ಕನ್ನಡ ಕಿರುತೆರೆ ನಿರ್ದೇಶಕ ವಿನೋದ್ ದೊಂಡಾಲೆ ಆತ್ಮಹತ್ಯೆಗೆ ಶರಣು
x

ಕನ್ನಡ ಕಿರುತೆರೆ ನಿರ್ದೇಶಕ ವಿನೋದ್ ದೊಂಡಾಲೆ ಆತ್ಮಹತ್ಯೆಗೆ ಶರಣು


ಕನ್ನಡ ಕಿರುತೆರೆಯ ಖ್ಯಾತ ನಿರ್ದೇಶಕ ವಿನೋದ್ ದೊಂಡಾಲೆ ನಗರಬಾವಿಯಲ್ಲಿರುವ ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ʻಕರಿಮಣಿʼ, ʻಶಾಂತಂ ಪಾಪಂʼ ಸೇರಿದಂತೆ ಹಲವು ಧಾರವಾಹಿಗಳಿಗೆ ವಿನೋದ್ ನಿರ್ದೇಶನ ಮಾಡಿದ್ದರು.

ಕಿರುತೆರೆಯಿಂದ ಸಿನಿಮಾ ರಂಗಕ್ಕೂ ಎಂಟ್ರಿ ಕೊಟ್ಟಿದ್ದ ಇವರು ಸದ್ಯ ನಿನಾಸಮ್ ಸತೀಶ್ ನಟನೆಯ ʻಅಶೋಕ ಬ್ಲೇಡ್ʼ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದರು. ಈಗಾಗಲೇ ಸಿನಿಮಾ ಶೇಕಡಾ 90ರಷ್ಟು ಚಿತ್ರೀಕರಣ ಮುಗಿಸಿದೆ. ಮುಂದಿನ ಹಂತದ ಚಿತ್ರೀಕರಣಕ್ಕೂ ವಿನೋದ್ ಸಿದ್ಧತೆ ಮಾಡಿಕೊಂಡಿದ್ದರು. ನಿನ್ನೆಯಷ್ಟೇ ಶೂಟಿಂಗ್ ಕುರಿತಂತೆ ನೀನಾಸಂ ಸತೀಶ್ ಜೊತೆ ಚರ್ಚೆ ಮಾಡಿದ್ದರು. ಮುಂದಿನ ವಾರದಿಂದ ಚಿತ್ರೀಕರಣ ಶುರು ಮಾಡಬೇಕಿತ್ತು. ಕಳೆದ ಎರಡು ವರ್ಷಗಳಿಂದಲೂ ಚಿತ್ರದ ಶೂಟಿಂಗ್ ಕುಂಟುತ್ತಲೇ ಸಾಗಿತ್ತು. ನಿರ್ಮಾಪಕರಾಗಿದ್ದರಿಂದ ಸಾಲದ ಸುಳಿಗೆ ಸಿಲುಕಿದ್ದರಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ವಿನೋದ್ ವಿ ದೋಂಡಾಲೆ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ನಿರ್ದೇಶಕ. ಪಿ.ಶೇಷಾದ್ರಿ, ಟಿ.ಎನ್, ಸೀತಾರಾಂ ಅವರ ಜೊತೆ ಸಿನಿಮಾ ಮತ್ತು ಧಾರಾವಾಹಿಗಳಲ್ಲಿ ಸಂಚಿಕೆ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ. ನಾಗರಬಾವಿಯಲ್ಲಿ ತಮ್ಮ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸದ್ಯ ವಿಕ್ಟೊರಿಯಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆದಿದೆ. ಅತಿಥಿ, ಬೇರು, ತುತ್ತೂರಿ, ವಿಮುಕ್ತಿ ಸೇರಿದಂತೆ ಹಲವು ಚಿತ್ರಗಳಲ್ಲಿ ವಿನೋದ್ ಕೆಲಸ ಮಾಡಿದ್ದರು.

Read More
Next Story