
ಸಮಾಜಕಲ್ಯಾಣ ಇಲಾಖೆ ವಿದ್ಯಾರ್ಥಿನಿಲಯದ ವಿದ್ಯಾರ್ಥಿಗಳಿಗೂ ಮೊಟ್ಟೆ, ಶೇಂಗಾ ಚಿಕ್ಕಿ ಭಾಗ್ಯ
ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ವಿದ್ಯಾರ್ಥಿಗಳಿಗೆ ಒಟ್ಟು ರೂ.11 ಕೋಟಿ ವೆಚ್ಚದಲ್ಲಿ ಮೊಟ್ಟೆಯನ್ನು ಪ್ರಸ್ತುತ ಜಾರಿಯಲ್ಲಿರುವ ಆಹಾರ ಟೆಂಡರ್ ಪ್ರಕ್ರಿಯೆ ಮೂಲಕ ಖರೀದಿಸಿ ಒದಗಿಸಲು ನಿರ್ಣಯಿಸಿದೆ.
ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಲ್ಲಿ ವ್ಯಾಸಂಗ ಮಾಡುವ ಪರಿಶಿಷ್ಟ ಜಾತಿ ಹಾಗೂ ಪಂಗಡದ ವಿದ್ಯಾರ್ಥಿಗಳ ಆರೋಗ್ಯ ಬಲವರ್ಧನೆಗಾಗಿ ಪೌಷ್ಠಿಕಾಂಶದ ಪುಡಿ, ಮೊಟ್ಟೆ ಹಾಗೂ ಶೇಂಗಾ ಚೆಕ್ಕಿಯನ್ನು ವಿತರಿಸುವ ಪ್ರಸ್ತಾವನೆಗೆ ಸಚಿವ ಸಂಪುಟ ಅನುಮೋದನೆ ನೀಡಿದೆ.
2024-24 ನೇ ಸಾಲಿನಲ್ಲಿ ಪ್ರತಿ ವಿದ್ಯಾರ್ಥಿಗೆ ಮಾಸಿಕ 100 ರೂ. ವೆಚ್ಚದಲ್ಲಿ ಪೌಷ್ಠಿಕಾಂಶದ ಪುಡಿ, ಶೇಂಗಾ ಚೆಕ್ಕಿ ಹಾಗೂ ಮೊಟ್ಟೆ ಖರೀದಿಸಿ ಒದಗಿಸಲು ಪ್ರಸ್ತಾಪಿಸಲಾಗಿತ್ತು.
ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ವಿದ್ಯಾರ್ಥಿಗಳಿಗೆ ಒಟ್ಟು ರೂ.11 ಕೋಟಿ ವೆಚ್ಚದಲ್ಲಿ ಮೊಟ್ಟೆಯನ್ನು ಪ್ರಸ್ತುತ ಜಾರಿಯಲ್ಲಿರುವ ಆಹಾರ ಟೆಂಡರ್ ಪ್ರಕ್ರಿಯೆ ಮೂಲಕ ಖರೀದಿಸಿ ಒದಗಿಸಲು ನಿರ್ಣಯಿಸಿದೆ.
ಸಮಾಜ ಕಲ್ಯಾಣ ಇಲಾಖೆಯ ವಸತಿ ಶಾಲೆ, ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಗಳು ಮತ್ತು ಕಾಲೇಜುಗಳ ವಿದ್ಯಾರ್ಥಿಗಳಿಗೆ ಮಾಸಿಕ ರೂ.100 ಗಳಲ್ಲಿ ಶೇ.25ರಷ್ಟು ವೆಚ್ಚದಲ್ಲಿ ಶೇಂಗಾ ಚಿಕ್ಕಿ ಮತ್ತು ಇನ್ನುಳಿದ ಶೇ.75ರಷ್ಟರಲ್ಲಿ ಪೌಷ್ಟಿಕಾಂಶದ ಪುಡಿಯನ್ನು ರೂ.32.95 ಕೋಟಿಗಳ ವೆಚ್ಚದಲ್ಲಿ ಖರೀದಿಸಿ, ಒದಗಿಸಲು ಅನುಮೋದಿಸಿದೆ.
ಈ ಎಲ್ಲಾ ಸಾಮಗ್ರಿಗಳನ್ನು ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮ-1999ರನ್ವಯ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಕಾರ್ಯನಿರ್ವಾಹಕ ನಿರ್ದೇಶಕರಿಗೆ ಕಂದಾಯ ವಿಭಾಗಾವಾರು ಟೆಂಡರ್ ಕರೆದು ಖರೀದಿಸಲು ಸಚಿವ ಸಂಪುಟ ಅನುಮೋದಿಸಿದೆ.