ಕೇಂದ್ರದಿಂದ ಬರ ಪರಿಹಾರ ಕೊಡಿಸುವಂತೆ ಕೋರಿ ಕರ್ನಾಟಕದಿಂದ ಸುಪ್ರೀಂಗೆ ಮೊರೆ
x
ಸಿ.ಎಂ ಸಿದ್ದರಾಮಯ್ಯ

ಕೇಂದ್ರದಿಂದ ಬರ ಪರಿಹಾರ ಕೊಡಿಸುವಂತೆ ಕೋರಿ ಕರ್ನಾಟಕದಿಂದ ಸುಪ್ರೀಂಗೆ ಮೊರೆ

ಕರ್ನಾಟಕಕ್ಕೆ ಕೇಂದ್ರ ಸರ್ಕಾರದಿಂದ ಬರ ಪರಿಹಾರ ಕೊಡಿಸುವಂತೆ ಕೋರಿ ಕರ್ನಾಟಕ ಸರ್ಕಾರವು ಸುಪ್ರೀಂ ಕೋರ್ಟ್ ಮೊರೆ ಹೋಗಿದೆ. ಕೇಂದ್ರ ಸರ್ಕಾರದಿಂದ ಎನ್‌ಡಿಆರ್‌ಎಫ್‌ ಅಡಿ ಪರಿಹಾರ ಹಣ ನೀಡಲು ಕೇಂದ್ರಕ್ಕೆ ನಿರ್ದೇಶನ ನೀಡುವಂತೆ ಕೋರಿ ಅರ್ಜಿ ಹಾಕಲಾಗಿದೆ. ಈ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಐದು ತಿಂಗಳಾದರೂ ಕರ್ನಾಟಕಕ್ಕೆ ಕೇಂದ್ರದಿಂದ ಬರ ಪರಿಹಾರ ಬಿಡುಗಡೆ ಆಗಿಲ್ಲ. ಹೀಗಾಗಿ, ಅನಿವಾರ್ಯವಾಗಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದೇವೆ ಎಂದು ತಿಳಿಸಿದ್ದಾರೆ̤


ಕೇಂದ್ರ ಸರ್ಕಾರದ ಆರ್ಥಿಕ ನೀತಿಯ ವಿರುದ್ಧ ಕೇರಳ ಸರ್ಕಾರ ಈಚೆಗೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಇದೀಗ ಕರ್ನಾಟಕ ಸರ್ಕಾರವು ಸಹ ಅದೇ ಹಾದಿ ತುಳಿದಿದೆ.

ಕರ್ನಾಟಕಕ್ಕೆ ಕೇಂದ್ರ ಸರ್ಕಾರದಿಂದ ಬರ ಪರಿಹಾರ ಕೊಡಿಸುವಂತೆ ಕೋರಿ ಕರ್ನಾಟಕ ಸರ್ಕಾರವು ಸುಪ್ರೀಂ ಕೋರ್ಟ್ ಮೊರೆ ಹೋಗಿದೆ. ಕೇಂದ್ರ ಸರ್ಕಾರದಿಂದ ಎನ್‌ಡಿಆರ್‌ಎಫ್‌ ಅಡಿ ಪರಿಹಾರ ಹಣ ನೀಡಲು ಕೇಂದ್ರಕ್ಕೆ ನಿರ್ದೇಶನ ನೀಡುವಂತೆ ಕೋರಿ ಅರ್ಜಿ ಹಾಕಲಾಗಿದೆ.

ಈ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಐದು ತಿಂಗಳಾದರೂ ಕರ್ನಾಟಕಕ್ಕೆ ಕೇಂದ್ರದಿಂದ ಬರ ಪರಿಹಾರ ಬಿಡುಗಡೆ ಆಗಿಲ್ಲ. ಹೀಗಾಗಿ, ಅನಿವಾರ್ಯವಾಗಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದೇವೆ ಎಂದು ತಿಳಿಸಿದ್ದಾರೆ.

ಅನಿವಾರ್ಯವಾಗಿ ಕೇಂದ್ರ ಸರ್ಕಾರದ ವಿರುದ್ಧ ನಾವು ಆರ್ಟಿಕಲ್ 32ರ ಅಡಿಯಲ್ಲಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಹಾಕಿದ್ದೇವೆ. ಶನಿವಾರ (ಮಾರ್ಚ್ 23ರಂದು) ಬೆಳಿಗ್ಗೆ ಅರ್ಜಿ ಹಾಕಿದ್ದೇವೆ. ಕಾನೂನಿ ಪ್ರಕಾರ ಕರ್ನಾಟಕಕ್ಕೆ ಸಿಗಬೇಕಾದ ಬರ ಪರಿಹಾರ ಮೊತ್ತ ಸಿಗಬೇಕು ಎಂದು ಹೇಳಿದರು.

ಇನ್ನು ಸುಪ್ರೀಂ ಕೋರ್ಟ್ ಒಂದು ವಾರದ ವರೆಗೆ ರಜೆ ಇದೆ. ರಜೆ ಮುಗಿದ ಬಳಿಕ ನಮ್ಮ ಅರ್ಜಿ ವಿಚಾರಣೆಗೆ ಬರುವ ಸಾಧ್ಯತೆ ಇದೆ ಎಂದಿದ್ದಾರೆ.

Read More
Next Story