನೆರವೇರಿಸಿದ ಸಿಎಂ ಸಿದ್ದರಾಮಯ್ಯ
x
ಮುಖ್ಯಮಂತ್ರಿ ಸಿದ್ದರಾಮಯ್ಯ

ಕಲ್ಯಾಣ ಕರ್ನಾಟಕ ಉತ್ಸವ | ರಾಷ್ಟ್ರ ಧ್ವಜಾರೋಹಣ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

ಹೈದರಾಬಾದ್ ನಿಜಾಮರ ಆಳ್ವಿಕೆಯಿಂದ ವಿಮೋಚನೆಗೊಂಡ ಸ್ಮರಣಾರ್ಥ ಆಚರಿಸಲಾಗುವ ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ಕಲಬುರಗಿಯ ಪೊಲೀಸ್ ಪರೇಡ್‌ ಮೈದಾನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.


Click the Play button to hear this message in audio format

ಹೈದರಾಬಾದ್ ನಿಜಾಮರ ಆಳ್ವಿಕೆಯಿಂದ ವಿಮೋಚನೆಗೊಂಡ ಸ್ಮರಣಾರ್ಥ ಆಚರಿಸಲಾಗುವ ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ಕಲಬುರಗಿಯ ಪೊಲೀಸ್ ಪರೇಡ್‌ ಮೈದಾನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.

ಈ ವೇಳೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹ ಸಚಿವ ಡಾ.ಜಿ.ಪರಮೇಶ್ವರ, ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹಾದೇವಪ್ಪ, ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ, ನಗರಾಭಿವೃದ್ಧಿ ಬೈರತಿ ಸುರೇಶ್, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್.ಮುನಿಯಪ್ಪ, ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರ ಬಿ.ಆರ್. ಪಾಟೀಲ, ಶಾಸಕ ಅಲ್ಲಮಪ್ರಭು ಪಾಟೀಲ, ವಿಧಾನಪರಿಷತ್ ಸದಸ್ಯರಾದ ತಿಪ್ಪಣ್ಣಪ್ಪ ಕಮಕನೂರ, ಜಯದೇವ ಗುತ್ತೇದಾರ, ಪ್ರಾದೇಶಿಕ ಆಯುಕ್ತ ಕೃಷ್ಣ ಬಾಜಪೇಯಿ, ಈಶಾನ್ಯ ವಲಯ ಐಜಿಪಿ ಅಜಯ್ ಹಿಲೋರಿ, ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್, ಪೊಲೀಸ್ ಕಮಿಷನರ್ ಶರಣಪ್ಪ ಎಸ್.ಡಿ, ಎಸ್ಪಿ ಅಷ್ಟೂರು ಶ್ರೀನಿವಾಸಲು ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ನಂತರ ಪೊಲೀಸ್, ಅಗ್ನಿಶಾಮಕ ದಳ, ಅರಣ್ಯ ಇಲಾಖೆ, ಸೇವಾದಳ ಸೇರಿದಂತೆ 24 ವಿವಿಧ ತುಕಡಿಗಳ ಪಥಸಂಚಲನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವೀಕ್ಷಿಸಿದರು. ಇದಕ್ಕೂ ಮುನ್ನ ನಗರದ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ಪಟೇಲರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.

ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಸಿ.ಎಂ ಸಿದ್ದರಾಮಯ್ಯ, ಕಲ್ಯಾಣ ಕರ್ನಾಟಕದ ಭಾಗವಾದ ಕಲಬುರಗಿಯಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆ ನಡೆಸಲಾಗುತ್ತಿದ್ದು, ಈ ಭಾಗದ ಅಭಿವೃದ್ಧಿಗಾಗಿ ಪೂರಕ ಚರ್ಚೆ ಹಾಗೂ ತೀರ್ಮಾನಗಳನ್ನು ಕೈಗೊಳ್ಳಲಾಗುವುದು. ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ದಿಗಾಗಿ ಆಯವ್ಯಯದಲ್ಲಿ ರೂಪಿಸಲಾಗಿರುವ ಯೋಜನೆಗಳು ಹಾಗೂ ಇನ್ನಿತರ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲಾಗುವುದು. ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿನ ಜನರಿಗೆ ಉದ್ಯೋಗಾವಕಾಶಗಳ ಬಗ್ಗೆ ಹಾಗೂ ಪ್ರತ್ಯೇಕ ಸಚಿವಾಲಯ ರಚನೆ ಬಗ್ಗೆಯೂ ಚರ್ಚಿಸಲಾಗುವುದು. ನಮ್ಮ ಸರ್ಕಾರ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಯ ಪರವಾಗಿದೆ ಎಂದರು.

ಮನಮೋಹನ್ ಸಿಂಗ್ ನೇತೃತ್ವದ ಕೇಂದ್ರ ಸರ್ಕಾರದ ಅವಧಿಯಲ್ಲಿ 371 ಜೆ ಕಾನೂನು ತರಲಾಗಿದ್ದು, ಇದಕ್ಕಾಗಿ ನಮ್ಮ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ಮಾಜಿ ಮುಖ್ಯಮಂತ್ರಿ ಧರಂಸಿಂಗ್ ಅವರು ಶ್ರಮವಹಿಸಿದ್ದರು. 2013 ರಲ್ಲಿ ಈ ಕಾನೂನನ್ನು ಕರ್ನಾಟಕದಲ್ಲಿ ಜಾರಿಗೆ ತರಲು ನಮ್ಮ ಸರ್ಕಾರವೇ ಪ್ರಯತ್ನಿಸಿದ್ದು ಹೊರತು ಬಿಜೆಪಿಯವರಲ್ಲ. ವಾಜಪೇಯಿಯವರು ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಈ ಕಾನೂನನ್ನು ಜಾರಿಗೆ ತರಲು ತಿರಸ್ಕರಿಸಿತ್ತು. ಬಡವರ ಪರವಾದ ಸರ್ಕಾರ ನಮ್ಮದು. ಆದ್ದರಿಂದ ಈ ಭಾಗದ ಅಭಿವೃದ್ಧಿಗಾಗಿ 5000 ಕೋಟಿ ರೂ.ಗಳನ್ನು ನೀಡಲಾಗಿದೆ ಎಂದರು.

Read More
Next Story