Global market ready for Togari: Plan to manufacture value-added products
x

ಕಲಬುರಗಿಯ ತೊಗರಿ ಬೇಳೆ(ಸಾಂದರ್ಭಿಕ ಚಿತ್ರ)

ತೊಗರಿಗೆ ಜಾಗತಿಕ ಮಾರುಕಟ್ಟೆ ಸಜ್ಜು: ಮೌಲ್ಯವರ್ಧಿತ ಉತ್ಪನ್ನಗಳ ತಯಾರಿಕೆಗೆ ಪ್ಲಾನ್

ಸ್ಥಳೀಯವಾಗಿ ಮೌಲ್ಯವರ್ಧನೆ ಮಾಡಿ ಮಾರುಕಟ್ಟೆ ಸೃಷ್ಟಿಸಿದಲ್ಲಿ ರಾಜ್ಯದಲ್ಲಿಯೇ ಅತಿ ಹೆಚ್ಚು ಬೇಳೆ ಬೆಳೆಯುವ ಕಲಬುರಗಿ, ವಿಜಯಪುರ,ಬೀದರ್‌, ಯಾದಗಿರಿ, ರಾಯಚೂರು ಹಾಗೂ ಬಳ್ಳಾರಿ ಜಿಲ್ಲೆಗಳ ರೈತರಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.


Click the Play button to hear this message in audio format

ಕಲಬುರಗಿ ಜಿಲ್ಲೆಯಲ್ಲಿ ಬೆಳೆಯುವ ಉತ್ಕೃಷ್ಠ ತೊಗರಿ ಬಳಸಿಕೂಂಡು ಮೌಲ್ಯವರ್ಧನೆಯ ಉತ್ಪನ್ನಗಳನ್ನು ತಯಾರಿಸುವ ಮೂಲಕ ಮಾರುಕಟ್ಟೆ ಸೃಷ್ಟಿಸಿ, ರೈತರಿಗೆ ಹೆಚ್ಚಿನ ಬೆಲೆ ಒದಗಿಸಿಕೊಡಲು ವಿಶೇಷ ಕಾರ್ಯಕ್ರಮ ರೂಪಿಸಲಾಗುವುದು ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.

ಮಂಗಳವಾರ(ಜ.20) ತೊಗರಿ ಮೌಲ್ಯವರ್ಧನೆಗೆ ಬೇಕಾದ ಸಂಶೋಧನೆ, ತಾಂತ್ರಿಕ ನೆರವಿನ ವ್ಯವಸ್ಥೆ ಸೇರಿದಂತೆ ಅಗತ್ಯವಿರುವ ಉಪಕ್ರಮಗಳನ್ನು ಕೈಗೊಳ್ಳಲು ರಾಜ್ಯ ದ್ವಿದಳ ಧಾನ್ಯ ಅಭಿವೃದ್ಧಿ ಮಂಡಳಿ ನಿಗಮದ ಅಧ್ಯಕ್ಷ ಸೈಯದ್ ಮಹಮೂದ್ ಚಿಸ್ತಿ (ಸಾಹೇಬ್) ಹಾಗೂ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ಅವರು, ಯಾವುದೇ ಕೃಷಿ ಉತ್ಪನ್ನಗಳನ್ನು ಸ್ಥಳೀಯವಾಗಿ ಮೌಲ್ಯವರ್ಧನೆ ಮಾಡಿ ಮಾರುಕಟ್ಟೆ ಸೃಷ್ಟಿಸಿದಲ್ಲಿ ಮಧ್ಯವರ್ತಿಗಳ ಹಾವಳಿಯನ್ನು ತಪ್ಪಿಸಬಹುದು ಮತ್ತು ಗ್ರಾಮೀಣ ಉದ್ಯಮಶೀಲತೆಯನ್ನು ವೃದ್ಧಿಸಬಹುದು ಎಂದು ಹೇಳಿದರು.

ತೊಗರಿ ಕಣಜ ಎಂದೇ ಹೆಸರುವಾಸಿಯಾಗಿರುವ ಕಲಬುರಗಿ ಜಿಲ್ಲೆಯಲ್ಲಿ ಬೆಳೆಯುವ ತೊಗರಿಯು ವಿಶಿಷ್ಠ ರುಚಿ, ವಿಭಿನ್ನ ಪರಿಮಳ ಮತ್ತು ದೀರ್ಘಕಾಲ ಬಾಳಿಕೆ ಬರುವ ಉತ್ತಮ ಗುಣಮಟ್ಟದ ಕಾರಣದಿಂದಾಗಿ ಜಿಐ ಟ್ಯಾಗ್‌ ಪಡೆದು ಜಾಗತಿಕವಾಗಿ ತನ್ನದೇ ಆದ ಸ್ಥಾನ ಮತ್ತು ಹೆಗ್ಗುರುತನ್ನು ಪಡೆದಿದೆ. ಇದಕ್ಕಾಗಿ ಸ್ಥಳೀಯವಾಗಿ ಮೌಲ್ಯವರ್ಧನೆ ಮಾಡಬೇಕು ಎಂದರು.

ಆರು ಜಿಲ್ಲೆಗಳಿಗೆ ಅನುಕೂಲ

ಸ್ಥಳೀಯವಾಗಿ ಮೌಲ್ಯವರ್ಧನೆ ಮಾಡಿ ಮಾರುಕಟ್ಟೆ ಸೃಷ್ಟಿಸಿದಲ್ಲಿ ರಾಜ್ಯದಲ್ಲಿಯೇ ಅತಿ ಹೆಚ್ಚು ಬೇಳೆ ಬೆಳೆಯುವ ಕಲಬುರಗಿ, ವಿಜಯಪುರ,ಬೀದರ್‌, ಯಾದಗಿರಿ, ರಾಯಚೂರು ಹಾಗೂ ಬಳ್ಳಾರಿ ಜಿಲ್ಲೆಗಳ ಸಾವಿರಾರು ರೈತರಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.

Read More
Next Story