Second PUC practical exam schedule announced; Exams to begin from Jan. 27
x

ಸಾಂದರ್ಭಿಕ ಚಿತ್ರ

ದ್ವಿತೀಯ ಪಿಯುಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟ: ಜ.27 ರಿಂದಲೇ ಪ್ರಾಕ್ಟಿಕಲ್‌ ಪರೀಕ್ಷೆ

ಪರೀಕ್ಷಾ ಕೇಂದ್ರಗಳು ಮತ್ತು ಸಮಯದ ಬಗ್ಗೆ ಮಾಹಿತಿ ಪಡೆಯಲು ವಿದ್ಯಾರ್ಥಿಗಳು ಕಾಲೇಜುಗಳಿಂದ ನೇರವಾಗಿ ವಿವರವಾದ ವೇಳಾಪಟ್ಟಿಯನ್ನು ಪಡೆಯಬಹುದಾಗಿದೆ ಎಂದು ಪರೀಕ್ಷಾ ಮಂಡಳಿ ತಿಳಿಸಿದೆ.


Click the Play button to hear this message in audio format

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ 2026ನೇ ಸಾಲಿನ ಪ್ರಯೋಗಿಕ ಪರೀಕ್ಷೆಗಳ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಜನವರಿ 27 ರಿಂದ ಪ್ರಾರಂಭವಾಗಿ ಫೆಬ್ರವರಿ 2 ರವರೆಗೆ ನಡೆಯಲಿದೆ ಎಂದು ಕೆಎಸ್ಇಎಬಿ ಅಧಿಕೃತ ಸುತ್ತೋಲೆ ಹೊರಡಿಸಿದೆ.

ಈ ಕುರಿತು ಸೋಮವಾರ(ಜ.5) ಪ್ರಕಟಣೆ ಹೊರಡಿಸಿರುವ ಇಲಾಖೆ, ವಿದ್ಯಾರ್ಥಿಗಳು 2026 ರ ಕರ್ನಾಟಕ ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಯ ವೇಳಾಪಟ್ಟಿಯನ್ನು ಮಂಡಳಿಯ ಅಧಿಕೃತ ವೆಬ್‌ಸೈಟ್ kseab.karnataka.gov.in ನಿಂದ ಡೌನ್‌ಲೋಡ್ ಮಾಡಿಕೊಳ್ಳಬಹುದು. ಹೆಚ್ಚುವರಿಯಾಗಿ, ಪರೀಕ್ಷಾ ಕೇಂದ್ರಗಳು ಮತ್ತು ಸಮಯದ ಬಗ್ಗೆ ವಿದ್ಯಾರ್ಥಿಗಳು ಕಾಲೇಜುಗಳಿಂದ ನೇರವಾಗಿ ವಿವರವಾದ ವೇಳಾಪಟ್ಟಿಯನ್ನು ಪಡೆಯಬಹುದಾಗಿದೆ ಎಂದು ತಿಳಿಸಿದೆ.

ಮುಖ್ಯ ಪರೀಕ್ಷೆ ವೇಳಾಪಟ್ಟಿ

ಪ್ರಾಯೋಗಿಕ ಪರೀಕ್ಷೆಗಳು ಪೂರ್ಣಗೊಂಡ ನಂತರ, ದ್ವಿತೀಯ ಪಿಯುಸಿ ಮುಖ್ಯ ಪರೀಕ್ಷೆಗಳು 2026 ಫೆಬ್ರವರಿ 28 ರಿಂದ ಮಾರ್ಚ್ 17 ರವರೆಗೆ ನಡೆಯಲಿವೆ. ನ್ಯಾಯಸಮ್ಮತತೆ ಮತ್ತು ಪಾರದರ್ಶಕತೆಯನ್ನು ಖಚಿತಪಡಿಸಿಕೊಳ್ಳಲು ಈ ಪರೀಕ್ಷೆಗಳನ್ನು ಕಟ್ಟುನಿಟ್ಟಿನ ಮೇಲ್ವಿಚಾರಣೆಯಲ್ಲಿ ನಡೆಸಲಾಗುವುದು ಎಂದು ಕೆಎಸ್ಇಎಬಿ ತಿಳಿಸಿದೆ.

ಜಿಲ್ಲಾ ಸಮಿತಿ ರಚನೆ

ಪ್ರಯೋಗಿಕ ಪರೀಕ್ಷೆಗಳನ್ನು ಪರಿಣಾಮಕಾರಿಯಾಗಿ ಆಯೋಜಿಸಲು, ಕೆಎಸ್ಇಎಬಿ ಕಟ್ಟುನಿಟ್ಟಾದ ಕಾರ್ಯವಿಧಾನ ಅನುಸರಿಸುತ್ತಿದೆ. ಪರೀಕ್ಷೆಗಳ ಮೇಲ್ವಿಚಾರಣೆಗಾಗಿ ಪ್ರತಿ ಜಿಲ್ಲೆಯಲ್ಲಿ ಒಂದು ಸಮಿತಿಯನ್ನು ರಚಿಸಲಾಗಿದ್ದು, ಸಮಿತಿಯು ಆಯಾ ವಿಜ್ಞಾನ ವಿಷಯದ ಒಬ್ಬ ಪ್ರಾಂಶುಪಾಲರನ್ನು ಸಂಯೋಜಕರಾಗಿ ಒಳಗೊಂಡಿರುತ್ತದೆ. ಪ್ರತಿ ಪ್ರಾಯೋಗಿಕ ವಿಷಯಕ್ಕೆ ಗರಿಷ್ಠ ಇಬ್ಬರು ಹಿರಿಯ ವಿಜ್ಞಾನ ಉಪನ್ಯಾಸಕರನ್ನು ಸದಸ್ಯರನ್ನಾಗಿ ನೇಮಿಸಲಾಗುತ್ತದೆ ಎಂದು ಮಾಹಿತಿ ನೀಡಿದೆ.

ಅಕ್ರಮಗಳಿಗೆ ಕಡಿವಾಣ

ಜಿಲ್ಲೆಯ ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ವೇಳಾಪಟ್ಟಿಯನ್ನು ಸಿದ್ಧಪಡಿಸುವ ಜವಾಬ್ದಾರಿ ಜಿಲ್ಲಾ ಸಮಿತಿಯದ್ದಾಗಿದ್ದು, ನಿಷ್ಪಕ್ಷಪಾತ ಧೋರಣೆ ಕಾಪಾಡಿಕೊಳ್ಳಲು ಆಂತರಿಕ ಮತ್ತು ಬಾಹ್ಯ ಪರೀಕ್ಷಕರನ್ನು ಪಾರದರ್ಶಕವಾಗಿ ನೇಮಿಸಲಾಗುವುದು. ಪ್ರಾಯೋಗಿಕ ಪರೀಕ್ಷೆಗಳ ಸಮಯದಲ್ಲಿ ಯಾವುದೇ ರೀತಿಯ ಅಕ್ರಮ ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗುವುದು. ವಿದ್ಯಾರ್ಥಿಗಳು ಸುಗಮವಾಗಿ ಮತ್ತು ನ್ಯಾಯಯುತವಾಗಿ ಪರೀಕ್ಷೆ ಬರೆಯುವುದನ್ನು ಖಚಿತಪಡಿಸಿಕೊಳ್ಳಲು ಎಲ್ಲಾ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಅನುಸರಿಸಲಾಗುತ್ತದೆ ಎಂದು ಕೆಎಸ್ಇಎಬಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

Read More
Next Story