2006-10ರ ಅವಧಿಯ ಅಕ್ರಮ ಗಣಿಗಾರಿಕೆಗೆ ತನಿಖೆಗೆ ಎಸ್ಐಟಿ, ಫಾಸ್ಟ್ ಟ್ರ್ಯಾಕ್ ಕೋರ್ಟ್ ರಚನೆ: ಸಿಎಂ
x

2006-10ರ ಅವಧಿಯ ಅಕ್ರಮ ಗಣಿಗಾರಿಕೆಗೆ ತನಿಖೆಗೆ ಎಸ್ಐಟಿ, ಫಾಸ್ಟ್ ಟ್ರ್ಯಾಕ್ ಕೋರ್ಟ್ ರಚನೆ: ಸಿಎಂ

ಅಕ್ರಮ ಗಣಿಗಾರಿಕೆ ಕುರಿತು ರಚಿಸಲಾಗಿದ್ದ ಎಚ್.ಕೆ. ಪಾಟೀಲ್ ನೇತೃತ್ವದ ಸಚಿವ ಸಂಪುಟ ಉಪಸಮಿತಿಯ ಶಿಫಾರಸುಗಳ ಜಾರಿ ಕುರಿತು ಸದನಕ್ಕೆ ಮಾಹಿತಿ ನೀಡಿದ ಅವರು, ಅಕ್ರಮ ದಂಧೆಯ ಗಂಭೀರತೆಯನ್ನು ಅಂಕಿಅಂಶಗಳ ಸಮೇತ ವಿವರಿಸಿದರು.


ರಾಜ್ಯದ ಬೊಕ್ಕಸಕ್ಕೆ ಸಾವಿರಾರು ಕೋಟಿ ರೂಪಾಯಿ ನಷ್ಟ ಉಂಟುಮಾಡಿದ್ದ, 2006-10ರ ಅವಧಿಯ ಅಕ್ರಮ ಗಣಿಗಾರಿಕೆ ಪ್ರಕರಣಗಳ ತನಿಖೆಯನ್ನು ಚುರುಕುಗೊಳಿಸಲು ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಪ್ರಕರಣಗಳ ಸಮಗ್ರ ತನಿಖೆಗಾಗಿ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಲು ಹಾಗೂ ಶೀಘ್ರ ವಿಚಾರಣೆಗಾಗಿ ವಿಶೇಷ ತ್ವರಿತಗತಿ ನ್ಯಾಯಾಲಯ (ಫಾಸ್ಟ್ ಟ್ರ್ಯಾಕ್ ಕೋರ್ಟ್) ಸ್ಥಾಪಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಿಧಾನಸಭೆಯಲ್ಲಿ ಶುಕ್ರವಾರ ಘೋಷಿಸಿದರು.

ಅಕ್ರಮ ಗಣಿಗಾರಿಕೆ ಕುರಿತು ರಚಿಸಲಾಗಿದ್ದ ಎಚ್.ಕೆ. ಪಾಟೀಲ್ ನೇತೃತ್ವದ ಸಚಿವ ಸಂಪುಟ ಉಪಸಮಿತಿಯ ಶಿಫಾರಸುಗಳ ಜಾರಿ ಕುರಿತು ಸದನಕ್ಕೆ ಮಾಹಿತಿ ನೀಡಿದ ಅವರು, ಅಕ್ರಮ ದಂಧೆಯ ಗಂಭೀರತೆಯನ್ನು ಅಂಕಿಅಂಶಗಳ ಸಮೇತ ವಿವರಿಸಿದರು.

ತಾರ್ತಿಕ ಅಂತ್ಯ

"2006-10ರ ಅವಧಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಗಣಿಗಾರಿಕೆಯಿಂದ ಒಟ್ಟು 19.07 ಕೋಟಿ ಟನ್ ಕಬ್ಬಿಣದ ಅದಿರು ಅಕ್ರಮವಾಗಿ ಸಾಗಣೆಯಾಗಿದ್ದು, ಇದರಿಂದ ಸರ್ಕಾರಕ್ಕೆ ಬರೋಬ್ಬರಿ 78,245 ಕೋಟಿ ರೂಪಾಯಿ ನಷ್ಟವಾಗಿದೆ ಎಂದು ವರದಿ ಹೇಳಿದೆ. ಈ ಪ್ರಕರಣಗಳನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲು ಸರ್ಕಾರ ಬದ್ಧವಾಗಿದೆ," ಎಂದು ಸಿಎಂ ತಿಳಿಸಿದರು.

ಈ ನಿಟ್ಟಿನಲ್ಲಿ ಸರ್ಕಾರ ಕೈಗೊಂಡಿರುವ ಪ್ರಮುಖ ತೀರ್ಮಾನಗಳನ್ನು ಅವರು ಸದನದಲ್ಲಿ ಪ್ರಕಟಿಸಿದರು. ಅದರಂತೆ, ಈಗಾಗಲೇ 'ಬಿ' ರಿಪೋರ್ಟ್ ಹಾಕಿ ಮುಕ್ತಾಯಗೊಳಿಸಲಾಗಿದ್ದ 29 ಪ್ರಕರಣಗಳನ್ನು ಮರುಪರಿಶೀಲನೆಗೆ ಒಳಪಡಿಸಲು ನಿರ್ಧರಿಸಲಾಗಿದೆ.

ಹತ್ತು ವರ್ಷಗಳೇ ಕಳೆದರೂ ಕೇಂದ್ರ ತನಿಖಾ ದಳ (ಸಿಬಿಐ) ತನಿಖೆ ನಡೆಸದೆ ಉಳಿದಿರುವ ಪ್ರಕರಣಗಳ ಬಗ್ಗೆಯೂ ಸರ್ಕಾರ ಕಠಿಣ ನಿಲುವು ತಳೆದಿದೆ. "ಈ ಪ್ರಕರಣಗಳನ್ನು ಸಿಬಿಐ ತ್ವರಿತಗತಿಯಲ್ಲಿ ತನಿಖೆ ನಡೆಸಬೇಕು. ಒಂದು ವೇಳೆ ಸಿಬಿಐ ತನಿಖೆ ನಡೆಸದಿದ್ದರೆ, ಆ ಪ್ರಕರಣಗಳನ್ನು ರಾಜ್ಯಕ್ಕೆ ವಾಪಸ್ ಹಸ್ತಾಂತರಿಸಬೇಕು. ಈ ಪ್ರಕರಣಗಳನ್ನು ನಮ್ಮದೇ ಎಸ್ಐಟಿ ಮೂಲಕ ತನಿಖೆಗೆ ಒಳಪಡಿಸಲು ಅನುಮತಿ ನೀಡುವಂತೆ ಕೇಂದ್ರ ಸರ್ಕಾರವನ್ನು ಕೋರಲು ನಿರ್ಧರಿಸಲಾಗಿದೆ," ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

Read More
Next Story