
'ಮಠʼ ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ
ಗುರುಪ್ರಸಾದ್ ಅವರ ನಿರ್ದೇಶಿಸಿದ್ದ ಸಿನಿಮಾಗಳು ಇತೀಚೆಗೆ ಸೋಲು ಕಂಡಿದ್ದವು. ಸಿನಿಮಾ ನಿರ್ಮಾಣಕ್ಕಾಗಿ ಸಾಕಷ್ಟು ಸಾಲ ಮಾಡಿಕೊಂಡಿದ್ದರು. ಸಾಲ ತೀರಿಸಲಾಗದೇ ಆತ್ಮಹತ್ಯೆಗೆ ಶರಣಾಗಿರಬಹುದು ಎಂದು ಮೂಲಗಳು ತಿಳಿಸಿವೆ.
ಮಠ, ಎದ್ದೇಳು ಮಂಜುನಾಥ ಚಿತ್ರದ ಖ್ಯಾತ ನಿರ್ದೇಶಕ ಗುರುಪ್ರಸಾದ್(50) ಅವರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ.
ನೆಲಮಂಗಲ ಸಮೀಪದ ಮಾದನಾಯಕಹಳ್ಳಿಯ ಅಪಾರ್ಟ್ಮೆಂಟ್ನ ಅವರ ಫ್ಲ್ಯಾಟ್‌ನಲ್ಲಿ ಗುರುಪ್ರಸಾದ್ ಅವರ ಮೃತದೇಹ ಭಾನುವಾರ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಆತ್ಮಹತ್ಯೆಗೆ ಸಾಲಬಾಧೆ ಕಾರಣ ಇರಬಹುದು ಎಂದು ಹೇಳಲಾಗಿದೆ.
ಗುರುಪ್ರಸಾದ್ ಅವರ ನಿರ್ದೇಶಿಸಿದ್ದ ಸಿನಿಮಾಗಳು ಇತೀಚೆಗೆ ಸೋಲು ಕಂಡಿದ್ದವು. ಸಿನಿಮಾ ನಿರ್ಮಾಣಕ್ಕಾಗಿ ಸಾಕಷ್ಟು ಸಾಲ ಮಾಡಿಕೊಂಡಿದ್ದರು. ಸಾಲ ತೀರಿಸಲಾಗದೇ ಆತ್ಮಹತ್ಯೆಗೆ ಶರಣಾಗಿರಬಹುದು ಎಂದು ಮೂಲಗಳು ತಿಳಿಸಿವೆ. ಗುರುಪ್ರಸಾದ್ ಅವರ ಇತ್ತೀಚಿನ ಸಿನಿಮಾ ‘ರಂಗನಾಯಕ’ ಹೀನಾಯ ಸೋಲು ಕಂಡಿತ್ತು. ಇನ್ನು ಕೆಲ ತಿಂಗಳ ಹಿಂದೆಯೇ ಗುರುಪ್ರಸಾದ್ ಅವರು ಎರಡನೇ ಮದುವೆ ಸಹ ಆಗಿದ್ದರು ಎಂದು ತಿಳಿದುಬಂದಿದೆ. ಈಗ ಏಕಾಏಕಿ ನೇಣಿಗೆ ಶರಣಾಗಿರುವ ಕುರಿತು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.
ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕನಹಳ್ಳಿ ಬಳಿಯ ಟಾಟಾ ನ್ಯೂ ಹಾವೆಲ್ ಅಪಾರ್ಟ್ಮೆಂಟ್ ನಲ್ಲಿ ಕಳೆದ ಎಂಟು ತಿಂಗಳಿಂದ ಗುರುಪ್ರಸಾದ್ ಅವರು ವಾಸವಿದ್ದರು. ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ಪರಿಶೀಲನೆ ನಡೆಸಿದರು. ಘಟನೆ ಕುರಿತು ಇನ್ನಷ್ಟೇ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.